ಸುದ್ದಿ ಸಂಕ್ಷೇಪ
ಇಂದು ರಕ್ತದಾನ ದಿನಾಚರಣೆ
ಹಾವೇರಿ: ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಜೂ. 8ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಆರೋಗ್ಯ ಭವನದಲ್ಲಿ (ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ) ಜರುಗಲಿದೆ. ಇದಕ್ಕೂ ಮುಂಚೆ ಬೆಳಗ್ಗೆ 10ಕ್ಕೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಜಾಥಾ ಹೊರಡುವುದು. ಡಿಎಚ್ಓ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಉದ್ಘಾಟಿಸಲಿದ್ದು, ಜಿಲ್ಲಾ ಶಸ್ತ್ರ ಚಿಕತ್ಸಕ ಡಾ. ಬಿ.ಎಸ್. ಮಾಶಾಳ ಅಧ್ಯಕ್ಷತೆ ವಹಿಸುವರು. ಡಿಎಚ್ಓ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಎಸ್.ಯು. ಜಮಾದಾರ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾವೇರಿ ಘಟಕ ಅಧ್ಯಕ್ಷ ಡಾ. ಎಸ್.ಪಿ. ಶಂಕ್ರಪ್ಪನವರ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ಜಿ.ಎಚ್. ಕಾಲೇಜ ಎನ್ಸಿಸಿ ಅಧಿಕಾರಿ ಪ್ರೊ. ಎಂ.ಎಸ್. ಬೆಂಡಿಗೇರಿ ಎನ್ಸಿಸಿ ಅಧಿಕಾರಿ ಪ್ರೊ. ರಮೇಶ ಎನ್. ತೆವರಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳುವರು. ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳು, ನೆಹರು ಯುವಕೇಂದ್ರ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಸರ್ಕಾರಿ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಶಿಬಿರ ಏರ್ಪಡಿಸಲಾಗುತ್ತಿದೆ ಎಂದು ರಕ್ತ ಭಂಡಾರ ಅಧಿಕಾರಿ ಡಾ. ಎನ್. ಮುರಳಿಧರ ತಿಳಿಸಿದ್ದಾರೆ.
ಲಾರಿ ಡಿಕ್ಕಿ: ಓರ್ವ ಸಾವು
ಶಿಗ್ಗಾವಿ: ಲಾರಿಯೊಂದಕ್ಕೆ ಹಿಂದಿನಿಂದ ವೇಗವಾಗಿ ಬಂದ ಇನ್ನೊಂದು ಲಾರಿ ಡಿಕ್ಕಿಯಾದ ಪರಿಣಾಮ ಲಾರಿಯ ಕ್ಲೀನರ್ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಬಂಕಾಪುರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮೇಲೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಗಂಗಾವತಿ ನಿವಾಸಿ ಸಿದ್ದಲಿಂಗಪ್ಪ ಹನುಮಂತಪ್ಪ ಕೊಕಲಿ(19) ಮೃತಪಟ್ಟ ಕ್ಲೀನರ್ ಎಂದು ಗುರುತಿಸಲಾಗಿದೆ. ಸಕ್ಕರೆ ಚೀಲ ಹೇರಿಕೊಂಡು ಮುಧೋಳದಿಂದ ಬೆಂಗಳೂರಿಗೆ ಹೋಗುತ್ತಿರುವ ಸಂದರ್ಭ ದಾರಿ ನಡುವೆ ಈ ಘಟನೆ ಸಂಭವಿಸಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಿಗೆಪ್ಪ ಅಂಗಡಿ ನಿಧನ
ಶಿಗ್ಗಾವಿ: ನಾರಾಯಣಪುರ ಪ್ರಾಥಮಿಕ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಗದಿಗೆಪ್ಪ ಅಂಗಡಿ(75) ತಾಲೂಕಿನ ಬಿಸನಳ್ಳಿ ಗ್ರಾಮದಲ್ಲಿ ಶುಕ್ರವಾರ ನಿಧನರಾದರು. ಮೃತರ ಅಂತ್ಯಕ್ರಿಯೆ 8ರ ಶನಿವಾರದಂದು ಬಿಸನಳ್ಳಿ ಗ್ರಾಮದಲ್ಲಿ ನೇರವೇರಲಿದೆ. ಮೃತರು ಹೆಂಡತಿ, ಇಬ್ಬರು ಗಂಡು, ಇಬ್ಬರು ಹೆಣ್ಣುಮಕ್ಕಳು, ಅಳಿಯಂದಿರು, ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸಂತಾಪ: ಶಾಸಕ ಬಸವರಾಜ ಬೊಮ್ಮಯಿ, ಮಾಜಿ ಸಂಸದ ಎಂ.ಸಿ. ಕುನ್ನೂರ, ವ್ಹಿ.ಎಸ್. ಹಿರೇಮಠ, ಮತ್ತಿತರರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

