ಹಾವೇರಿ

ಹಳವ ತರ್ಲಘಟ್ಟದಲ್ಲಿ ನೀರಿಗಾಗಿ ಪರದಾಟ

Published On :

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಜೂ. 12
ವಿದ್ಯುತ್ ಪರಿವರ್ತಕ (ಟಿಸಿ) ಸುಟ್ಟಿದ್ದು, ಪಂಚಾಯಿತಿ ಮತ್ತು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಕುನ್ನೂರ ಗ್ರಾಪಂ ವ್ಯಾಪ್ತಿಯ ಹಳವ ತರ್ಲಘಟ್ಟ ಗ್ರಾಮಸ್ಥರು ಕುಡಿವ ನೀರಿಗಾಗಿ ಪರಿತಪಿಸುವಂತಾಗಿದ್ದು, ಬೇರೆ ಬೇರೆ ಕಡೆಯ ನೀರು ತಂದು ಕುಡಿಯುವದರಿಂದ ವಿವಿಧ ತರಹದ ಕಾಯಿಲೆಗೆ ತುತ್ತಾಗುವಂತಹ ಸ್ಥಿತಿ ನಿರ್ಮಾಣವಾಗಿದೆ.
ನೀರಿನ ಸಮಸ್ಯೆ ಕುರಿತು ಗ್ರಾಮ ಪಂಚಾಯಿತಿಯವರಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹರಡುತ್ತಿರುವ ಡೆಂಘೀ ಹಾಗೂ ಮಲೇರಿಯಾ, ಚಿಕೂನ್ ಗುನ್ಯ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದರೂ ಕುಡಿವ ನೀರಿನ ವ್ಯವಸ್ಥೆ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಹಳವ ತರ್ಲಘಟ್ಟ ಗ್ರಾಮದಲ್ಲಿ ಕುಡಿವ ನೀರಿಗಾಗಿ ಎರಡು ಕೊಳವೆಬಾವಿಗಳಿದ್ದು,  ಅಂತರ್ಜಲ ಮಟ್ಟ ಕುಸಿದಿದ್ದರಿಂದ ಒಂದು ಕೊಳವೆ ಬಾವಿ ಬಂದಾಗಿದೆ. ಇನ್ನೊಂದು ಕೊಳವೆ ಬಾವಿ ಸಣ್ಣ ನೀರಾವರಿ ವ್ಯವಸ್ಥೆ ಮಾಡಿದೆ. ಆದರೆ, ಅದು ಕೂಡಾ ಸಾಕಷ್ಟು ದಿನಗಳು ಗತಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದ್ದಾರೆ. ಕುನ್ನೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ ಔಂದಕರ ಅವರನ್ನು ಕೇಳದರೆ, ಹೆಸ್ಕಾಂ ಅಧಿಕಾರಿಗಳಿಗೆ ಹೇಳಿದ್ದು ಇನ್ನು ಎರಡು ದಿನಗಳು ಬೇಕಾಗಿದೆ. ನಂತರ ವಿದ್ಯುತ್ ಪರಿವರ್ತಕ(ಟಿಸಿ)ವನ್ನು ಜೋಡಿಸಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಈವರೆಗೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ದೂರಿದ್ದಾರೆ.
ಹಳವ ತರ್ಲಘಟ್ಟ ಗ್ರಾಮಕ್ಕೆ ಕುಡಿವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ನಿಂಗಪ್ಪ ಬೆಳಗಲಿ, ಬಸಪ್ಪ ದೇವಿಕೊಪ್ಪ, ಬಾಶಾಸಾಬ ಓಲೇಕಾರ, ಆಮೀನಸಾಬ ಮುಲ್ಲಾ, ಗ್ರಾಮಸ್ಥರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.