16ರಂದು ವಿವಿಧ ಸ್ಪರ್ಧೆ
ಹಾವೇರಿ: ಅಂತರ್ ವಿವಿ ಮಟ್ಟದ ಚರ್ಚಾ ಹಾಗೂ ಪ್ರಬಂಧ ಸ್ಪರ್ಧೆ ಮಾ. 16ರಂದು ಬೆಳಗ್ಗೆ 10.30ಕ್ಕೆ ಹಾನಗಲ್ಲ ತಾಲೂಕು ಅಕ್ಕಿಆಲೂರಿನ ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಲಿದೆ. ಪದವಿ ವಿದ್ಯಾರ್ಥಿಗಳು ಮಾತ್ರ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಮಠ, ಮಾನ್ಯಗಳಿಗೆ ಸರ್ಕಾರದ ಅನುದಾನ ನೀಡುವುದು ಸೂಕ್ತವೇ ಎಂಬ ವಿಷಯವಾಗಿ ಚರ್ಚಾಸ್ಪರ್ಧೆ ಹಾಗೂ ಭ್ರಷ್ಟಾಚಾರದಲ್ಲಿ ಶಿಕ್ಷಣದ ಪಾತ್ರ ಕುರಿತಂತೆ ಪ್ರಬಂಧ ಸ್ಪರ್ಧೆ ಜರುಗಲಿದೆ. ಪ್ರತಿ ವಿದ್ಯಾರ್ಥಿಗೆ ರು. 50 ಪ್ರವೇಶ ಶುಲ್ಕವಿದೆ ಎಂದು ಪ್ರಾಚಾರ್ಯ ಡಾ. ಎಂ.ಎನ್. ಕಡ್ಡಿಪುಡಿ ತಿಳಿಸಿದ್ದಾರೆ. ಒಂದು ಕಾಲೇಜಿನಿಂದ ಚರ್ಚಾಸ್ಪರ್ಧೆಗೆ ಒಬ್ಬರು ಪರವಾಗಿ, ಮತ್ತೊಬ್ಬರು ವಿರೋಧವಾಗಿ ಭಾಗವಹಿಸಬಹುದು ಹಾಗೂ ಪ್ರಬಂಧ ಸ್ಪರ್ಧೆಗೆ ಇಬ್ಬರು ವಿದ್ಯಾರ್ಥಿಗಳಿಗೆ ಅವಕಾಶವಿದೆ. ಚರ್ಚಾಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಪ್ರವೇಶ ಪತ್ರ ಮತ್ತು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಆಸಕ್ತ ವಿದ್ಯಾರ್ಥಿಗಳು ಮಾ. 13ರೊಳಗಾಗಿ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಚಾಲಕ ಪ್ರೊ. ಲಕ್ಷ್ಮಣ ನಾಯ್ಕ ಎಚ್. ಮೊ- 9986775341ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕೈಮಗ್ಗ ಉತ್ಪನ್ನ ಪ್ರದರ್ಶನ, ಮಾರಾಟ ಮೇಳ
ಹಾವೇರಿ: ಭಾರತ ಸರ್ಕಾರದ ಜವಳಿ ಮಂತ್ರಾಲಯ ಮತ್ತು ಕೈಮಗ್ಗ ಹಾಗೂ ಜವಳಿ ಇಲಾಖೆ ಆಶ್ರಯದಲ್ಲಿ ಜಿಲ್ಲಾಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮಾ. 6ರಿಂದ 10ರ ವರೆಗೆ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜರುಗಲಿದೆ. ಮಾ. 6ರಂದು ಸಂಜೆ 4ಕ್ಕೆ ಪ್ರಭಾರ ಜಿಲ್ಲಾಧಿಕಾರಿ ಜಿ. ಜಗದೀಶ ಉದ್ಘಾಟಿಸುವರು. ಅತಿಥಿಗಳಾಗಿ ಜಿಪಂ ಉಪ ಕಾರ್ಯದರ್ಶಿ ಜಿ. ಗೋವಿಂದಸ್ವಾಮಿ, ಬೆಂಗಳೂರು ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕ ಝರಪ್ಪ ಮೊಳಕೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ವಿ.ಎಂ. ಸೂರಣಗಿ, ಬೆಂಗಳೂರು ನೇಕಾರರ ಸೇವಾ ಕೇಂದ್ರದ ಉಪ ನಿರ್ದೇಶಕ ವಿ.ಕೆ. ಹರಿಪ್ರಸಾದ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಎಂ. ಉಮೇಶಬಾಬು ಹಾಗೂ ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ವಿದ್ಯಾ ಗಣೇಶ ಪಾಲ್ಗೊಳ್ಳುವರು ಎಂದು ಜಿಪಂ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಜಿ. ಕೊಣ್ಣೂರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

