ಫಲಾನುಭವಿಗಳಿಗೆ ಶಾಸಕ ಮನೋಹರ ಚೆಕ್ ವಿತರಣೆ
ಹಾನಗಲ್ಲ: ಮಹಿಳೆಯರು ಸ್ವಾಲಂಬಿಗಳಾಗಿ ಬದುಕಲು ಸ್ವ-ಸಹಾಯ ಸಂಘಗಳಿಗೆ ರು. 5ರಿಂದ 20 ಸಾವಿರ ವರೆಗೆ ನೀಡಿ ಬಡ ಕುಟುಂಬಗಳಿಗೆ ಆಧಾರವಾದ ಕಾಂಗ್ರೆಸ್ ಸರ್ಕಾರ 2003ರಲ್ಲೇ ಈ ಯೋಜನೆಯನ್ನು ಜಾರಿಗೆ ತಂದಿತು ಎಂದು ಶಾಸಕ ಮನೋಹರ ತಹಸೀಲ್ದಾರ್ ಹೇಳಿದರು. ಇಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಸರ್ಕಾರದ ಸ್ತ್ರೀ ಶಕ್ತಿ ಯೋಜನೆಯಲ್ಲಿ ಆದಾಯೋತ್ಪನ್ನ ಚಟುವಟಿಕೆಯಲ್ಲಿ ತೊಡಗಿರುವ ಹಾಗೂ ಅಧಿಕ ಉಳಿತಾಯ ಮಾಡಿದ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು. ಸ್ವ-ಸಹಾಯ ಸಂಘಗಳ ಮೂಲಕ ಸಾಲ ಪಡೆದು ಟೈಲರಿಂಗ್, ಗುಡಿಕೈಗಾರಿಕೆ ಯಂತಹ ಉದ್ಯೋಗದಲ್ಲಿ ತೊಡಗಿ ಆರ್ಥಿಕವಾಗಿ ಸಬಲರಾಗಬೇಕು ಎಂದರು. ಜಿಪಂ ಸದಸ್ಯ ಮಹದೇವಪ್ಪ ಬಾಗಸರ, ತಾಪಂ ಸದಸ್ಯರಾದ ಮಧು ಪಾಣಿಗಟ್ಟಿ, ಕಲವೀರಪ್ಪ ಪವಾಡಿ, ವಿಜಯಾ ಹಿರೇಮಠ, ನಾಗಪ್ಪ ಸವದತ್ತಿ, ಎಂ.ಆರ್. ಗುತ್ತಲ, ಆರ್.ಎಸ್. ಪಾಟೀಲ, ಎನ್.ಎಸ್. ಪಡೆಪ್ಪನವರ, ಎಂ.ಎಂ. ಮುಲ್ಲಾ, ಆರ್.ಸಿ. ಹಿರೇಮಠ, ಮಲ್ಲಿಕಾರ್ಜುನ ಕಳ್ಳಿ, ಪ್ರಶಾಂತ ಗೊಂದಿ ಮುಂತಾದವರು ಇದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಆರ್. ಶೆಟ್ಟರ್ ಸ್ವಾಗತಿಸಿದರು. ಶಿವಲೀಲಾ ಕ್ಯಾಡಿ ಕಾರ್ಯಕ್ರಮ ನಿರೂಪಿಸಿದರು.
