ಇಂದು ಗುರುವಂದನೆ, ತುಲಾಭಾರ ಕಾರ್ಯಕ್ರಮ
ನರೇಗಲ್ಲ: ಸಮೀಪದ ಅಬ್ಬಿಗೇರಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಆವರಣದಲ್ಲಿರುವ ದಿ. ಸಂಗನಗೌಡ ಯಲ್ಲಪ್ಪಗೌಡ್ರ ವೇದಿಕೆಯಲ್ಲಿ ಜೂ. 15ರ ಸಂಜೆ 4 ಗಂಟೆಗೆ ಬಿ.ಎಸ್. ಜಗಾಪುರ ಶಿಕ್ಷಕರ ಅಭಿಮಾನಿ ಬಳಗ ಹಾಗೂ ಅಬ್ಬಿಗೇರಿಯ ವಿವಿಧ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಗುರುವಂದನಾ ಹಾಗೂ ತುಲಾಭಾರ ಕಾರ್ಯಕ್ರಮ ಜರುಗಲಿದೆ. ಸಾನ್ನಿಧ್ಯವನ್ನು ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯರು ವಹಿಸುವರು. ಅಧ್ಯಕ್ಷತೆಯನ್ನು ಎಂಸಿಎಸ್ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಎಸ್.ಎಸ್. ಗುಜಮಾಗಡಿ ವಹಿಸುವರು. ಅತಿಥಿಗಳಾಗಿ ನಿವೃತ್ತ ಡಿಡಿಪಿಐ ಎ.ಎನ್. ನಾಗರಳ್ಳಿ, ಎಂ.ಎಸ್. ಚಿನ್ನೂರ, ಎಸ್.ವಿ. ಕಟಗಿ ಭಾಗವಹಿಸುವರು. ಅನ್ನದಾನೇಶ್ವರ ಪಪೂ ಮಹಾವಿದ್ಯಾಲಯದ ಉಪನ್ಯಾಸಕ ಎಫ್.ಎನ್. ಹುಡೇದ ಉಪನ್ಯಾಸ ನೀಡುವರು. ವಿಶೇಷ ಆಹ್ವಾನಿತರಾಗಿ ಕೊತಬಾಳದ ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕ್ರಣ್ಣ ಸಂಕಣ್ಣವರ, ಹಾಗೂ ಕೊತಬಾಳದ ಹಾಸ್ಯ ಕಲಾವಿದ ಬಸವರಾಜ ಪಾಗದ ಭಾಗವಹಿಸಲಿದ್ದಾರೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಸಾಹಿತ್ಯ ಸಂಜೆ ಮಾಲಿಕೆ ಬಿಡುಗಡೆ
ಗದಗ: ಜೂ. 15 ಮತ್ತು 16 ರಂದು ಮುಂಡರಗಿಯಲ್ಲಿ ಜರಗುವ 5ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಹಮ್ಮಿಕೊಂಡು ಬಂದ 25 ಶನಿವಾರ ಸಾಹಿತ್ಯ ಸಂಜೆಗಳಲ್ಲಿ ಗದಗ ಜಿಲ್ಲೆಯ ವಿವಿಧ ಕವಿ, ಸಾಹಿತಿ, ಉಪನ್ಯಾಸಕರಿಂದ ನಡೆಸಿದ ಉಪನ್ಯಾಸಗಳನ್ನು ಶನಿವಾರ ಸಾಹಿತ್ಯ ಸಂಜೆ ಎಂಬ ಶೀರ್ಷಿಕೆ ಅಡಿಯಲ್ಲಿ ಮಾಲಿಕೆ-1 ಜೂ. 15 ರಂದು 10.30 ಗಂಟೆಗೆ ನರಗುಂದ ಮತಕ್ಷೇತ್ರದ ಶಾಸಕ ಬಿ.ಆರ್. ಯಾವಗಲ್ಲ ಬಿಡುಗಡೆ ಮಾಡಲಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ, ಗೌರವ ಕಾರ್ಯದರ್ಶಿ ಶರಣು ಗೋಗೇರಿ ಡಾ. ಸಂಗಮೇಶ ತಮ್ಮನಗೌಡರ ಜಿಲ್ಲಾ ಕೋಶಾಧ್ಯಕ್ಷ ಡಿ.ಎಚ್. ಮಲ್ಲೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಪುರಸ್ಕಾರ
ಲಕ್ಷ್ಮೇಶ್ವರ: ಪಟ್ಟಣದ ಗುರಪ್ಪ ಶಿದ್ರಾಮಪ್ಪ ಪಿಳ್ಳಿ ಪ್ರತಿಷ್ಠಾನದ ವತಿಯಿಂದ ಜೂ. 15 ರ ಬೆಳಗ್ಗೆ 10 ಗಂಟೆಗೆ ಸ್ಥಳೀಯ ಪಿಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆದರ್ಶ ವಿದ್ಯಾರ್ಥಿ ಪುರಸ್ಕಾರ ಮತ್ತು ಉಚಿತ ನೋಟ್ಬುಕ್ ವಿತರಣಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಅಧ್ಯಕ್ಷತೆಯನ್ನು ಶಾಲೆಯ ಪ್ರಧಾನಗುರು ಬಿ.ಬಿ. ಹುಬ್ಬಳ್ಳಿ ವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

