ಹಾವೇರಿ

ಆಸ್ಪತ್ರೆಗೆ ಸೌಲಭ್ಯ ಕಲ್ಪಿಸಿ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಜೂ. 18
ಜಿಲ್ಲಾ ಆಸ್ಪತ್ರೆ ಸೇರಿದಂತೆ ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಕಟ್ಟುನಿಟ್ಟಿನ ಆದೇಶ ನೀಡಿದರು.
ಮಂಗಳವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾದರೂ ಆಯಾ ಆರೋಗ್ಯ ಇಲಾಖೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದರು.
ಅಧಿಕಾರಿಯ ಉತ್ತರದಿಂದ ಸಂತುಷ್ಟರಾಗದ ಸಚಿವರು, ಸರ್ಕಾರದಿಂದ ಸಾಕಷ್ಟು ಅನುದಾನ ವ್ಯಯಿಸಿದರೂ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಣುವುದಿಲ್ಲ ಎಂದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ವಿದ್ಯುತ್ ಸಮಸ್ಯೆಯೂ ಇರದಂತೆ ಕಟ್ಟೆಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಏಳು ತಾಲೂಕಿನ ಆಸ್ಪತ್ರೆಗಳಲ್ಲಿ ಇಂತಹ ಸಮಸ್ಯೆ ಎದುರಾಗದಂತೆ ಹೆಸ್ಕಾಂ ಹಾಗೂ ಆರೋಗ್ಯ ಇಲಾಖೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ತ್ರೈಮಾಸಿಕ ಕೆಡಿಪಿ: ಮುಂಬರುವ ದಿನಗಳಲ್ಲಿ ಜಿಲ್ಲೆಯ 2-3 ತಾಲೂಕುಗಳನ್ನು ಒಂದುಗೂಡಿಸಿ ಕೆಡಿಪಿ ಸಭೆ ನಡೆಸಲಾಗುವುದು. ಈ ಸಭೆಗೆ ಹಾಜರಾಗುವ ಪ್ರತಿಯೊಬ್ಬ ಅಧಿಕಾರಿಯೂ ಆಯಾ ತಾಲೂಕಿನ ಸಂಪೂರ್ಣ ಮಾಹಿತಿ ಹೊಂದಿರಬೇಕು. ಅಲ್ಲದೇ ಆಯಾ ತಾಲೂಕಿನಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಲ್ಲಿನ ಶಾಸಕರಿಗೆ ಎಲ್ಲ ಮಾಹಿತಿ ಒಪ್ಪಿಸಿರಬೇಕು ಎಂದೂ ಸಚಿವ ಹುಕ್ಕೇರಿ ಆದೇಶಿಸಿದರು. ಶಾಸಕರು, ಸೂಚಿಸುವ ಕೆಲಸ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವ ಮೂಲಕ ಅಭಿವೃದ್ಧಿಯ ಮಂತ್ರವನ್ನು ಹೊತ್ತುಕೊಂಡು ಅಧಿಕಾರಕ್ಕೇರಿರುವ ಸರ್ಕಾರದೊಂದಿಗೆ ಅಧಿಕಾರಿ ವರ್ಗ ಕೈಜೋಡಿಸಬೇಕೆಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.