ಹಾವೇರಿ

ಮತದಾನಕ್ಕೆ ಬೇಕಾದ ದಾಖಲೆ

Published On :

ಹಾವೇರಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಮತದಾರರು ಸರ್ಕಾರದ ಅಧಿಕೃತವಾದ 21 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಮತಗಟ್ಟೆ ಅಧಿಕಾರಿಗಳಿಗೆ ತೋರಿಸುವುದು ಕಡ್ಡಾಯ ಎಂದು ಪ್ರಭಾರಿ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.
ಮತದಾನ ಮಾಡಲು ಚುನಾವಣಾ ಆಯೋಗ ನೀಡಿದ ಎಪಿಕ್ ಕಾರ್ಡ್ (ಮತದಾರರ ಗುರುತಿನ ಚೀಟಿ) ಅಥವಾ ಈ ಕೆಳಕಂಡ 21 ದಾಖಲೆಗಳಲ್ಲಿ ಒಂದನ್ನು ಹಾಜರುಪಡಿಸಬಹುದು. ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಆದಾಯ ತೆರಿಗೆ ಗುರುತಿನ ಚೀಟಿ (ಪ್ಯಾನ್ ಕಾರ್ಡ್), ರಾಜ್ಯ, ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಘಗಳು ಕೆಲಸಗಾರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ಸಾರ್ವಜನಿಕ ವಲಯದ ಬ್ಯಾಂಕ್, ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಪಾಸ್ ಪುಸ್ತಕ, ಶಿಕ್ಷಣ ಸಂಸ್ಥೆಗಳ ಗುರುತಿನ ಚೀಟಿ, ನೋಂದಾಯಿತ ಡೀಡ್‌ಗಳು, ಪಟ್ಟಾ ಮುಂತಾದ ಆಸ್ತಿ ದಾಖಲೆಗಳು, ಪಡಿತರ ಚೀಟಿ (ರೇಷನ್ ಕಾರ್ಡ್), ಸಕ್ಷಮ ಪ್ರಾಧಿಕಾರ ನೀಡಿರುವ ಪ್ರಮಾಣಪತ್ರಗಳು, ಪಿಂಚಣಿ ಪಾವತಿ ಆದೇಶಗಳು, ಮಾಜಿ ಯೋಧರ ಪಿಂಚಣಿ ಪುಸ್ತಕ, ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ
ದಾಖಲೆಗಳು, ವೃದ್ಧಾಪ್ಯ -ವಿಧವಾ ವೇತನ ಆದೇಶಗಳು, ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿ, ಸಕ್ಷಮ ಪ್ರಾಧಿಕಾರ ನೀಡಿರುವ ಪರವಾನಿಗೆ. ಅಂಗವಿಕಲರಿಗೆ ಪ್ರಾಧಿಕಾರ ನೀಡಿರುವ ಗುರುತಿನ ಚೀಟಿ, ಮಾಜಿ ಯೋಧರ ಸಿಎಸ್‌ಡಿ ಕ್ಯಾಂಟೀನ್ ಕಾರ್ಡ್, ಸಂಧ್ಯಾ ಸುರಕ್ಷಾ ಯೋಜನೆಯ ಗುರುತಿನ ಚೀಟಿ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ನೀಡಿರುವ ಉದ್ಯೋಗ ಕಾರ್ಡ್, ಯಶಸ್ವಿನಿ ಕಾರ್ಡ್, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಪಂಗಳು ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೀಡಿರುವ ಸೇವಾ ಗುರುತಿನ ಚೀಟಿ, ಹಿರಿಯ ನಾಗರಿಕರ ಗುರುತಿನ ಚೀಟಿ, ತಾತ್ಕಾಲಿಕ ಮೂಲ ಪಡಿತರ ಚೀಟಿ, ಆರೋಗ್ಯ ವಿಮಾ ಯೋಜನೆ ಸ್ಮಾರ್ಟ್ ಕಾರ್ಡ್‌ಗಳು (ಕಾರ್ಮಿಕ ಮಂತ್ರಾಲಯ ಯೋಜನೆ) ಗುರುತಿನ ದಾಖಲೆಗಳಾಗಿ ಪರಿಗಣಿತವಾಗಿವೆ. ಈ ಎಲ್ಲದರಲ್ಲೂ ಭಾವಚಿತ್ರ ಇರುವುದು ಕಡ್ಡಾಯ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.