ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಶಿಗ್ಗಾಂವಿ: ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದ ಕೆಳಗೆ ಕಾಣಿಸಿದ ತರಗತಿಗೆ 2012-13ನೇ ಸಾಲಿನಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ಪಿಯುಸಿ ದ್ವಿತೀಯ, ಡಿಇಡಿ ದ್ವೀತಿಯ, ಮುಂತಾದ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿದ್ದರೆ. ರು. 750, ಪದವಿ- ಬಿಎ, ಬಿಎಸ್ಸಿ, ಬಿಕಾಂ, ಎಲ್ಎಲ್ಬಿ ಮುಂತಾದ ಪದವಿ ಕೋರ್ಸ್ಗಳ ಅಂತಿಮ ಪರೀಕ್ಷೆಯಲ್ಲಿ ಪಾಸಾದವರಿಗೆ ರು. 1000, ಸ್ನಾತಕೋತ್ತರ ಪದವಿ ಎಂಎ, ಎಂಎಸ್ಸಿ, ಎಂಕಾಂ, ಎಂಇಡಿ ಮುಂತಾದ ಸ್ನಾತಕೋತ್ತರ ಪದವಿ ಕೋರ್ಸ್ಗಳ ಅಂತಿಮ ಪರೀಕ್ಷೆಯಲ್ಲಿ ಪಾಸಾಗಿದ್ದರೆ ರು. 1250,4,ಡಿಗ್ರಿ ಮುಂತಾದ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿದ್ದರೆ. ರು. 1500 ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಅರ್ಜಿದಾರರು ಸಂಬಂಧಿಸಿದ ಕೋರ್ಸ್ಗಳ ಅಂತಿಮ ಪರೀಕ್ಷೆಗಳಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿರಬೇಕು. ಅರ್ಹ ಅಭ್ಯರ್ಥಿಗಳು ಅರ್ಜಿ ಫಾರ್ಮಗಳನ್ನು ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯದಿಂದ ಕೆಲಸದ ವೇಳೆಯಲ್ಲಿ ಉಚಿತವಾಗಿ ಪಡೆಯಬೇಕು.
ಅರ್ಜಿದಾರರು ಕಡ್ಡಾಯವಾಗಿ ಶಿಗ್ಗಾಂವಿ ತಾಲೂಕಿನ ವ್ಯಾಪ್ತಿಯೊಳಗೆ ಬರುವ ಶಾಲೆ, ಕಾಲೇಜುಗಳಲ್ಲಿ ಓದಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿಯ ಜೊತೆಗೆ ದೃಢೀಕರಿಸಿದ ಅಂಕಪಟ್ಟಿ ಹಾಗೂ ತಹಸೀಲ್ದಾರ್ ಅವರಿಂದ ಪಡೆದ ಜಾತಿ ಪ್ರಮಾಣ ಪತ್ರದ ದೃಢೀಕರಿಸಿದ ಪತ್ರ ಲಗತ್ತಿಸಬೇಕು.
ಅರ್ಜಿ ಸ್ವೀಕರಿಸಲು 31 ಜುಲೈ, 2013 ಕೊನೆಯ ದಿನವಾಗಿದೆ. ಅಪೂರ್ಣ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿಳ್ಕೋಡುಗೆ ಸಮಾರಂಭ
ಶಿಗ್ಗಾಂವಿ: ತಾಲೂಕಿನ ಬಾಡ ಗ್ರಾಮದ ಕನಕದಾಸರ ಅರಮನೆ ಆವರಣದಲ್ಲಿ ಜೂ. 21ರಂದು ಬೆಳಗ್ಗೆ 11 ಗಂಟೆಗೆ ಶಿಗ್ಗಾಂವಿ ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಡಿ.ಇಡಿ. ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುವ ಸಮಾರಂಭ ಏರ್ಪಡಿಸಲಾಗಿದೆ.
