ಹಾವೇರಿ

ಹಂದಿ ಹಾವಳಿಗೆ ನಗರಸಭೆ ಕ್ರಮ

Published On :

ಹಾವೇರಿ:  ನಗರ ವ್ಯಾಪ್ತಿಯಲ್ಲಿ ಹಂದಿಗಳಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದು, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ತರಕಾರಿ ಮಾರುಕಟ್ಟೆ ಅಶ್ವಿನಿ ನಗರ ಮತ್ತು ಮಣಿಗಾರ ಓಣಿಯಲ್ಲಿ ನಗರಸಭೆ ಸಿಬ್ಬಂದಿ ಹಂದಿಗಳನ್ನು ಹಿಡಿದು ಹೊರ ಸಾಗಿಸಲಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ಒಟ್ಟು 67 ಹಂದಿಗಳನ್ನು ಹಿಡಿದು ಸಾಗಿಸಲಾಗಿದ್ದು, ಮುಂಬರುವ ದಿನಗಳಲ್ಲಿಯೂ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು ಎಂದರು. ಹಂದಿಗಳ ಮಾಲೀಕರು ತಮ್ಮ ಮಾಲ್ಕಿಯ ಹಂದಿಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ನಗರದಿಂದ 3 ಕಿ.ಮೀ. ವ್ಯಾಪ್ತಿಯ ಹೊರಗೆ ತಮ್ಮದೇ ವ್ಯವಸ್ಥೆ ಕಲ್ಪಿಸಿಕೊಂಡು ಸಾಕಿಕೊಳ್ಳಬೇಕು ಎಂಬುದಾಗಿ ಈ ಹಿಂದೆಯೇ ತಿಳಿಯಪಡಿಸಲಾಗಿತ್ತು. ನಂತರ ಕಚೇರಿಯಲ್ಲಿ ಮಾಲೀಕರೊಂದಿಗೆ ಸಭೆ ನಡೆಸಿ ನಿರ್ದೇಶನ ನೀಡಲಾಗಿತ್ತು. ಆದಾಗ್ಯೂ ಹಂದಿ ಮಾಲೀಕರು ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ್ದ ಕಾರಣ ಅನಿವಾರ್ಯವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ನಗರಸಭೆ ಅಧಿಕಾರಿಗಳಾದ ಚಂದ್ರಕಾಂತ ಗುಡ್ನವರ, ಬಸವರಾಜ ಬೊಗಳಿ, ಕೆ.ಕೆ. ಗಾವಡೆ, ವೆಂಕಟೇಶ ನಾರಾಯಣಿ, ಸಿ.ಕೆ. ಮಾರೇಗೌಡ ಮತ್ತು ರಮೇಶ ಮುಂಜೋಜಿ ಕಾರ್ಯಾಚರಣೆಯಲ್ಲಿ ಇದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.