ಹಾವೇರಿ

ಅಧಿಕಾರದಾಸೆಗೆ ಬಿಜೆಪಿ ಬಲಿ

Published On :

ಬ್ಯಾಡಗಿ: ಬಿಎಸ್‌ವೈ ಸಾಧನೆ ಮುಚ್ಚಿಡಲು ಸಾಧ್ಯವಿಲ್ಲ. ಬಿಜೆಪಿಯನ್ನು ಹರಕೆ ಕುರಿ ಮಾಡಿಕೊಂಡಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅಧಿಕಾರದಾಸೆಗೆ ಪಕ್ಷವನ್ನೇ ಬಲಿ ಕೊಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನ ಭವಿಷ್ಯ ನುಡಿದರು.
ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಪಟ್ಟಣದ 11ನೇ ವಾರ್ಡಿನಲ್ಲಿ ಕೆಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಸಂದರ್ಭ ಮಾತನಾಡಿದರು.
ಪ್ರಾದೇಶಿಕ ಪಕ್ಷಗಳಿಂದ ಅಭಿವೃದ್ಧಿ: ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವೆಂಬುದನ್ನು ರಾಜ್ಯದ ಜನತಗೆ ತೋರಿಸುವ ಉದ್ದೇಶದಿಂದ ಕೆಜೆಪಿ ಉದಯವಾಗಿದೆ ಹೊರತು ಕೇವಲ ಅಧಿಕಾರದ ಆಸೆಯಿ ಂದಲ್ಲ. ಸೋಲಿನ ಭೀತಿಯಲ್ಲಿರುವ ಬಿಜೆಪಿ ನಾಯಕರು ಅದಕ್ಕೆ ವಿಶೇಷ ಅರ್ಥ ಕೊಡುವ ಪ್ರಯತ್ನ ನಡೆಸಿದ್ದಾರೆ ಎಂದರು.
ಬಿಎಸ್‌ವೈ ಅಭಿವೃದ್ಧಿ ಹರಿಕಾರ: ಕಾರ್ಯಕರ್ತರೇ ಪಕ್ಷದ ಆಸ್ತಿ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿ ವರಿಷ್ಠರು, ಅಭಿವೃದ್ಧಿ ಹರಿಕಾರ ಬಿಎಸ್‌ವೈರಂತಹ ಪ್ರಾಮಾಣಿಕ ಕಾರ್ಯಕರ್ತನನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಆರೋಪಿಸಿದರು. ಸೋಲಿನ ಭೀತಿಯಲ್ಲಿರುವ ಬಿಜೆಪಿ ನಾಯಕರು ಸಿಎಂ ಜಗದೀಶ ಶೆಟ್ಟರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸುವುದಾಗಿ ಹೇಳಿಕೊಳ್ಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು.
ಕಲ್ಯಾಣ ಕರ್ನಾಟಕ: ರಾಜ್ಯವನ್ನು ಕಲ್ಯಾಣ ಕರ್ನಾಟಕವನ್ನಾಗಿಸುವ ಕನಸು ಬಿಎಸ್‌ವೈ ಹೊಂದಿದ್ದು, ನಂಜುಂಡಪ್ಪ ವರದಿ ಅನುಷ್ಠಾನಗೊಳಿಸಲು ಅನುದಾನ ಒದಗಿಸುವ ಮೂಲಕ ಉತ್ತರ ಕರ್ನಾಟಕಕ್ಕೆ ಆದಂತಹ ಆನ್ಯಾಯ ಸರಿಪಡಿಸಿ ತನ್ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎಂದರು. ಈ ಸಂದರ್ಭ ಮಾಜಿ ಶಾಸಕ ಸುರೇಶಗೌಡ, ಮುರಿಗೆಪ್ಪ ಶೆಟ್ಟರ್, ಗಂಗಣ್ಣ ಎಲಿ, ರವೀಂದ್ರ ಪಟ್ಟಣಶೆಟ್ಟಿ ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.