ಫಲಾನುಭವಿಗಳಿಗೆ ಸೂಕ್ತ ನೆರವು : ಬಣಕಾರ
ಹಿರೇಕೆರೂರು: ರಾಷ್ಟ್ರೀಯ ಕೌಟುಂಬಿಕ ನೆರವು ಯೋಜನೆಯಲ್ಲಿ ಬಂದಂತಹ ಅರ್ಜಿಗಳು ಕಳೆದ ಒಂದು ವರ್ಷದಿಂದ ವಿಲೇವಾರಿಯಾಗದೆ ಉಳಿದಿದ್ದವು. ಇದನ್ನು ತಾವು ಶಾಸಕರಾಗಿ ಬಂದ ಮೇಲೆ ಸರಿಪಡಿಸಿ ತಾಲೂಕಿನ 25 ಫಲಾನುಭವಿಗಳಿಗೆ ಹಣ ಮುಟ್ಟಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
ತಹಸೀಲ್ದಾರ್ ಕಚೇರಿಯಲ್ಲಿ ಸರ್ಕಾರದ ವತಿಯಿಂದ ರಾಷ್ಟ್ರೀಯ ಕೌಟುಂಬಿಕ ನೆರವು ಯೋಜನೆಯಲ್ಲಿ ನೀಡಲಾಗುವ ರು. 10 ಸಾವಿರ ಸಹಾಯ ಧನದ ಚೆಕ್ನ್ನು ತಾಲೂಕಿನ 25 ಫಲಾನುಭವಿಗಳಿಗೆ ಶುಕ್ರವಾರ ವಿತರಿಸಿ ಮಾತನಾಡಿದರು.
ಇನ್ನು ಮುಂದೆ ಈ ಯೋಜನೆಯಲ್ಲಿ ಯಾರೆ ಅರ್ಜಿ ಸಲ್ಲಿಸಿದರೂ ಅವುಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಶೀಘ್ರ ವಿಲೇವಾರಿ ಮಾಡಿ ಸಹಾಯಧನ ಮುಟ್ಟಿಸುವ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಕಂದಾಯ ಇಲಾಖೆಯಲ್ಲಿ ಕುಂದು ಕೊರತೆ, ತೊಂದರೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ ಇದನ್ನು ಇಲಾಖೆ ಸಹಕಾರದಿಂದ ಸರಿಪಡಿಸಲಾಗುವುದು ಎಂದರು.
ಹಾವೇರಿ ಜಿಲ್ಲಾ ಉಪ ವಿಭಾಗಾಧಿಕಾರಿ ಚನ್ನಪ್ಪನವರ ಮಾತನಾಡಿ, ಸರ್ಕಾರದ ವತಿಯಿಂದ ರಾಷ್ಟ್ರೀಯ ಕೌಟುಂಬಿಕ ನೆರವು ಯೋಜನೆಯಲ್ಲಿ ನೀಡಲಾಗುವ ಸಹಾಯ ಧನವನ್ನು ಬಡ ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿ ಮೃತಪಟ್ಟರೆ ಅವರ ಕುಟುಂಬ ವರ್ಗದ ನೆರವಿಗಾಗಿ ರು. 10 ಸಾವಿರ ಚೆಕ್ನ್ನು ವಿತರಿಸಲಾಗುವುದು. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ತಿಳಿಸಿದರು.
ತಹಸೀಲ್ದಾರ್ ಹನುಮಂತಪ್ಪ ಬಡದಾಳೆ, ಗ್ರೇಡ್-2 ತಹಸೀಲ್ದಾರ್ ತುಷಾರ್ ಹೊಸೂರು, ತಾಲೂಕು ಆರೋಗ್ಯಾಧಿಕಾರಿ ಡಾ ಚಿದಾನಂದ, ತಾಪಂ ಎನ್ಆರ್ಇಜಿ ಸಹಾಯಕ ನಿರ್ದೇಶಕ ಎಸ್.ಬಿ. ಲಕ್ಷ್ಮೇಶ್ವರ, ಸಿಪಿಐ ವಿಜಯ್ ಮುರಗುಂಡಿ ಹಾಗೂ ಫಲಾನುಭವಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