ಲಾರಿ ಡಿಕ್ಕಿ: ಸವಾರ ಸಾವು
ಮುಂಡಗೋಡ: ಲಾರಿ ಬಡಿದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕಾವಲಕೊಪ್ಪ ಗ್ರಾಮದ ಬಳಿ ಸೋಮವಾರ ಸಂಭವಿಸಿದೆ. ಹಾವೇರಿ ಜಿಲ್ಲೆ ಹೊಸೂರ ತಾಂಡಾದ ಮಲ್ಲೇಶಿ ಲಕ್ಮಪ್ಪ ಲಮಾಣಿ (30) ಸಾವನ್ನಪ್ಪಿದ ವ್ಯಕ್ತಿ. ಬೈಕ್ ಸಹ ಸವಾರ ಯಲ್ಲಪ್ಪ ರಾಮಪ್ಪ ಲಮಾಣಿ ತೀವ್ರ ಗಾಯಗೊಂಡು ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾವೇರಿ: ಟಿಕೆಟ್ಕಾಯ್ದಿರಿಸುವ ಸೌಲಭ್ಯ
ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗದಲ್ಲಿ ಪ್ರಯಾಣಿಕರಿಗೆ ಮುಂಗಡ ಆಸನಗಳನ್ನು ಕಾಯ್ದಿರಿಸಲು ಸಂಸ್ಥೆಯು ಅವತಾರ ಕೌಂಟರ್ಗಳನ್ನು ಹಿರೇಕೆರೂರು, ಬ್ಯಾಡಗಿ ಮತ್ತು ಸವಣೂರು ಬಸ್ ನಿಲ್ದಾಣಗಳಲ್ಲಿ ನೂತನವಾಗಿ ಆರಂಭಿಸಲಾಗಿದೆ. ಪ್ರಯಾಣಿಕರು ಆನ್ಲೈನ್ ಮುಖಾಂತರ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಂಡು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ವಿಭಾಗೀಯ ನಿಯಂತ್ರಣಾಧಿಕಾರಿ ಎನ್. ಸಂಗಪ್ಪ ವಿನಂತಿಸಿದ್ದಾರೆ.
ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಹಾವೇರಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2013 ಕಾರ್ಯಕ್ರಮ ಜೂನ್ 12ರ ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ. ಬೆಳಗ್ಗೆ 9.30ಕ್ಕೆ ನಗರದ ಹುತಾತ್ಮ ಮೈಲಾರ ಮಹಾದೇವ ಸರ್ಕಲ್ನಲ್ಲಿ ಮಕ್ಕಳ ಜಾಥಾಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶ ಶ್ರೀಪಾದ ಎನ್. ಚಾಲನೆ ನೀಡುವರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರಾಮಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹೆಚ್.ಪಿ. ಸಂದೇಶ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಅಧ್ಯಕ್ಷ ಪಾಂಡುರಂಗ ನಾಯಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಎಸ್. ಪಾಟೀಲ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ಲ, ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಸಿ.ಸಿ. ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಕೊಡ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಚನ್ನಮ್ಮ ಹೊಳಿಹೊಸುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ, ಐಡಿಎಆರ್ವೈ ಸ್ವಯಂ ಸಂಸ್ಥೆ ಅಧ್ಯಕ್ಷೆ ಪರಿಮಳಾ ಜೈನ್ ಹಾಗೂ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಕುಂದಾಪುರ ಅವರು ಪಾಲ್ಗೊಳ್ಳುವರು.
14ರಂದು ಸಾಮಾನ್ಯ ಸಭೆ
ಹಾವೇರಿ: ಹಾವೇರಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಜೂನ್ 14ರ ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷ ಶಂಕ್ರಪ್ಪ ಮಾತನವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ಲ ತಿಳಿಸಿದ್ದಾರೆ.
ಬಸ್ ಪಾಸ್ ವಿತರಣೆ
ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗದಿಂದ 2013-14ನೇ ಸಾಲಿಗೆ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ಗಳನ್ನು ವಿತರಿಸಲು, ಮೊದಲ ಹಂತವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಜೂನ್ರಿಂದ ಸಂಬಂಧ ಪಟ್ಟ ಶೈಕ್ಷಣಿಕ ಸಂಸ್ಥೆಯ ಮೂಲಕ ವಿತರಿಸಲು ಕ್ರಮ ಕೈಕೊಳ್ಳಲಾಗಿದೆಯೆಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ನಿಗದಿತ ಶುಲ್ಕ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗೆ ಸಲ್ಲಿಸಿ ಬಸ್ ಪಾಸ್ಗಳನ್ನು ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಶೈಕ್ಷಣಿಕ ಸಂಸ್ಥೆಯಿಂದ ಅವರ ವಾಸಸ್ಥಳಕ್ಕೆ 60 ಕಿಮೀ ಗರಿಷ್ಠ ಅಂತವಿರುವ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆಂದು ಅವರು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