ಕಾಲೇಜಿನ ಪ್ರಾಚಾರ್ಯ ಮಂಜುಳಾ ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಾಹಿತಿ ಹಾಗೂ ಹಾಸ್ಯ ಕಲಾವಿದರಾದ ಅಶೋಕ ಕೊಂಡ್ಲ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮಾರುತಿ ಶಿಡ್ಲಾಪುರ ಹಾಗೂ ಚನ್ನಪ್ಪ ಕುನ್ನೂರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜು ಒಕ್ಕೂಟದ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ. ನೀರಲಗಿ ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ಶಿಗ್ಗಾಂವಿ: ತಾಲೂಕು ಸಮಾಜ ಕಲ್ಯಾಣ ಇಲಾಖೆ ಇಲ್ಲಿಯ ಪ.ಜಾತಿ, ಪ.ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ 2013-14ನೇ ಸಾಲಿಗೆ ಪ್ರವೇಶಕ್ಕಾಗಿ ಪ.ಜಾತಿ, ಪ.ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿನಮೂನೆಯಲ್ಲಿ ಮಾಹಿತಿಯನ್ನು ಸ್ಪಷ್ಟವಾಗಿ ತುಂಬಿ ಸಂಬಂಧಿಸಿದ ದಾಖಲೆಗಳೊಂದಿಗೆ ಈ ಕಾರ್ಯಾಲಯಕ್ಕೆ 15-07-2013ರ ಸಾಯಂಕಾಲ 5.30 ರೊಳಗಾಗಿ ತಲುಪಿಸುವಂತೆ ಸಲ್ಲಿಸಬೇಕು. ಪಿಯುಸಿ ಪ್ರಥಮ ವರ್ಷದಿಂದ ಪದವಿವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರವಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಈ ಕೆಳಗಿನ ನಿಯಮಾವಳಿಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಶಿಗ್ಗಾಂವ ಟೌನ್ನಲ್ಲಿರುವ ಕಾಲೇಜುಗಳಲ್ಲಿ ಪ್ರವೇಶ ಹೊಂದಿರಬೇಕು. ಹಿಂದಿನ ತರಗತಿಯಲ್ಲಿ (2012-2013) ಪಾಸಾಗಿರಬೇಕು ಹಾಗೂ ಕಳೆದ ಸಾಲಿನ ಅಂಕಪಟ್ಟಿಯ ಧೃಢೀಕೃತ ಝರಾಕ್ಸ್ ಪ್ರತಿ ಲಗತ್ತಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪ.ಜಾತಿ, ಪ.ವರ್ಗದ ಗುಂಪಗಳಿಗೆ ಸೇರಿದವರಾಗಿರಬೇಕು. ಅರ್ಜಿ ಜೊತೆಯಲ್ಲಿ ಹಿಂದಿನ ಸಾಲಿನ ಅಂಕಪಟ್ಟಿ , ಜಾತಿ ಪ್ರಮಾಣ ಪತ್ರ, ವಾರ್ಷಿಕ ಆದಾಯ ಪ್ರಮಾಣ ಪತ್ರ, ( 2 ಲಕ್ಷಆದಾಯ ಮಿತಿಯೊಳಗಿರಬೇಕು). ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳ ವಾಸಸ್ಥಳ 8 ಕಿ.ಮೀ.ಗಿಂತ ದೂರವಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳು ಸಂಬಂಧಿಸಿದ ಕಾಲೇಜು ಪ್ರಾಚಾರ್ಯರಿಂದ ನಿಗದಿತ ಅರ್ಜಿ ಫಾರಂಗೆ ದೃಢೀಕರಣ ಪತ್ರ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳು 200 ಎಚ್ಚರಿಕೆ ಹಣವೆಂದು ಭರ್ತಿ ಮಾಡಬೇಕು. ಅಂಗವಿಕಲ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಸ್ಥಾನ ಮೀಸಲಿರಿಸಿದೆ. ನಿಗದಿತ ಅರ್ಜಿ ಫಾರ್ಮ್ ಕಾರ್ಯಾಲಯದಿಂದ ಸರ್ಕಾರಿ ರಜೆ ದಿವಸ ಹೊರತುಪಡಿಸಿ ಕಚೇರಿ ವೇಳೆ ಉಚಿತವಾಗಿ ಪಡೆದುಕೊಳ್ಳಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

