ವಸತಿ ಫಲಾನುಭವಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ: ರುದ್ರಪ್ಪ ಲಮಾಣಿ
ಕನ್ನಡಪ್ರಭ ವಾರ್ತೆ, ಹಾವೇರಿ, ಜೂ. 29
ವಿವಿಧ ವಸತಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ರುದ್ರಪ್ಪ ಲಮಾಣಿ ಅಧಿಕಾರಿಗಳಿಗೆ ಸೂಚಿಸಿದರು.
ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪಿಡಿಓ ಅಧಿಕಾರಿಗಳ ಸಭೆಯಲ್ಲಿ ಇಂದಿರಾ ಆವಾಸ್, ಅಂಬೇಡ್ಕರ್, ರಾಜೀವಗಾಂಧಿ, ಬಸವ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ತಾಲೂಕಿನಲ್ಲಿ ಉಳ್ಳವರಿಗೆ ಮನೆ ಮಂಜೂರು ಮಾಡಲಾಗಿದೆ. ರು. 70-80 ಲಕ್ಷ ಮನೆ ನಿರ್ಮಿಸಿಕೊಂಡವರು ಆಶ್ರಯ ಫಲಾನುಭವಿಗಳಾಗಿದ್ದಾರೆ. ಕೆಲವರು ವಸತಿ ಯೋಜನೆ ಪೂರ್ಣ ಹಣ ಪಡೆದರೂ ಈವರೆಗೂ ಮನೆ ನಿರ್ಮಿಸಿಕೊಂಡಿಲ್ಲ. ಅಂತವರ ವಿರುದ್ಧ ಪಿಡಿಓಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಆದೇಶಿಸಿದರು.
ಸರ್ಕಾರದ ಅನುದಾನ ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ನಿಗಾವಹಿಸಬೇಕಾದ ಕರ್ತವ್ಯ ಅಧಿಕಾರಿಗಳ ಮೇಲಿದೆ ಎಂದ ಅವರು, ಗ್ರಾಮೀಣ ಭಾಗದಲ್ಲಿ ಮನೆ ಮಂಜೂರಿಯಾದವರು ಬಿಡುಗಡೆಯಾದ ಮೊದಲ ಕಂತಿನಲ್ಲಿ ಅಪೂರ್ಣ ಮನೆ ಕಟ್ಟಿಕೊಂಡಿದ್ದಾರೆ. ಮಳೆಗಾಲ ಆರಂಭಗೊಂಡಿದ್ದರಿಂದ ಅಲ್ಲಿನ ಜನತೆ ತೊಂದರೆಯಲ್ಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಆನ್ಲೈನ್ ಮೂಲಕ ಮನೆಗಳ ನೋಂದಣಿ ವಿಳಂಬವಾಗುತ್ತಿದೆ ಎಂಬ ದೂರು ವ್ಯಾಪಕವಾಗಿ ಕೇಳಿಬರುತ್ತಿದ್ದು, ನೋಂದಣಿ ಕಾರ್ಯವನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಿ ಫಲಾನುಭವಿಗಳಿಗೆ ಮನೆ ಕಟ್ಟಲು ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದರು.
ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಗೆ ದೊಡ್ಡ ಪ್ರಮಾಣದಲ್ಲಿ ಹಣ ಬಿಡುಗಡೆಯಾಗಿದೆ. ಕಾಮಗಾರಿ ಸರಿಯಾಗಿ ಆಗದೆ ಹಣ ದುರ್ಬಳಕೆಯಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಕಾಮಗಾರಿ ಕೈಗೊಂಡಿರುವ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಪಿಡಿಓಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಲಮಾಣಿ ಎಚ್ಚರಿಕೆ ನೀಡಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

