ಹಾವೇರಿ

ಪರಿಸರ ರಕ್ಷಣೆಯೇ ನಮ್ಮ ರಕ್ಷಣೆ

Published On :

ಹಾವೇರಿ: ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ಸಂರಕ್ಷಿಸುತ್ತದೆ ಎಂದು ಕನವಳ್ಳಿ ಸರ್ಕಾರಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕ ಬಸವರಾಜ ಮಮದಾಪುರ ಹೇಳಿದರು.
ತಾಲೂಕಿನ ಯಲಗಚ್ಚ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಜರುಗಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಅತಿಥಿ ಉಪನ್ಯಾಸ ನೀಡಿದರು.
ಹಸಿರು ಮನೆ ಪರಿಣಾಮ, ಆಸಿಡ್ ಮಳೆ ಹಾಗೂ ಪೃಥ್ವಿಯ ತಾಪಮಾನ ಇತ್ತೀಚಿನ ದಿನಗಳಲ್ಲಿ ಅಧಿಕವಾಗುತ್ತಿರುವುದಕ್ಕೆ ವಿಷಾದಿಸಿದ ಅವರು, ಇಂತಹ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಇರುವ ಏಕೈಕ ಮಾರ್ಗವೆಂದರೆ ಪರಿಸರ ರಕ್ಷಣೆ ಮಾಡುವುದರೊಂದಿಗೆ ಅದನ್ನು ವಿಸ್ತರಿಸುವುದಾಗಿದೆ ಎಂದರು.
ನಮ್ಮ ಸುತ್ತಲ ಪರಿಸರವನ್ನು ಶುಚಿಯಾಗಿ ಹಾಗೂ ತಂಪಾಗಿ ಇಡುವುದು ನಮ್ಮೆಲ್ಲರ ಕರ್ತವ್ಯ. ನಾವೇ ಪರಿಸರ ರಕ್ಷಿಸದೇ ಹೋದರೆ, ಮುಂದೆ ಹಲವಾರು ಭೀಕರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಹೆಚ್ಚಾಗಿ ಗಿಡ-ಮರಗಳನ್ನು ಬೆಳೆಸಿ ಪರಿಸರ ಸ್ನೇಹಿಗಳಾಗಿ ಬಾಳೋಣ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಾಲೆ ಮುಖ್ಯೋಪಾಧ್ಯಾಯ ಎಸ್.ವಿ. ಅಜಗೊಂಡ್ರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಲುಮರದ ತಿಮ್ಮಕ್ಕ, ಸುಂದರಲಾಲ್ ಬಹುಗುಣ ಅವರು ತೋರಿದ ಪರಿಸರ ಪ್ರೇಮವನ್ನು ನಮ್ಮ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ನೆಲ, ಜಲ, ಗಾಳಿ, ಪ್ರಕೃತಿ ನಮಗೆ ಕೊಟ್ಟಿರುವ ಅಮೂಲ್ಯ ಸಂಪನ್ಮೂಲಗಳಾಗಿದ್ದು, ಇವುಗಳನ್ನು ಉಳಿಸುವುದರ ಜತೆಗೆ ನಿರ್ಮಲ ಪರಿಸರ ಬೆಳೆಸಲು ಕರೆ ನೀಡಿದರು. ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಮುಖಪ್ಪ ದೇಸಾಯಿ, ಸದಸ್ಯರಾದ ಆಜಾದ್ ಮುಲ್ಲಾ ಹಾಗೂ ವಿರೂಪಾಕ್ಷಪ್ಪ ಪೂಜಾರ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಶಿಕ್ಷಕ ಪಿ.ಸಿ. ಲಮಾಣಿ ಸ್ವಾಗತಿಸಿದರು. ಎಂ.ಪಿ. ಗಡ್ಡದ ನಿರೂಪಿಸಿದರು. ಕೆ.ಸಿ. ಕೋರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.