ಹಾವೇರಿ

ಕೋರ್ಸ್ ಆರಂಭ

Published On :

ಹಾನಗಲ್ಲ:  ಹಾನಗಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಸ್ನಾತಕೋತ್ತರ ಕೋರ್ಸ್ಗಳಾದ ಎಂಎ (ಕನ್ನಡ) ಹಾಗೂ ಎಂಕಾಂಗಳ ಬೋಧನೆ ಆರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಸಿ.ಎಂ. ಉದಾಸಿ ತಿಳಿಸಿದರು. ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಅವಕಾಶ ಕಲ್ಪಿಸಲು ಕಳೆದ ವರ್ಷದಲ್ಲಿಯೇ ಈ ಕೋರ್ಸ್ಗಳನ್ನು ಮಂಜೂರಿ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕರ್ನಾಟಕ ಸರ್ಕಾರ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಗಳು ಹೊಸದಾಗಿ ಎಂಎ (ಕನ್ನಡ) ಹಾಗೂ ಎಂಕಾಂ ಕೋರ್ಸ್ಗಳನ್ನು ಅಗತ್ಯ ಕಳೆದ ಮಾರ್ಚ್ ತಿಂಗಳಿನಲ್ಲಿಯೇ ಅನುಮತಿ ನೀಡಿದ್ದವು. ಈ ಹಿನ್ನೆಲೆಯಲ್ಲಿ 2013-14ರಿಂದಲೇ ಈ ಕೋರ್ಸ್ಗಳಿಗೆ ಪ್ರವೇಶ ನೀಡಲು ಕವಿವಿ ಈಗಾಗಲೇ ಪತ್ರಿಕಾ ಜಾಹೀರಾತು ಮೂಲಕ ಪ್ರಕಟಣೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಜುಲೈ 15 ಕೊನೆ ದಿನಾಂಕವಾಗಿದ್ದು, ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆಯಬೇಕೆಂದು ಉದಾಸಿ ತಿಳಿಸಿದ್ದಾರೆ.
ಶಿಗ್ಗಾಂವಿ: ಇಂದು ಸಭೆ
ಶಿಗ್ಗಾಂವಿ:  ತಾಲೂಕು ಜಂಗಮಾಭಿವೃದ್ಧಿ ಸಂಘದ ಕಾರ್ಯಕಾರಣಿ ಸಭೆಯನ್ನು ಜೂ. 30ರಂದು ಮಧ್ಯಾಹ್ನ 2ಕ್ಕೆ ಪಟ್ಟಣದ ವಿರಕ್ತಮಠದಲ್ಲಿ ಕರೆಯಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎ.ಕೆ. ಅದ್ವಾನಿಮಠ ವಹಿಸುವರು. ಸಮಾಜ ಬಾಂಧವರು, ಹಿತ ಚಿಂತಕರು ಪಾಲ್ಗೊಂಡು ತಮ್ಮ ಸಲಹೆ ಸೂಚನೆ ನೀಡಬೇಕೆಂದು ಕಾರ್ಯದರ್ಶಿ ಎಸ್.ಬಿ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಪರಿಸರ ದಿನಾಚರಣೆ
ಹಿರೇಕೆರೂರು: ಬಿ.ಜಿ. ಬಣಕಾರ ಪ್ರತಿಷ್ಠಾನ ಸೋಶಿಯಲ್ ಟ್ರಸ್ಟ್, ಯು.ಬಿ. ಬಣಕಾರ ಅಭಿಮಾನಿ ಬಳಗ ಹಾಗೂ ಅರಣ್ಯ ಇಲಾಖೆ ಇವರ ಸಹಯೋಗದಲ್ಲಿ ತಾಲೂಕಿನ ಗುಂಡಗಟ್ಟಿ ಗ್ರಾಮದ ಮರಡಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜೂ. 30ರಂದು ಬೆಳಗ್ಗೆ 11 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಏರ್ಪಡಿಸಲಾಗಿದೆ. ವಿಭಾಗೀಯ ಅರಣ್ಯಾಧಿಕಾರಿ ಎ.ಬಿ. ಮೊರೆಪ್ಪನವರ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನಸಭಾ ಮಾಜಿ ಅಧ್ಯಕ್ಷ ಬಿ.ಜಿ. ಬಣಕಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಯು.ಬಿ. ಬಣಕಾರ, ತಾಪಂ ಅಧ್ಯಕ್ಷೆ ಗದಿಗೆವ್ವ ಬಿದರಿ, ಜಿಪಂ ಸದಸ್ಯರಾದ ಸುಜಾತಾ ಕೊಟಗಿಮನಿ, ಪಾರ್ವತವ್ವ ಭೋಗಾವಿ, ಶಾಂತಾ ಹಾದಿಮನಿ, ತಾಪಂ ಉಪಾಧ್ಯಕ್ಷ ರೂಪಾ ಆಡೂರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಳ್ಳಿ, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಮಲ್ಲಿಕಾರ್ಜುನ ಬುರುಡಿಕಟ್ಟಿ, ತಾಪಂ ಸದಸ್ಯರಾದ ಶಿವಪ್ಪ ಗಡಿಯಣ್ಣನವರ, ನಿರ್ಮಲಾ ಗುಬ್ಬಿ, ಅನ್ನಪೂರ್ಣ ಗಾಳಿ, ಚಂದ್ರು ಅಣ್ಣಪ್ಪನವರ, ಪಪಂ ಸದಸ್ಯ ಮಹೇಂದ್ರ ಬಡಳ್ಳಿ ಮುಂತಾದವರು ಆಗಮಿಸಲಿದ್ದಾರೆ ಎಂದು ಯು.ಬಿ. ಬಣಕಾರ ಅಭಿಮಾನಿ ಬಳಗದ ಅಧ್ಯಕ್ಷ ದತ್ತಾತ್ರೇಯ ರಾಯ್ಕರ, ಉಪಾಧ್ಯಕ್ಷ ಮಹೇಶ ಗುಬ್ಬಿ, ಕಾರ್ಯದರ್ಶಿ ಸಿದ್ದನಗೌಡ ನರೇಗೌಡ್ರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.