ಡೆಂಘೀ ಜಾಗೃತಿ ಜಾಥಾ
ಹಾನಗಲ್ಲ: ತಾಲೂಕಿನ ಆಡೂರು ಗ್ರಾಮದಲ್ಲಿ ಡೆಂಘೀ ಜ್ವರ ನಿಯಂತ್ರಣಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗ್ರಾಮದಲ್ಲಿ ಡೆಂಘೀ ಜಾಗೃತಿ ಜಾಥಾ ನಡೆಸಲಾಯಿತು. ಗ್ರಾಪಂ ಅಧ್ಯಕ್ಷೆ ವಿಮಲಾಕ್ಷಿ ಗೊಣಿಗೇರ ಜಾಥಾಕ್ಕೆ ಚಾಲನೆ ನೀಡಿದರು. ವೈದ್ಯಾಧಿಕಾರಿ ಸುರೇಶ ಪೂಜಾರ ಮತ್ತು ಗ್ರಾಪಂ ಮಾಜಿ ಅಧ್ಯಕ್ಷ ಸೋಮಣ್ಣ ಗೊಣಿಗೇರ ನೇತೃತ್ವದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡೆಂಘೀ ಜ್ವರದ ಮುಂಜಾಗ್ರತೆ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಗ್ರಾಮಸ್ಥರ ಗಮನ ಸೆಳೆದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲೆ ವಿದ್ಯಾರ್ಥಿಗಳು, ಗ್ರಾಮದ ಗಣ್ಯರು ಜಾಥಾಕ್ಕೆ ಸಾಥ್ ನೀಡಿದರು. ಅದಲ್ಲದೆ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿನ ಸುಮಾರು 10 ಗ್ರಾಮಗಳಲ್ಲಿ ಡೆಂಘೀ ಜಾಗೃತಿ, ಮುನ್ನೆಚ್ಚರಿಕೆ ಕ್ರಮದ ಜಾಥಾ ನಡೆಸಲಾಯಿತು. ಗ್ರಾಪಂ ಸದಸ್ಯರು ಮತ್ತು ಗ್ರಾಮಸ್ಥರು ಸಹಕಾರ ನೀಡಿದರು.
ಇಂದು ಶಾಸಕರಿಗೆ ಸನ್ಮಾನ
ಬ್ಯಾಡಗಿ: ನೂತನ ಶಾಸಕರಿಗೆ ತಾಲೂಕಿನ ಕದರಮಂಡಲಗಿಯ ಶ್ರೀ ಕಾಂತೇಶ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಜೂ.17ರ ಬೆಳಗ್ಗೆ 11ಕ್ಕೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಸಿ. ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದು, ಸ್ಥಳೀಯ ಶಾಸಕ ಬಸವರಾಜ ಶಿವಣ್ಣನವರ, ರಾಣಿಬೆನ್ನೂರಿನ ಕೆ.ಬಿ. ಕೋಳಿವಾಡ, ಹಾನಗಲ್ ಮನೋಹರ ತಹಸೀಲ್ದಾರ ಹಾಗೂ ಹಾವೇರಿಯ ರುದ್ರಪ್ಪ ಲಮಾಣಿ ಅವರನ್ನು ಸನ್ಮಾನಿಸಲಾಗುವುದು. ಜಿಲ್ಲಾಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಎಸ್.ಸಿ. ಶಿಡೇನೂರ, ತಾಲೂಕು ಘಟಕದ ಅಧ್ಯಕ್ಷ ಹುಸೇನಸಾಬ ದೊಡ್ಮನಿ, ಮುಖಂಡ ಎಸ್.ಆರ್. ಪಾಟೀಲ ಹಾಗೂ ಇನ್ನಿತರರು ಉಪಸ್ಥಿತರಿರುವುದಾಗಿ ಪ್ರಕಟಣೆ ತಿಳಿಸಿದೆ.
ಇಂದು ಕಾಮಗಾರಿಗೆ ಚಾಲನೆ
ಬ್ಯಾಡಗಿ: ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಡಿ ತಾಲೂಕಿನ ಮಾಸಣಗಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜೂ.17ರಂದು ಬೆಳಗ್ಗೆ ಶಾಸಕ ಬಸವರಾಜ ಶಿವಣ್ಣನವರ ಚಾಲನೆ ನೀಡಲಿದ್ದಾರೆ. ಗ್ರಾಪಂ ಅಧ್ಯಕ್ಷೆ ಮೀನಾಕ್ಷಿ ವಡೆನಪುರ, ಸಂಸದ ಶಿವಕುಮಾರ ಉದಾಸಿ, ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ, ವಿಧಾನ ಪರಿಷತ್ ಸದಸ್ಯರಾದ ಸೋಮಣ್ಣ ಬೇವಿನಮರದ, ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಜಿಪಂ ಸದಸ್ಯರಾದ ವಿರೂಪಾಕ್ಷಪ್ಪ ಬಳ್ಳಾರಿ, ಗದಿಗೆಮ್ಮ ಬಸನಗೌಡ್ರ, ತಾಪಂ ಅಧ್ಯಕ್ಷೆ ಚಿನ್ನಮ್ಮ ಪಾಸಿ, ಎಪಿಎಂಸಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ತಾಪಂ ಸದಸ್ಯರಾದ ಚನ್ನಬಸಪ್ಪ ದೇಸಾಯಿ, ನಿಂಗಪ್ಪ ದುಂಡೆಣ್ಣನವರ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸುರೇಶ ಯತ್ನಳ್ಳಿ ಹಾಗೂ ಇನ್ನಿತರರು ಉಪಸ್ಥಿತರಿರುವುದಾಗಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎನ್.ಜೆ. ವಿರೂಪಾಕ್ಷಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

