ಹಾವೇರಿ

ಸುದ್ದಿ ಸಂಕ್ಷೇಪ

Published On :

ರೈತ ದಂಪತಿಗೆ ಸನ್ಮಾನ
ಹಾನಗಲ್ಲ:
ತಾಲೂಕು ಭಾರತೀಯ ಕೃಷಿಕ ಸಮಾಜ ಹಾಗೂ ಯುವ ಜಾಗೃತಾ ವೇದಿಕೆ ವತಿಯಿಂದ ತಾಲೂಕಿನ ರೈತರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ಹಾಗೂ ವೃದ್ಧ ರೈತ ದಂಪತಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ. 80ಕ್ಕಿಂತ ಅಂಕ ಪಡೆದ ರೈತರ ಮಕ್ಕಳು ಹಾಗೂ 80ಕ್ಕಿಂತ ಹೆಚ್ಚು ವಯಸ್ಸಾದ ರೈತ ದಂಪತಿಗಳು ಜೂ. 5ರ ಒಳಗಾಗಿ ವಿದ್ಯಾರ್ಥಿಗಳು ಅಂಕಪಟ್ಟಿ ನಕಲು ಪ್ರತಿಯೊಂದಿಗೆ ವೃದ್ಧ ದಂಪತಿಗಳು ವಯಸ್ಸಿನ ದಾಖಲಾತಿ ಮತ್ತು 2 ಭಾವಚಿತ್ರದೊಂದಿಗೆ ಎನ್.ಎಸ್. ಪಡೆಪ್ಪನವರ, ತಾಲೂಕು ಅಧ್ಯಕ್ಷರು, ತಾಲೂಕು ಭಾರತೀಯ ಕೃಷಿಕ ಸಮಾಜ, ವೀರಭದ್ರೇಶ್ವರ ದೇವಸ್ಥಾನ ಸಮೀಪ ಹಾನಗಲ್ಲ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8150863790ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ನಾಟಕ ತಂಡಗಳಿಂದ ಅರ್ಜಿ
ಹಾವೇರಿ:
ಪ್ರಸಕ್ತ ವರ್ಷ ವಾರ್ತಾ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ ಇರುವ ಬೀದಿ ನಾಟಕ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿಯೊಂದು ಬೀದಿ ನಾಟಕ ತಂಡದಲ್ಲಿ ಕನಿಷ್ಠ 10 ಜನ ಕಲಾವಿದರು ಇರಬೇಕು. ಇದರಲ್ಲಿ 2 ಜನ ಮಹಿಳಾ ಕಲಾವಿದರು ಕಡ್ಡಾಯವಾಗಿರಬೇಕು. ಬೀದಿ ನಾಟಕದ ಜೊತೆಗೆ ಸಂಗೀತವನ್ನು ಸಹ ಈ ಕಲಾವಿದರು ಪ್ರಸ್ತುತಪಡಿಸಬೇಕಾಗುತ್ತದೆ. ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಹಾಗೂ ಕಾರ್ಯಕ್ರಮಗಳನ್ನು ಈ ತಂಡಗಳು ತಮ್ಮ ಕಲೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಮುಟ್ಟಿಸಬೇಕಾಗುತ್ತದೆ. ಕಾರಣ ತಂಡಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ಯೋಜನೆಗಳ ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ತಂಡಗಳಿಗೆ ಪ್ರಾಶಸ್ತ್ಯ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ತಂಡದ ಮುಖ್ಯಸ್ಥರು ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ ಹಾವೇರಿ ಇವರಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಜೂನ್ 10ರೊಳಗೆ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ತಂಡಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಸಮಿತಿಯ ಮುಂದೆ ಹಾಜರಾಗಿ ಕಾರ್ಯಕ್ರಮ ನೀಡಬೇಕಾಗುತ್ತದೆ. ಆಯ್ಕೆಗಾಗಿ ಬರುವ ಸಂದರ್ಭದಲ್ಲಿ ಕಲಾವಿದರು ತಮ್ಮ ಸ್ವಂತ ಖರ್ಚಿನಲ್ಲಿಯೇ ಬರಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ ಹಾವೇರಿ ಇವರಿಂದ (ದೂರವಾಣಿ ಸಂಖ್ಯೆ- 08375-233092) ಮಾಹಿತಿಯನ್ನು ಪಡೆಯಬಹುದಾಗಿದೆ.
ಎಸ್ಸೆಸ್ಸೆಲ್ಸಿ: ಉತ್ತಮ ಫಲಿತಾಂಶ
ಹಾನಗಲ್ಲ:
ತಾಲೂಕಿನ ಕಾಡಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ.92.30 ರಷ್ಟಾಗಿದ್ದು, ಕುಮಾರಿ ಶ್ವೇತಾ ದೊಡ್ಡಮನಿ ಶೇ 89.29 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈ ಶಾಲೆಯ ವಿದ್ಯಾರ್ಥಿನಿ ಸುಮಾ ನಂದಿಕೊಪ್ಪ(ಶೇ. 81.42)ದ್ವಿತೀಯ, ಮಂಜುಳಾ ಶಿವಣ್ಣನವರ(ಶೇ.81.76) ತೃತೀಯ ಸ್ಥಾನ ಪಡೆದಿದ್ದಾರೆ. ಉತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿ ಹಾಗೂ ಶಾಲಾ ಸುಧಾರಣಾ ಸಮಿತಿ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.