ಹಾವೇರಿ

ಪರಿಸರ ನಾಶದಿಂದ ಮನುಷ್ಯನ ವಿನಾಶ

Published On :

ಹಾವೇರಿ: ಪ್ರಸಕ್ತ ಜಗತ್ತಿಗೆ ಪರಿಸರ ಬಹಳ ಮುಖ್ಯವಾಗಿದ್ದು, ಪ್ರಕೃತಿ ವಿರುದ್ಧ ನಡೆದುಕೊಂಡರೆ ಮನುಷ್ಯನ ಜೀವನ ನಾಶಗೊಳ್ಳುವುದರಲ್ಲಿ ಎರಡು ಮಾತಿಲ್ಲ. ಈ ನಿಟ್ಟಿನಲ್ಲಿ ಸಸ್ಯ ಸಂಕುಲವನ್ನು ನಾಶ ಮಾಡುತ್ತಿರುವ ಮನುಷ್ಯ ಜ್ವಲಂತ ಸಮಸ್ಯೆ ಎದುರಿಸುವಂತಾಗಿದೆ ಎಂದು ಜೆಸಿಐ ಸಂಸ್ಥೆ ಅಧ್ಯಕ್ಷ ಪ್ರದೀಪ ಪಾಟೀಲ್ ವಿಷಾದ ವ್ಯಕ್ತಪಡಿಸಿದರು. ಜಿಲ್ಲೆಯ ಅಬಕಾರಿ ಜಾರಿ ಮತ್ತು ಲಾಟರಿ ನಿಷೇದ ದಳ ಠಾಣೆಯ ಪೊಲೀಸ್ ಅಧಿಕಾರಿಗಳು ಸವಣೂರು ತಾಲೂಕಿನ ಹತ್ತಿಮತ್ತೂರು ಕಳ್ಳಬಟ್ಟಿ ಕೆಂದ್ರದಲ್ಲಿ ಕಳ್ಳಭಟ್ಟಿ ಸಾರಾಯಿ ದಂಧೆ ಬಿಟ್ಟ ಕುಟುಂಬಗಳ ಮನೆಗಳ ಮುಂದೆ ಜೆಸಿಐ ಹಾವೇರಿ ಸಂಸ್ಥೆ ಆಶ್ರಯದಲ್ಲಿ ನಡೆದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಸಿಗಳನ್ನು ನೆಡುವ ಕಾಳಜಿ ಪ್ರತಿಯೊಬ್ಬ ನಾಗರಿಕನಲ್ಲಿ ಮೂಡಿ ಬಂದರೆ ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಂದವಾಗಿ ಕಾಪಾಡಿಕೊಳ್ಳಬಹುದು ಎಂದರು. ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಎಚ್. ರಾಜಪ್ಪರವರ ಮಾತನಾಡಿದರು. ಇದೇ ಸಂದರ್ಭ ಹಿಂದುಳಿದ ವರ್ಗದವರ ಅಭಿವೃದ್ದಿಗೆ ಸ್ಪಂದಿಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದರು. ಒಟ್ಟು 90 ಹಣ್ಣಿನ ಗಿಡಗಳು ಹಾಗೂ ಇತರೆ ಲಾಭದಾಯಕ ಸಾಗವಾನಿ ಸಸಿಗಳನ್ನು ನೆಡಲಾಯಿತು. ಪೊಲೀಸ್ ಇನ್‌ಸ್ಪೆಕ್ಟರ್ ಎಚ್. ರಾಜಪ್ಪ ಹಾಗೂ ಸಿಬ್ಬಂದಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.