ಇಂದು ಅಮೃತ ಮಹೋತ್ಸವ
ಶಿಗ್ಗಾಂವಿ: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಸಮಾರಂಭ ಜೂ. 30ರಂದು 10ಕ್ಕೆ ಪಟ್ಟಣದ ಗುರುಭವನದಲ್ಲಿ ನಡೆಯಲಿದೆ. ಬಂಕಾಪುರ ಅರಳಲೆ ಹಿರೇಮಠದ ರೇವಣಸಿದ್ದೇಶ್ವರ ಶ್ರೀಗಳು, ಗಂಜೀಗಟ್ಟಿ ಶಿವಲಿಂಗೇಶ್ವರ ಶ್ರೀಗಳು, ವಿರಕ್ತಮಠದ ಸಂಗನಬಸವ ಶ್ರೀಗಳವರ ಸಾನ್ನಿಧ್ಯದಲ್ಲಿ ನಡೆಯವ ಸಮಾರಂಭದಲ್ಲಿ ಮೌಲಾನಾ ಶಬ್ಬೀರಹ್ಮದ ಸಾಹೇಬ ಅಮೃತ ಮಹೋತ್ಸವ ಶಿಲಾನ್ಯಾಸ ನೆರವೇರಿಸಲಿದ್ದು, ಶಾಸಕ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಪ್ರಹ್ಲಾದ ಜೋಶಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಸಂಘದ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಜಿಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ, ತಾಪಂ ಅಧ್ಯಕ್ಷೆ ಉಷಾ ಬಿಳಿಕುದರಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಮಾಜಿ ಶಾಸಕರಾದ ರಾಜಶೇಖರ ಸಿಂಧೂರ, ಸೈಯದ ಅಜ್ಜಂಪೀರ ಖಾದ್ರಿ, ಜಿಪಂ ಸದಸ್ಯರಾದ ಬಿ.ಟಿ. ಇನಾಮತಿ, ಶಶಿಧರ ಹೊನ್ನಣ್ಣನವರ, ಎಪಿಎಂಸಿ ಅಧ್ಯಕ್ಷ ವೀರನಗೌಡ್ರ ಪಾಟೀಲ, ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಾದ ಎಸ್.ಬಿ ಕೊಡ್ಲಿ, ಅಧಿಕಾರಿಗಳಾದ ಎಂ.ಡಿ. ಬಳ್ಳಾರಿ, ಪಿ.ಎಂ. ನಾಗಶಯನ, ಶಶಿಕಲಾ ಪಾಳೇದ, ಎಂ.ಎಫ್. ಬಾಕರ್, ಆರ್.ವ್ಹಿ. ಶೆಟ್ಟೆಪ್ಪನವರ, ಸಿ.ಡಿ. ಯತ್ತಿನಹಳ್ಳಿ, ಎಂ.ಎಲ್. ಹೊಳಲಾಪುರ, ಶಂಕರಗೌಡ್ರ ಪಾಟೀಲ, ಭರಮಜ್ಜ ನವಲಗುಂದ, ಬಿ.ಎಫ್. ಯಲಿಗಾರ, ಎಚ್.ಆರ್. ದುಂಡಿಗೌಡ್ರ ಅತಿಥಿಗಳಾಗಿ ಆಗಮಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

