ಸುದ್ದಿ ಸಂಕ್ಷೇಪ
ಎನ್. ಮಂಜುನಾಥ್ಗೆ ಪರಿಷತ್ ಟಿಕೆಟ್ ನೀಡಿ
ಶಿಗ್ಗಾಂವಿ: ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಜೊತೆಯಲ್ಲಿ ಪರಿಶಿಷ್ಟ ಜಾತಿಯ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ವಿಶೇಷ ಶ್ರಮ ವಹಿಸಿದ, ಕೆಪಿಸಿಸಿ ಎಸ್ಸಿ ವಿಭಾಗದ ಅಧ್ಯಕ್ಷ ಎನ್. ಮಂಜುನಾಥ ಅವರನ್ನು ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಿಸಬೇಕೆಂದು ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಹಾವೇರಿ ಜಿಲ್ಲಾ ಪರಿಶಿಷ್ಟ ಜಾತಿ ಜಿಲ್ಲಾಧ್ಯಕ್ಷ ಎಸ್.ಎಫ್. ಮಣಕಟ್ಟಿ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮನವಿ ಮುಖಾಂತರ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಕಳುಹಿಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋಲನ್ನುಂಡ ಮಾಜಿ ಶಾಸಕ ಎಸ್.ಎ. ಖಾದ್ರಿ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಅಥವಾ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ ಮಣಕಟ್ಟಿ, ಇದರಿಂದ ಸ್ಥಳೀಯವಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಾಢ್ಯವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ವಿವಿಧ ಘಟಕಗಳ ಪದಾಧಿಕಾರಿಗಳಾದ ಮಲ್ಲಿಕಾರ್ಜುನಗೌಡ್ರ ಪಾಟೀಲ, ಹನುಮರೆಡ್ಡಿ ನಡುವಿನಮನಿ, ಎನ್.ಸಿ. ಪಾಟೀಲ, ಸುಧೀರ ಲಮಾಣಿ, ಮಂಜುನಾಥ ತಿಮ್ಮಾಪುರ, ಡಾ ಬಸವರಾಜ ದೊಡ್ಡಮನಿ, ಭೀಮಣ್ಣ ಹೊಟ್ಟೂರ, ಪುಟ್ಟಪ್ಪ ಜಲದಿ, ಬಸವರಾಜ ಕಟ್ಟಿಮನಿ, ಶಿವಾನಂದ ಮಾದರ, ಚಂದ್ರಶೇಕರ ಮಾಣೋಜಿ, ಬಾಪುಗೌಡ್ರ ಹೊಸಗೌಡ್ರ ಉಪಸ್ಥಿತರಿದ್ದರು.
ನದಿ ತೀರದ ಜನರಿಗೆ ಸೂಚನೆ
ಹಾವೇರಿ: ತುಂಗಭದ್ರಾ ನದಿಯಲ್ಲಿ ನೀರಿನ ಪ್ರವಾಹ ಅಪಾಯದ ಮಟ್ಟ ತಲುಪಿದ್ದು, ಹಾವೇರಿ ತಾಲೂಕಿನ ತುಂಗಭದ್ರಾ ನದಿಗೆ ಪ್ರವಾಹ ಹೆಚ್ಚಾಗಿ ಬರುತ್ತಿದೆ. ಈ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಹಾವೇರಿ ತಹಸೀಲ್ದಾರ್ ಶಿವಲಿಂಗು ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ತಹಸೀಲ್ದಾರ್ ಮೊಬೈಲ್: 94490 03779ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
ಆ. 7ರಂದು ಜಿಪಂ ಸಭೆ
ಹಾವೇರಿ: ಜು. 27ರಂದು ನಡೆಯಬೇಕಿದ್ದ ಹಾವೇರಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಆಗಸ್ಟ್ 7ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷ ಶಂಕ್ರಪ್ಪ ಮಾತನವರ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ಲ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

