ಹಾವೇರಿ

ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ಬೆಳೆಯಲಿ

Published On :

ರಾಣಿಬೆನ್ನೂರು:  ವಿದ್ಯಾರ್ಥಿನಿಯರು ಸತತ ಅಧ್ಯಯನಶೀಲರಾಗಿ ಎಲ್ಲ ಕ್ಷೇತ್ರಗಳಲ್ಲಿ ತಮ್ಮದೆ ಛಾಪನ್ನು ಮೂಡಿಸುವಂಥ ಮಟ್ಟಕ್ಕೆ ಬೆಳೆದಲ್ಲಿ ಮಾತ್ರ ಸರ್ಕಾರದ ಮೀಸಲಾತಿಯಲ್ಲಿ ಸ್ಥಾನಮಾನ ಪಡೆಯಲು ಸಾಧ್ಯವೆಂದು ನಗರಸಭೆ ಮಾಜಿ ಅಧ್ಯಕ್ಷ ಬಸವರಾಜ ಎನ್. ಪಾಟೀಲ ಹೇಳಿದರು. ಇಲ್ಲಿನ ಮಾನ್ವಿ ಕಂಪನಿ ರಸ್ತೆಯಲ್ಲಿರುವ ಎಸ್‌ಜಿಎಂವಿ ಮಹಿಳಾ ಕಾಲೇಜಿನ ಸಭಾ ಭವನದಲ್ಲಿ 2013-14ನೇ ಸಾಲಿನ ವಿದ್ಯಾರ್ಥಿನಿ ಒಕ್ಕೂಟದ ಉದ್ಘಾಟನಾ ಸಮಾರಂಭ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರನ್ನು ಸ್ವಾಗತಿಸುವಿಕೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಬಿಸಿಎಂ ವಿಸ್ತರಣಾಧಿಕಾರಿ ಜಿ.ಬಿ. ಬಾರಕೇರ, ಮಹಿಳೆಯರ ಅಭಿವೃದ್ಧಿಗಾಗಿ ಮತ್ತು ಮಹಿಳಾ ಶಿಕ್ಷಣಕ್ಕಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿ, ಯೋಜನೆ ಲಾಭಕ್ಕೆ ಅನುಸರಿಸಬೇಕಾಗಿರುವ ಮಾರ್ಗಗಳ ಬಗ್ಗೆ ತಿಳಿಸಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ವೈ. ಮಂಜುನಾಥ, ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಎಸ್‌ಜಿಎಂ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಕನ್ನಡ ಉಪನ್ಯಾಸಕ ಡಿ. ಆನಂದಪ್ಪ, ಕಾರ್ಯಕ್ರಮದ ಕುರಿತು ಉಪನ್ಯಾಸ ನೀಡಿ ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಚ್. ರಾಜು, ವಿದ್ಯಾರ್ಥಿನಿಯರು ಕಲಿಕೆ ಮತ್ತು ಕೌಶಲ್ಯ ರೂಪಿಸಿಕೊಂಡು ತಮ್ಮ ಮುಂದಿನ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕೆಂದು ತಿಳಿಸಿದರು. ಕಾಲೇಜ ಆಡಳಿತ ಮಂಡಳಿಯ ಸದಸ್ಯರಾದ ಎಸ್.ಜಿ. ಹಿರೇಮಠ, ಕುಮಾರಣ್ಣ ಜಂಬಗಿ, ಉಪನ್ಯಾಸಕರಾದ ಎಸ್.ಎಂ. ಹುಬ್ಬಳ್ಳಿ, ವಿದ್ಯಾರ್ಥಿನಿ ಮುಖಂಡರಾದ ಗೌರಿ ಅಂಕಲಕೋಟಿ, ಸ್ವಪ್ನಾ ಕುಂದಾಪುರ ಹಾಗೂ ಶಿಲ್ಪಾ ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಕೇತ್ರಗಳಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ನೀಡಿ, 2013-14ನೇ ಸಾಲಿನ ವಿದ್ಯಾರ್ಥಿನಿ ಒಕ್ಕೂಟದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.