ಡೆಂಘೀ: ಚಾಲಕ ಚೇತರಿಕೆ
ಬ್ಯಾಡಗಿ: ಇಲ್ಲಿನ ಸಾರಿಗೆ ಘಟಕದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿರುವ ಟಿ. ಮಂಜುನಾಥ ಎಂಬುವರಲ್ಲಿ ಶಂಕಿತ ಡೆಂಘೀ ಕಾಣಿಸಿಕೊಂಡಿದ್ದು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಪಡೆಯುತ್ತಿರುವ ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.
ಈವರೆಗೂ ಕೇವಲ ಚಿಕ್ಕಮಕ್ಕಳಲ್ಲಿ ಕಾಣಿಸಿಕೊಂಡಿದ್ದ ಡೆಂಘೀ ಜ್ವರ ಇದೀಗ ದೊಡ್ಡವರಲ್ಲಿಯೂ ಕಾಣಿಸಿಕೊಳ್ಳತೊಡಗಿದೆ. ಹುಟ್ಟೂರಾದ ಕೋಲಾರ ಜಿಲ್ಲೆ ಬಂಗಾರಪೇಟೆಗೆ ರಜೆ ಮೇಲೆ ತೆರಳಿದ್ದ ಚಾಲಕ ಮಂಜುನಾಥ ಕಳೆದೊಂದು ವಾರದಿಂದ ತೀವ್ರ ಜ್ವರ ಬಳಲುತ್ತಿದ್ದರು. ಮರಳಿ ಕರ್ತವ್ಯಕ್ಕೆ ಹಾಜರಾದರೂ ಜ್ವರ ಮಾತ್ರ ಕಡಿಮೆಯಾಗಲಿಲ್ಲ. ಶುಕ್ರವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚಾಲಕನ ರಕ್ತ ಪರೀಕ್ಷೆ ನಡೆಸಿದ ವೈದ್ಯರು, ರಕ್ತದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಉಲ್ಬಣಿಸುತ್ತಿರುವ ಜ್ವರ: ತಾಲೂಕಿನಲ್ಲಿ ಈವರೆಗೂ ಒಟ್ಟು ಸುಮಾರು 60ಕ್ಕೂ ಹೆಚ್ಚು ಶಂಕಿತ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, 12 ಪ್ರಕರಣಗಳಲ್ಲಿ ಡೆಂಘೀ ಜ್ವರ ಖಚಿತಗೊಂಡಿದೆ, 9 ಪ್ರಕರಣಗಳಲ್ಲಿ ರೋಗಿಗಳು ಗುಣಮುಖರಾಗಿದ್ದು, 3 ಪ್ರಕರಣಗಳಲ್ಲಿ ಚಿಕ್ಕಮಕ್ಕಳು ಸಾವನ್ನಪ್ಪಿರುವುದಾಗಿ ವೈದ್ಯಕೀಯ ಮೂಲಗಳು ತಿಳಿಸಿವೆ.
ಸಿಬ್ಬಂದಿಗೆ ಜಾಗೃತಿ: ಸಾರಿಗೆ ಘಟಕದ ಸಿಬ್ಬಂದಿ ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳುವುದು, ಶುದ್ಧ ಕುಡಿಯುವ ನೀರು ಬಳಕೆ ಮಾಡುವುದು ಹಾಗೂ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಾರಿಗೆ ಘಟಕದ ವೈದ್ಯಾಧಿಕಾರಿ ಡಾ ಪ್ರಕಾಶ ಭಸ್ಮೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

