ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಸವಣೂರು: ಬಾಲಕಾರ್ಮಿಕ ಪದ್ಧತಿ ಕುರಿತು ಜನಜಾಗೃತಿ ಮೂಡಬೇಕು. ಶಾಲೆಯನ್ನು ತೊರೆದು ದುಡಿಮೆಗೆ ಹೋಗುವ ಪ್ರತಿ ಮಗುವನ್ನೂ ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ತರಬೇಕು ಎಂದು ಕಲಕೋಟಿ ಸಮೂಹ ಸಂಪನ್ಮೂಲ ಕೇಂದ್ರದ ಸಿಆರ್‌ಪಿ ಪ್ರಕಾಶ ಕೆ. ಇಚ್ಚಂಗಿ ತಿಳಿಸಿದರು. ಮಂಟಗಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಜರುಗಿದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮದ ಹಿರಿಯರಾದ ಹನುಮಂತಗೌಡ್ರ ಪಾಟೀಲ, ಮಂಜುನಾಥ ಕುರುಬರ, ಜಗದೀಶಗೌಡ ಕುಂದೂರ ತಮ್ಮ ಚಿಂತನೆಗಳನ್ನು ವ್ಯಕ್ತಪಡಿಸಿದರು. ಗ್ರಾಮದ ಪ್ರಮುಖರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.
ಅರ್ಜಿ ಆಹ್ವಾನ
ಶಿಗ್ಗಾಂವಿ: ತಾಲೂಕಿನ ವಿವಿಧೆಡೆ ಅಂಗವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆಯ ಹೊಸೂರು-1, ಅಂದಲಗಿ-1 ಅಂಗನವಾಡಿ ಕಾರ್ಯಕರ್ತೆ ಹಾಗೂ ಶಿಗ್ಗಾಂವಿ (ದೇಸಾಯಿ ಓಣಿ), ಬನ್ನೂರು-19, ಹುಲಗೂರು-36, ಬಂಕಾಪುರ (ಶಹಬಜಾರ್-148) ಹಾಗೂ ಹೊನ್ನಾಪುರ ಅಂಗನವಾಡಿ ಕೇಂದ್ರಗಳಿಗೆ ತಲಾ 1 ಸಹಾಯಕಿ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ 18ರಿಂದ 45 ವರ್ಷ ಒಳಗಿನ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 6 ಜುಲೈ, 2013ರ ಸಂಜೆ 5-30 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಶಿಗ್ಗಾಂವಿ ಇವರನ್ನು ಸಂಪರ್ಕಿಸಿ.
ಕುಡಿತ: ವ್ಯಕ್ತಿ ಸಾವು
ಶಿಗ್ಗಾಂವಿ: ಪಟ್ಟಣದ ಹೊಸ ಬಸ್ ನಿಲ್ದಾಣ ಹತ್ತಿರ ಇರುವ ಬಸವೇಶ್ವರ ನಗರದ ಮನೆಯೊಂದರಲ್ಲಿ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಮಾದೇವಪ್ಪ ಶೀವಪ್ಪ ಹರಿಗೊಂಡ(52) ಎಂದು ಗುರುತಿಸಲಾಗಿದೆ. ಕುಡಿದು ಅಮಲಿನಲ್ಲಿ ಮಲಗಿದ್ದು, ಬೆಳಗ್ಗೆ ಎದ್ದು ನೋಡಿದರೆ ಮೃತಪಟ್ಟಿದ್ದನು ಎಂದು ಮೃತನ ಪತ್ನಿ ಪಾರವ್ವ ಮಾದೇವಪ್ಪ ಹರಿಗೊಂಡ ದೂರು ನೀಡಿದ್ದಾರೆ. ಶಿಗ್ಗಾಂವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇದೊಂದು ಸಂಶಯಾಸ್ಪದ ಸಾವು ಎಂದು ತನಿಖೆ ಕೈಗೊಂಡಿದ್ದಾರೆ.
ಶಾಲಾ ಸಾಮಗ್ರಿ ಕಳ್ಳತನ
ಶಿಗ್ಗಾಂವಿ: ಬನ್ನೂರು ಗ್ರಾಮದ ಹೊರ ವಲಯದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಬಾಗಿಲದ ಕೀಲಿ ಮುರಿದು ಅದಾಂಜು ರು. 25 ಸಾವಿರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ ಘಟನೆ ಶುಕ್ರವಾರ ನಡೆದಿದೆ. ಕಳುವಾದ ಸಾಮಗ್ರಿಗಳಲ್ಲಿ ಝರಾಕ್ಸ್ ಯಂತ್ರ. ಪ್ರಿಂಟಿಂಗ್ ಯಂತ್ರ ಹಾಗೂ 15 ಬ್ಯಾಟರಿಗಳು ಸೇರಿವೆ ಎಂದು ತಿಳಿದು ಬಂದಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

