ಹಾವೇರಿ

ಪ್ರಣಾಳಿಕೆ ಕಾರ್ಯಕ್ರಮ ಜಾರಿಗೊಳಿಸುವೆ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಜೂ. 8
ಗೆಲುವಿನ ಬಳಿಕ ನನ್ನ ಮೇಲೆ ಜವಾಬ್ದಾರಿ ಹೆಚ್ಚಿದೆ. ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ತಿಳಿಸಿದ ಕಾರ್ಯಕ್ರ ಮಗಳನ್ನು ಅನುಷ್ಠಾನಗೊಳಿಸಿ ಜನಪರ ಆಡಳಿತ ನೀಡಲು ಆದ್ಯತೆ ನೀಡುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಶನಿವಾರ ಬ್ಯಾಡಗಿ ಮತಕ್ಷೇತ್ರದ ಹೊಸ ಹೊನ್ನತ್ತಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಬದಲಾವಣೆ ಜಗದ ನಿಯಮ. ಇದಕ್ಕೆ ರಾಜಕಾರಣವೂ ಹೊರತಾಗಿಲ್ಲ. ರಾಜಕೀಯ ವ್ಯವಸ್ಥೆಯಲ್ಲಿ ತಂತ್ರಗಾರಿಕೆ ಬಹಳ ಮುಖ್ಯ. ಕಾಂಗ್ರೆಸ್ ಪಕ್ಷ ಸೋಲಿಸಲು ವಿಪಕ್ಷಗಳು ಮಾಡಿದ ಪ್ರಯತ್ನ ಫಲಿಸಲಿಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ವಿರೋಧ ಪಕ್ಷದ ಎಲ್ಲ ಷಡ್ಯಂತ್ರಗಳನ್ನು ವಿಫಲಗೊಳಿಸಿದ್ದೇ ನನ್ನ ಗೆಲುವಿಗೆ ಸಹಕಾರಿಯಾಯಿತು ಎಂದರು.
ಕಳೆದ 10 ವರ್ಷಗಳಿಂದ ಅಧಿಕಾರವಿಲ್ಲದೇ ಪಕ್ಷದ ಕಾರ್ಯಕರ್ತರು ಹಲವಾರು ಸಂಕಷ್ಟಗಳನ್ನು ಎದುರಿಸಿದ್ದಾರೆ. ಇದೀಗ ಪಕ್ಷ ಅಧಿಕಾರಕ್ಕೆ ಬಂದಿದೆ. ಹಗಲಿರುಳೆನ್ನದೇ ಜನರ ಸೇವೆ ಮಾಡಲು ಕಟಿ ಬದ್ಧರಾಗುವಂತೆ ಕರೆ ನೀಡಿದರು.
ಅಧಿಕಾರವಿದ್ದ ಕಡೆ ನಿಷ್ಠರಂತೆ ಮರುಳು ಮಾಡುವ ಜನರಿದ್ದಾರೆ. ಅವರ ಬಣ್ಣದ ಮಾತುಗಳಿಗೆ ಎಂದಿಗೂ ಕಿವಿಗೊಡುವುದಿಲ್ಲ. ಈ ವಿಷಯದ ಬಗ್ಗೆ ಸಾಕಷ್ಟು ಎಚ್ಚರಿಕೆಯಿಂದ ಹೆಜ್ಜೆಯಿಡಲು ತೀರ್ಮಾನಿಸಿದ್ದೇನೆ ಎಂದರು. ನಿಮ್ಮೇಲ್ಲರ ಪ್ರೀತಿ, ವಿಶ್ವಾಸದಿಂದ ಮುಂದಿನ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲ್ಲುವಂತಹ ವಾತವರಣ ಸೃಷ್ಟಿಸಿಕೊಳ್ಳಬೇಕಾಗಿದೆ. ಬ್ಯಾಡಗಿ ಕ್ಷೇತ್ರದ ಸಮಸ್ತ ಅಭಿವೃದ್ಧಿ ಜೊತೆಗೆ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿಸಬೇಕೆಂಬ ಅದಮ್ಯ ಆಸೆ ಹೊಂದಿದ್ದೇನೆ ಎಂದರು.
ಈ ಹಿಂದೆ ನಡೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಸೋಲುವ ಮೂಲಕ ಸಾಕಷ್ಟು ಅನುಭವ ಹೊಂದಿದ್ದೇನೆ. ಈ ಬಾರಿಯ ಗೆಲವು ನನಗೆ ಅತೀವ ಸಂತಸದ ಜತೆಗೆ ಜವಾಬ್ದಾರಿ ಹೆಚ್ಚಿಸಿದೆ. ತಮ್ಮ ಗೆಲವಿಗೆ ಸಹಕರಿಸಿದ ಪಕ್ಷದ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಕ್ಷೇತ್ರದ ಸಮಸ್ತ ಮತದಾರರಿಗೆ ಇದೇ ಸಂದರ್ಭ ಕೃತಜ್ಞತೆ ಸಲ್ಲಿಸಿದರು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಸಿ. ಶಿಡೇನೂರು, ತಾಲೂಕು ಘಟಕದ ಅಧ್ಯಕ್ಷ ಹುಸೇನ್ ಸಾಬ್ ದೊಡ್ಮನಿ, ಕಾಗಿನೆಲೆ ಬ್ಲಾಕ್ ಅಧ್ಯಕ್ಷ ಸುರೇಶಗೌಡ ಪಾಟೀಲ, ಕೆಪಿಸಿಸಿ ಸದಸ್ಯ ಬಸವರಾಜ ಸವಣೂರ, ಮುಖಂಡರಾದ ರಮೇಶ ಸುತ್ತಕೋಟಿ, ಗುಡ್ಡಪ್ಪ ಕಾಕೋಳ, ಅಜ್ಜಯ್ಯ ವಾಡಿಮಠ, ಬಸನಗೌಡ ಪಾಟೀಲ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.