ಕೆಜೆಪಿ ಸದಸ್ಯರಿಗೆ ಇಂದು ಸನ್ಮಾನ
ಬ್ಯಾಡಗಿ: ಕೆಜೆಪಿ ತಾಲೂಕು ಘಟಕ ಇತ್ತೀಚೆಗೆ ಜರುಗಿದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದಿಂದ ಆಯ್ಕೆಯಾದ ನೂತನ ಸದಸ್ಯರಿಗೆ ಮಾ. 16ರಂದು ಸಂಜೆ 4 ಘಂಟೆಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ. ಇಲ್ಲಿನ ಶ್ರೀ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಸುರೇಶಗೌಡ ವಹಿಸಲಿದ್ದು, ಮಾಜಿ ಸಚಿವ ಸಿ.ಎಂ. ಉದಾಸಿ, ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನ, ಶಹರ ಘಟಕದ ಅಧ್ಯಕ್ಷ ಗಂಗಣ್ಣ ಎಲಿ, ಕನ್ನಪ್ಪ ಕೊಪ್ಪದ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಮುರಿಗೆಪ್ಪ ಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಕೆಜೆಪಿ ಸಭೆ
ಹಿರೇಕೆರೂರು: ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿರುವ ಕರ್ನಾಟಕ ಜನತಾ ಪಕ್ಷದ ವತಿಯಿಂದ ಮಾ. 16ರಂದು ಬೆಳಗ್ಗೆ 11ಕ್ಕೆ ಪಟ್ಟಣದ ಗುರುಭವನದಲ್ಲಿ ಮತದಾರರಿಗೆ ಕೃತಜ್ಞತೆ ಸಮರ್ಪಣಾ ಸಮಾರಂಭ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಯ ಸಿದ್ಧತೆ ಕುರಿತಂತೆ ಚರ್ಚಿಸಲು ಸಭೆ ಕರೆಯಲಾಗಿದೆ. ಸಭೆಯಲ್ಲಿ ಪಕ್ಷದ ಮುಖಂಡರಾದ ಮಾಜಿ ಸಚಿವ ಸಿ.ಎಂ. ಉದಾಸಿ, ಮಾಜಿ ಸ್ಪೀಕರ್ ಬಿ.ಜಿ. ಬಣಕಾರ, ಮಾಜಿ ಶಾಸಕ ಯು.ಬಿ. ಬಣಕಾರ, ಇನ್ನಿತರ ಮುಖಂಡರು ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೆಜೆಪಿ ತಾಲೂಕಾಧ್ಯಕ್ಷ ಮಹೇಶ ಗುಬ್ಬಿ ತಿಳಿಸಿದ್ದಾರೆ.
18ರಂದು ವಿದ್ಯುತ್ ವ್ಯತ್ಯಯ
ಹಾವೇರಿ: ತಿಳವಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ. 18ರಂದು 110 ಕೆವಿ ತುರ್ತು ನಿರ್ವಹಣಾ ಕಾಮಗಾರಿ ಜರುಗಲಿದೆ. 110 ಕೆವಿ ತಿಳವಳ್ಳಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ 33 ಕೆವಿ ಕಲಕೇರಿ, 33 ಕೆವಿ ಶೇಷಗಿರಿ ಹಾಗೂ ಸದರಿ ಕೇಂದ್ರಗಳಿಂದ ಸರಬರಾಜಾಗುವ ಎಲ್ಲ 110 ಕೆವಿ ಮಾರ್ಗಗಳಲ್ಲಿ ಫೀಡರ್ಗಳಿಗೆ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಹಾಗೂ ಮೇಲ್ಕಂಡ ಫೀಡರ್ಗಳ ವ್ಯಾಪ್ತಿಗೆ ಬರುವ ಎಲ್ಲ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂನ ಹಾವೇರಿಯ ಕಾರ್ಯನಿರ್ವಾಹಕ ಎಂಜನಿಯರ್ ಎಸ್. ಶಶಿಧರ ವಿನಂತಿಸಿದ್ದಾರೆ.
ಅಪರಿಚಿತ ಶವ ಪತ್ತೆ
ರಾಣಿಬೆನ್ನೂರು: ಸುಮಾರು 50 ವರ್ಷ ವಯಸ್ಸಿನ ಪುರುಷನ ಶವ ತಾಲೂಕಿನ ಕರೂರು ಗ್ರಾಮದ ಸುಭಾಸ ನಾಗಪ್ಪ ಚಳಗೇರಿ ಎಂಬುವವರ ಜಮೀನಿನಲ್ಲಿ ಪತ್ತೆಯಾಗಿದೆ.
ಚಹರೆ: ಮೃತ ವ್ಯಕ್ತಿ ಸುಮಾರು 4 ಅಡಿ ಎತ್ತರ, ದುಂಡು ಮುಖ, ಕಪ್ಪು ಮೈಬಣ್ಣ ಹೊಂದಿದ್ದು, ತಲೆಯಲ್ಲಿ ಅರ್ಧ ಇಂಚಿನಷ್ಟು ಬಿಳಿ ಕೂದಲುಗಳಿರುತ್ತವೆ. ಕೆಂಪು ಬಣ್ಣದ ಚಡ್ಡಿ, ಚೌಕಳಿ ಲುಂಗಿ, ನೀಲಿ ಬಣ್ಣದ ಉಲ್ಲನ ಟೋಪಿ ಧರಿಸಿರುತ್ತಾನೆ. ಕೊರಳಲ್ಲಿ ಲಿಂಗದಕಾಯಿ ಇದೆ. ಸಂಬಂಧಿಸಿದ ವ್ಯಕ್ತಿಗಳು ಕುಮಾರಪಟ್ಟಣಂ ಠಾಣೆ ದೂರವಾಣಿ- 08373-242208 ಇಲ್ಲಿಗೆ ಅಥವಾ ಪಿಎಸ್ಐ ಮೊ- 9480804553ಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

