ಹಾವೇರಿ

ಅಂಗವಿಕಲರ ಸೌಲಭ್ಯ ಸದ್ಬಳಕೆಯಾಗಲಿ

Published On :

ಹಿರೇಕೆರೂರು: ಅಂಗವೈಕಲ್ಯದಿಂದ ಮನೆಯಿಂದ ಹೊರಗೆ ಬಾರದಂತಹ ಸ್ಥಿತಿಯಲ್ಲಿ ಅನೇಕರಿದ್ದಾರೆ. ಅವರ ತಂದೆ-ತಾಯಿ ಅನುಭವಿಸುವ ನೋವು ಹೇಳತೀರದು. ಅಂಥವರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಅನೇಕ ಸವಲತ್ತು ನೀಡುತ್ತಿದ್ದು, ಅವುಗಳ ಸದ್ಬಳಕೆಯಾಗಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ಗುರು ಭವನದಲ್ಲಿ ಸರ್ವ ಶಿಕ್ಷಣ ಅಭಿಯಾನದಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣೆ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಗವಿಕಲರ ಸವಲತ್ತುಗಳನ್ನು ಅರ್ಹರಿಗೆ ಎಷ್ಟು ಸಾಧ್ಯವೋ ಅಷ್ಟು ಬೇಗ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕು. ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವುದು ಪ್ರಜಾಪ್ರತಿನಿಧಿಗಳ ಕರ್ತವ್ಯವಾಗಿದೆ.
ಅಂಗವಿಕಲರಲ್ಲಿಯೂ ಸಾಕಷ್ಟು ಪ್ರತಿಭಾವಂತರಿದ್ದು, ಅವರಿಗೆ ಸೂಕ್ತ ಸಹಾಯ, ಸಹಕಾರ ಬೇಕಿದೆ ಎಂದರು. ಅಂಗವಿಕಲ ಮಕ್ಕಳು ಸರ್ಕಾರದಿಂದ ನೀಡುವ ಆವಶ್ಯಕ ಸಲಕರಣೆಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ವಿಶಿಷ್ಟ ಸಾಧನೆ ಮಾಡಬೇಕು ಎಂದರು.
ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರು ಅಣ್ಣಪ್ಪನವರ ಮಾತನಾಡಿ, ಅಂಗವಿಕಲರು ಜೀವನದಲ್ಲಿ ತಾವು ಇನ್ನೊಬ್ಬರಿಗೆ ಏನು ಕಮ್ಮಿ ಇಲ್ಲ ಎಂಬುದನ್ನು ತಮ್ಮ ಪ್ರತಿಭೆ ಮೂಲಕ ತೋರಿಸಿಕೊಡಬೇಕೆಂದರು.
ಜಿಪಂ ಸದಸ್ಯರಾದ ಪಾರ್ವತಿ ಚನ್ನಬಸಪ್ಪ ಭೋಗಾವಿ, ಬಸಮ್ಮ ಅಬಲೂರ, ತಾಪಂ ಸದಸ್ಯ ಶಿವಣ್ಣ ಗಡಿಯಣ್ಣನವರ, ಪಪಂ ಸದಸ್ಯರಾದ ಮಹೇಂದ್ರ ಬಡಳ್ಳಿ, ರಘು ಮಾಳಮ್ಮನವರ, ಶಿವಕುಮಾರ ತಿಪ್ಪಶೆಟ್ಟಿ, ಉಪ ಸಮನ್ವಯಾಧಿಕಾರಿ ಎಚ್.ಎಂ. ಖಾನ್, ಜಿ.ಕೆ. ಸುಳಗನ್ನಿ, ವಿ.ಎಸ್. ಪುರದ, ಡಾ. ವಿಜಯಕುಮಾರ ಹಿರೇಮಠ, ಡಾ. ಮನೀಷ್, ಡಾ. ಸುರೇಶ, ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್. ಮಕಾಂದಾರ, ತಾಲೂಕು ಘಟಕದ ಅಧ್ಯಕ್ಷ ಬಿ.ಪಿ. ಬಿದರಿ, ಸಿ.ಎಸ್. ಹಾರಿನಳ್ಳಿ ಹಾಗೂ ಹುಬ್ಬಳ್ಳಿಯ ಮನೋವಿಕಾಸ ಸಂಸ್ಥೆಯ ವೈದ್ಯರು, ಸಿಬ್ಬಂದಿ ಹಾಜರಿದ್ದರು.
ಬಿಇಒ ಎಂ.ಸಿ. ಆನಂದ ಪ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಸುರೇಶ ಕುಮಾರ ಸ್ವಾಗತಿಸಿದರು. ಎಂ.ಎಂ. ಮತ್ತೂರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.