ಹಾವೇರಿ

22ರಂದು ವಸತಿ ಸಮುಚ್ಛಯ ಉದ್ಘಾಟನೆ

Published On :

ಹಾವೇರಿ: ಹಾವೇರಿ ಜಿಲ್ಲಾ ನ್ಯಾಯಾಲಯಗಳ ನೂತನ ಸಂಕೀರ್ಣ, ವಕೀಲರ  ಭವನ ಮತ್ತು ಸಾಕ್ಷಿದಾರರ ಪ್ರಾಂಗಣ ಹಾಗೂ ನ್ಯಾಯಾಂಗ ಇಲಾಖಾ ಸಿಬ್ಬಂದಿಗಳ  ವಸತಿ ಸಮುಚ್ಛಯದ ಉದ್ಘಾಟನಾ ಸಮಾರಂಭ ಜೂ. 22ರಂದು ಸಂಜೆ 4  ಗಂಟೆಗೆ ನಗರದ ನೂತನ ನ್ಯಾಯಾಲಯಗಳ ಸಂಕೀರ್ಣದಲ್ಲಿ ಜರುಗಲಿದೆ.
ಕರ್ನಾಟಕ ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲ ಅವರು ಉದ್ಘಾಟನೆ ನೆರವೇರಿಸಲಿದ್ದು, ಕರ್ನಾಟಕ ಉಚ್ಚನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಾಧೀಶರು ಹಾಗೂ ನ್ಯಾಯಮೂರ್ತಿಗಳಾದ ಡಾ. ಜವ್ಹಾದ್ ರಹೀಮ್ ಅವರು ಅಧ್ಯಕ್ಷತೆ ವಹಿಸುವರು.
ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮೋಹನ ಎಂ. ಶಾಂತನಗೌಡರ, ಎಸ್. ಅಬ್ದುಲ್ ನಜೀರ್, ಅಶೋಕ ಬಿ. ಹಿಂಚಿಗೇರಿ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಸಚಿವ ಟಿ.ಬಿ. ಜಯಚಂದ್ರ, ಲೋಕೋಪಯೋಗಿ ಇಲಾಖೆ ಸಚಿವ ಡಾ. ಎಚ್. ಮಹದೇವಪ್ಪ ಹಾಗೂ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಅವರು ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಸಂಸದ ಶಿವಕುಮಾರ ಉದಾಸಿ ಮತ್ತು ಶಾಸಕ ರುದ್ರಪ್ಪ ಲಮಾಣಿ ಅವರು ಪಾಲ್ಗೊಳ್ಳುವರೆಂದು ಜಿಲ್ಲಾ ಸತ್ರ ನ್ಯಾಯಾಧೀಶ ಎಚ್.ಪಿ. ಸಂದೇಶ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.