ಹಾವೇರಿ

ಡೆಂಘೀ ನಿಯಂತ್ರಿಸಲು ವಿಫಲ: ಪ್ರತಿಭಟನೆ

Published On :

ಹಾವೇರಿ: ಡೆಂಘೀ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು, ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಡೆಂಘೀಯಿಂದಾಗಿ ಜಿಲ್ಲೆಯಲ್ಲಿನ ಮಕ್ಕಳು ಸಾವನ್ನಪ್ಪಿದ್ದರೂ, ಶ್ರೀಸಾಮಾನ್ಯರನ್ನು ಬಚಾವ್ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದರಿಂದಾಗಿ ಜಿಲ್ಲೆಯ ಜನ ಜ್ವರ ಕಾಣಿಸಿಕೊಂಡರೆ ಸಾಕು ಬೆಚ್ಚಿಬೀಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶ್ರೀಸಾಮಾನ್ಯರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಜಯ ಕರ್ನಾಟಕ ಸಂಘಟನೆ  ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.