ಹಾವೇರಿ

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ

Published On :

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಜೂ. 20
ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ಕಳುಹಿಸುವ ಬದಲು ಅವರಿಗೆ ಒಳ್ಳೆಯ ಶಿಕ್ಷಣ ಕೊಡಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎನ್ನುವ ಹಾಗೇ ಎಳೆಯ ವಯಸ್ಸಿನಲ್ಲಯೇ ಮಕ್ಕಳಿಗೆ ಯೋಗ, ಜೀವನ ಶಿಕ್ಷಣದಂತಹ ಉತ್ತಮ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಪಣಾಧಿಕಾರಿ ಎಸ್.ಎಲ್. ಭಜಂತ್ರಿ ಹೇಳಿದರು.
ಬಾಡ ಕ್ಲಸ್ಟರ್‌ನ ಕುಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ಏರ್ಪಡಿಸಿದ್ದ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತಾನಾಡಿದರು.
ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಈ ಬಾಲಕಾರ್ಮಿಕ ಪದ್ಧತಿ ಮಕ್ಕಳ ಭವಿಷ್ಯ ಹಾಳು ಮಾಡುತ್ತದೆ. 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಜಾರಿಗೊಳಿಸಿದ್ದು, ಎಲ್ಲರೂ ಪಾಲಿಸುವ ಮೂಲಕ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಬೇಕು ಎಂದರು.
ಬಾಡ ಕ್ಲಸ್ಟರನ ಸಂಪನ್ಮೂಲ ವ್ಯಕ್ತಿ ಎಸ್.ಆರ್. ತುಪ್ಪದ ಮಾತನಾಡಿ, ನಮ್ಮಲ್ಲಿ ಎಷ್ಟೇ ಕಠಿಣವಾದ ಕಾನೂನು ಬಂದರೂ ಬಡತನ, ಅಜ್ಞಾನ, ಅನಕ್ಷರತೆ ಅಸಂಘಟಿತ ವಲಯದ ಉದ್ಯಮಿಗಳಿಂದ ಈ ಅನಿಷ್ಟ ಪದ್ಧತಿ ಇನ್ನು ಜೀವಂತವಾಗಿರುವುದು ವಿಷಾದದ ಸಂಗತಿ ಎಂದರು. ಕಾರ್ಯಕ್ರಮದ ಆಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಣ್ಣ ವಾಲ್ಮೀಕಿ ವಹಿಸಿದ್ದರು.
ಸಮಾರಂಭದಲ್ಲಿ ಶಂಭಣ್ಣ ಕಡಕೋಳ, ಗುಡ್ಡಪ್ಪ ಕೂಡಲ, ಮಳ್ಳಪ್ಪ ಜಾಡರ, ಎಸ್.ಆರ್. ತುಪ್ಪದ, ವಿ.ಎಸ್.ಬಡಿಗೇರ್, ಸಿ.ಜಿ. ಬಡಿಗೇರ, ರೇಣುಕಾ ಕೋರಿ, ಎಂ.ವಿ. ಪಾಟೀಲ, ಕೆ.ಪಿ. ಹೇಮಾ, ಮಂಜುಳಾ ಅಣಜಿ, ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.