ಹಾವೇರಿ

ಸೊಳ್ಳೆ ನಿಯಂತ್ರಿಸಿ ಡೆಂಘೀ ದೂರವಿಡಿ

Published On :

ಹಾವೇರಿ: ಮನೆ ಹಾಗೂ ಬಡಾವಣೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಡೆಂಘೀ ಜ್ವರದಿಂದ ದೂರವಾಗಿವುದು ಸೂಕ್ತ ಎಂದು ಸಾರ್ವಜನಿಕರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ ಕರೆ ನೀಡಿದರು.
ಡೆಂಘೀ ನಿಯಂತ್ರಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಶನಿವಾರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ ಬೃಹತ್ ಜಾಗೃತಿ ಜಾಥಾ ಉದ್ದೇಶಿಸಿ ಮಾತನಾಡಿದರು.
ಸಾರ್ವಜನಿಕರಲ್ಲಿ ಡೆಂಘೀ ಜ್ವರ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅದರಿಂದ ಪಾರಾಗುವ ಅಂಶಗಳನ್ನು ತಿಳಿ ಹೇಳುವುದು ಈ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ಡೆಂಘೀ ನಿಯಂತ್ರಣಕ್ಕೆ ಹಲವಿಧ ಮಾರ್ಗೊಪಾಯಗಳಿದ್ದು, ಅವುಗಳನ್ನು ಸಾರ್ವಜನಿಕರು ತಪ್ಪದೇ ಪಾಲಿಸುವ ಮೂಲಕ ಡೆಂಘೀದಿಂದ ದೂರವಿರುವಂತೆ ತಿಳಿಸಿದರು. ಡೆಂಘೀ ನಿಯಂತ್ರಣದಲ್ಲಿ ಪ್ರಮುಖವಾಗಿ ಸೊಳ್ಳೆ ನಿಯಂತ್ರಣ ಮಾಡುವುದು ಮುಖ್ಯವಾಗಿದೆ. ಅದಕ್ಕಾಗಿ ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿತ್ವವಾಗಿರುವುದರೊಂದಿಗೆ ನೀರು ನಿಲ್ಲಂದತೆ ಎಚ್ಚರ ವಹಿಸಬೇಕೆಂದು ತಿಳಿಸಿದರು.
ಪ್ರಸಕ್ತ ಮಳೆಗಾಲ ಇರುವುದರಿಂದ ಮಳೆ ನೀರು ಒಡೆದ ಪಾತ್ರೆಯಲ್ಲಿ ನಿಲ್ಲದಂತೆ ನಿಗಾಹಿಸಬೇಕು ಹಾಗೂ ವಾರದಲ್ಲಿ ಎರಡು ಸಾರೆ ನೀರಿನ ಮೂಲವನ್ನು ಶುಚಿಗೊಳಿಸಬೇಕು, ನೀರು ಸಂಗ್ರಹ ಮಾಡಿದ ತೊಟ್ಟಿಗಳನ್ನು ಮುಚ್ಚಳದಿಂದ ಸಂರಕ್ಷಿಸಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸುವಂತೆ ಸಲಹೆ ನೀಡಿದರು.
ಈ ಸಂದರ್ಭ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರು ಹೆಚ್ಚಿನ ಒತ್ತು ನೀಡಬೇಕು. ಸರ್ಕಾರದ ನಿಯಂತ್ರಣೋಪಾಯಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರ ಸಹಕಾರವು ಅಗತ್ಯವಾಗಿದೆ ಎಂದರು. ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ್ ಚಾಲನೆ ನೀಡಿದರು. ಬೃಹತ್ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಘೋಷ ವಾಕ್ಯಗಳನ್ನು ಕೂಗಿದರು.
ತಹಸೀಲ್ದಾರ್ ಶಿವಲಿಂಗು, ನಗರಸಭೆ ಆಯುಕ್ತ ರವೀಂದ್ರ ಮಲ್ಲಾಪುರ, ತಾಲೂಕು ಆರೋಗ್ಯಾಧಿಕಾರಿ ಡಾ. ರಭಾಕರ ಕುಂದೂರ, ಆರೋಗ್ಯ ಇಲಾಖೆ ಸಿಬ್ಬಂದಿ, ನರ್ಸಿಂಗ್ ವಿದ್ಯಾರ್ಥಿಗಳು, ಶಾಲಾ ಮಕ್ಕಳು ಸೇರಿದಂತೆ ಹಲವರು ಜಾಥಾದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.