ಸಚಿವ ಮಹದೇವಪ್ಪಗೆ ಅಭಿನಂದನೆ
ಶಿಗ್ಗಾಂವಿ: ಲೋಕೋಪಯೋಗಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಪಟ್ಟಣಕ್ಕೆ ಆಗಮಿಸಿದ ಎಚ್.ಸಿ. ಮಹದೇವಪ್ಪ ಅವರನ್ನು ಶಿಗ್ಗಾಂವಿ-ಸವಣೂರು ವಿಧಾನಸಭೆ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು.
ಅಲ್ಲದೆ ನಮ್ಮ ವಿಧಾನಸಭೆ ಕ್ಷೇತ್ರದಲ್ಲಿ ಶಿಗ್ಗಾಂವಿ-ಸವಣೂರು ತಾಲೂಕುಗಳಲ್ಲಿ ತಮ್ಮ ಇಲಾಖೆಯಿಂದ ಬರುವ ಅನೇಕ ಜನಪರ ಸಮುದಾಯ ಭವನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಲನಿಗಳಲ್ಲಿ ರಸ್ತೆ ನಿರ್ವಹಣೆ, ರೈತರ ಜಮೀನುಗಳಿಗಾಗಿ ಸುರಕ್ಷಿತವಾದ ರಸ್ತೆ, ಗ್ರಾಮೀಣ ಭಾಗದಲ್ಲಿ ಜನರಿಗೆ ಬಯಲು ರಂಗಮಂದಿರ, ತಾಲೂಕು ಮಟ್ಟದ ಪ್ರಮುಖ ರಸ್ತೆ ಹಾಗೂ ಬಾಂದಾರ ನಿರ್ಮಾಣ ಹೆಚ್ಚಿನ ಅನುದಾನ ಮಂಜೂರು ಮಾಡಬೇಕು ಎಂದು ಶಿಗ್ಗಾಂವಿ-ಸವಣೂರು ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವಿ.ವೈ. ಪಾಟೀಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರನಗೌಡ ಎಸ್. ಪಾಟೀಲ, ತಾಪಂ ಮಾಜಿ ಸದಸ್ಯ ಇಸುಫ್ಸಾಬ್ ಬಾವಿಕಟ್ಟಿ, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗ ಕಾರ್ಯದರ್ಶಿ ಶಿವಾನಂದ ರಾಮಗೇರಿ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

