ಶಿಷ್ಯವೇತನಕ್ಕಾಗಿ ಅರ್ಜಿ
ಹಾವೇರಿ: ಪ್ರಸಕ್ತ ಸಾಲಿಗೆ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ಗಳು ಹಾಗೂ ದೂರಶಿಕ್ಷಣ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಭಾರತ ಸರ್ಕಾರದ ಶಿಷ್ಯವೇತನ ಮಂಜೂರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಕಾಲೇಜಿನ ಪ್ರಾಚಾರ್ಯರು ತಮ್ಮ ವಿದ್ಯಾರ್ಥಿಗಳ ಮಾಹಿತಿಯನ್ನು ನೀಡಿ, ನಿಗದಿತ ನಮೂನೆಯ ಅರ್ಜಿಗಳನ್ನು ಹಾವೇರಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಿಂದ 31 ಜುಲೈ, 2013ರೊಳಗಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳ ಜೊತೆಗೆ ತಮ್ಮ ಕಾಲೇಜಿನಲ್ಲಿ ಓದುತ್ತಿರುವ ಪ. ಜಾತಿ ಮತ್ತು ಪ. ವರ್ಗ ವಿದ್ಯಾರ್ಥಿಗಳನ್ನು 20 ಆಗಸ್ಟ್, 2013ರೊಳಗಾಗಿ ಕಾರ್ಯಾಲಯಕ್ಕೆ ಕರೆತಂದು, ರಜಿಸ್ಟ್ರೇಷನ್ ಮಾಡಿಕೊಂಡು ಹೋಗಬೇಕು. ರಜಿಸ್ಟ್ರೇಷನ್ ಆಗದ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಮಂಜೂರು ಮಾಡಲಾಗುವುದಿಲ್ಲ ಎಂದು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಪೋಷಕರ ವಾರ್ಷಿಕ ಆದಾಯ ಪ್ರಮಾಣಪತ್ರ, ರೇಷನ್ ಕಾರ್ಡ್ ದೃಢೀಕೃತ ಝರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರ, ನವೀಕರಣ ವಿದ್ಯಾರ್ಥಿಗಳು ಹಾಗೂ ಹಿಂದಿನ ಸಾಲುಗಳಲ್ಲಿ ರಜಿಸ್ಟ್ರೇಷನ್ ಮಾಡಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಜಿಸ್ಟರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಕಳೆದ ಸಾಲಿನ ಅಂಕಪಟ್ಟಿ, ತಂದೆ-ತಾಯಿ ಮರಣ ಹೊಂದಿದ್ದಲ್ಲಿ ಮರಣ ಪತ್ರದ ದೃಢೀಕರಣ ಝರಾಕ್ಸ್ ಪ್ರತಿ, ವಿದ್ಯಾರ್ಥಿ ದಾಖಲಾತಿ ರಸಿದಿ ಝರಾಕ್ಸ್, ಶಿಕ್ಷಣ ಕುಂಠಿತಗೊಂಡಿದ್ದಲ್ಲಿ ಕುಂಠಿತಗೊಂಡ ಬಗ್ಗೆ ಸಂಬಂಧಪಟ್ಟ ಪ್ರಾಚಾರ್ಯರಿಂದ ದೃಢೀಕೃತ ನಿಗದಿತ ನಮೂನೆ ಪ್ರಮಾಣಪತ್ರ, ಇತ್ತೀಚಿನ ಬ್ಯಾಂಕ್ ಪಾಸ್ ಪುಸ್ತಕದ ಝರಾಕ್ಸ್ ಪ್ರತಿ ಹಾಗೂ ಐಎಫ್ಎಸ್ಸಿ ಕೋಡ, ಎಸ್ಎಸ್ಎಲ್ಸಿ ಉತ್ತೀರ್ಣರಾಗಿ ಪಿಯುಸಿಗೆ ಸೇರಿದ ವಿದ್ಯಾರ್ಥಿಗಳು, ಎಸ್ಎಸ್ಎಲ್ಸಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ನೋಂದಣಿ ಮಾಡಿಸಿದ ನೋಂದಣಿ ಸಂಖ್ಯೆ ನೀಡುವುದರೊಂದಿಗೆ ಆಧಾರ ಕಾರ್ಡ್ ಹೊಂದಿದಲ್ಲಿ ದೃಢೀಕೃತ ಝರಾಕ್ಸ್ ಪ್ರತಿ ಲಗತ್ತಿಸಬೇಕು. ಶಿಕ್ಷಣ ಸಂಸ್ಥೆಗಳು ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ತಮ್ಮ ಶಿಕ್ಷಣ ಸಂಸ್ಥೆಯ ಮಾನ್ಯತೆ ಹಾಗೂ ವಿದ್ಯಾರ್ಥಿಗಳ ಪ್ರವೇಶವನ್ನು ಅನುಮೋದಿಸಿದ ಬಗ್ಗೆ ಶಿಕ್ಷಣ ಇಲಾಖೆಯಿಂದ ಪಡೆದ ಅನುಮೋದನಾ ಪತ್ರದ ದೃಢೀಕೃತ ಪ್ರತಿಯನ್ನು ಲಗತ್ತಿಸಬೇಕೆಂದು ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಚಿಕಿತ್ಸೆಗೆ ಧನ ಸಹಾಯ
ಹಾವೇರಿ: ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿಯಲ್ಲಿ ವಿಕಲಚೇತನರು ವಿಕಲತೆ ಇರುವ ಅಂಗಗಳ ಶಸ್ತ್ರ ಚಿಕಿತ್ಸೆಗೊಳಪಡಿಸಿದಲ್ಲಿ ಅಥವಾ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಸಹಾಯಧನ ನೀಡಲಾಗುವುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಿ.ಎಚ್. ಲಲಿತಾ ತಿಳಿಸಿದ್ದಾರೆ. ಅಭ್ಯರ್ಥಿಗಳ ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಆಡಳಿತ ಭವನ ದೇವಗಿರಿ, ಹಾವೇರಿ ಇವರ ಕಚೇರಿಗೆ ಬಂದು ಖುದ್ದಾಗಿ ಸಲ್ಲಿಸಬಹುದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ: 08375-249014ನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

