ಜಾಗೃತಿಯಿಂದ ಬಾಲ ಕಾರ್ಮಿಕ ಪದ್ಧತಿ ನಿವಾರಣೆ: ಅಸೋದೆ
ರಾಣಿಬೆನ್ನೂರು: ಬಾಲ ಕಾರ್ಮಿಕರನ್ನು ದುಡಿಸಿಕೊಂಡಲ್ಲಿ ನ್ಯಾಯಾಲಯ ವಿಧಿಸುವ ಶಿಕ್ಷೆ ಮತ್ತು ದಂಡದ ಕುರಿತು ಅರಿವು ಮೂಡಿಸಿದರೆ ಬಾಲಕಾರ್ಮಿಕ ಪದ್ಧತಿ ನಿಯಂತ್ರಣ ಸಾಧ್ಯ ಎಂದು 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಬಿ. ಅಸೋದೆ ಹೇಳಿದರು.
ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ತಾಲೂಕು ಆಡಳಿತ, ತಾಪಂ, ಕಾರ್ಮಿಕ ಇಲಾಖೆ, ಕೃಷಿ ಅಭಿವೃದ್ಧಿ ಸ್ವಯಂಸೇವಾ ಸಂಸ್ಥೆ ವಿನಯ್ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ರಾಣಿಬೆನ್ನೂರು ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ನಿಮಿತ್ತ ಇಲ್ಲಿನ ತಾಪಂ ಸಭಾ ಭವನದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ನೆರವು ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದಿಂದ ವಂಚಿತರಾದ ಹಳ್ಳಿಯಲ್ಲಿನ ಬಡವರ ಮಕ್ಕಳು ಬಾಲಕಾರ್ಮಿಕರಾಗುತ್ತಿದ್ದಾರೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಗ್ರಾಮಾಂತರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬಾಲಕಾರ್ಮಿಕರನ್ನು ಗುರುತಿಸಿ ಅವರ ತಂದೆ-ತಾಯಿ ಹಾಗೂ ದುಡಿಸಿಕೂಳ್ಳುತ್ತಿರುವ ಮಾಲೀಕರಿಗೆ ಕಾನೂನಿನ ಅರಿವು ಮೂಡಿಸಬೇಕು ಎಂದರು.
ನ್ಯಾಯವಾದಿ ಅನುಪಮ ಕಣವಿ, ಬಾಲ ಕಾರ್ಮಿಕರ ಹಕ್ಕುಗಳು ಹಾಗೂ ರಕ್ಷಣೆ ಕುರಿತು ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷೆ ಶಾರದಾ ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಏಕಾಂತ ಮುದಿಗೌಡರ, ನ್ಯಾಯಾಧೀಶ ಬಾಲಪ್ಪ ಅಣ್ಣಪ್ಪ ಜರಗು, ತಹಸೀಲ್ದಾರ್ ಕೆ.ಎಚ್. ಶಿವಕುಮಾರ, ತಾಪಂ ಇಓ ಡಾ. ಬಸವರಾಜಪ್ಪ, ಅರುಣೋದಯ ಸಂಸ್ಥೆಯ ಕಾರ್ಯದರ್ಶಿ ಹೊನ್ನಮ್ಮ ಚಂದಾಪುರ, ವಿನಯ್ ಕಾನ್ವೆಂಟ್ ಶಾಲೆಯ ಮಹೇಶ್ವರಗೌಡ ಪಾಟೀಲ, ಕಾರ್ಮಿಕ ನಿರೀಕ್ಷಕ ರಮೇಶ ಸಿಂದಗಿ ಇದ್ದರು.
ಕಾರ್ಯಕ್ರಮದ ನಿಮಿತ್ತ ನಗರದ ಕೆಇಬಿ ಗಣೇಶ ದೇವಸ್ದಾನದಿಂದ ಪ್ರಮುಖ ಬೀದಿಗಳಲ್ಲಿ ಬಾಲಕಾರ್ಮಿಕ ಶಾಲೆಯ ಮಕ್ಕಳು ಜಾಗೃತಿ ಜಾಥಾ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

