ಹೆಸ್ಕಾಂ ಕಚೇರಿಗೆ ವಿದ್ಯಾರ್ಥಿಗಳ ಮುತ್ತಿಗೆ
ಬ್ಯಾಡಗಿ: ಪರೀಕ್ಷಾ ಕಾಲವಾಗಿದ್ದರಿಂದ ರಾತ್ರಿ ವೇಳೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಎಸ್‌ಎಫ್‌ಐ ತಾಲೂಕು ಘಟಕದಲ್ಲಿ ನೂರಾರು ವಿದ್ಯಾರ್ಥಿಗಳು ಸ್ಥಳೀಯ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಚಿಕ್ಕಮಕ್ಕಳೂ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಶಾಲಾ ಅವಧಿ ನಂತರ ಗುಂಪು ಗುಂಪಾಗಿ ಹೆಸ್ಕಾಂ ಕಚೇರಿಗೆ ನುಗ್ಗಿದ ವಿದ್ಯಾರ್ಥಿಗಳು ಹೆಸ್ಕಾಂ ಕಾರ್ಯವೈಖರಿ ವಿರುದ್ಧ ಘೋಷಣೆ ಹಾಕಿದರಲ್ಲದೆ, ಬಲ್ಬ್‌ಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರವೇ ಹೊಣೆ: ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಪೂಜಾರ ಮಾತನಾಡಿ, ಪರೀಕ್ಷೆ ವೇಳೆ ಗ್ರಾಮೀಣ ಪ್ರದೇಶದಲ್ಲಿ ಹೆಸ್ಕಾಂ ಲೋಡ್ ಶೆಡ್ಡಿಂಗ್ ಮುಂದುವರಿಸಿದ್ದನ್ನು ಖಂಡಿಸಿದರು. ರಾತ್ರಿ ವೇಳೆಯಲ್ಲಿ ವಿದ್ಯುತ್ ಇಲ್ಲದೆ ವಿದ್ಯಾ ರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಇದರಿಂದ ಪರೀಕ್ಷಾ ಫಲಿತಾಂಶದ ಮೇಲೆ ಪ್ರತಿಕೂಲ ಪರಿಣಾಮ ವಾಗಲಿದೆ. ವಿದ್ಯುತ್ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಅಂಕಗಳನ್ನು ಪಡೆಯುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ನಗರ ಪ್ರದೇಶದ ವಿದ್ಯಾರ್ಥಿಗಳ ಜತೆ ಪೈಪೋಟಿ ನಡೆಸಲು ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಫಲಿತಾಂಶ ವ್ಯತಿರಿಕ್ತವಾಗಿ ಬಂದರೆ ಅದಕ್ಕೆ ಸರ್ಕಾರವೇ ಹೊಣೆ ಎಂದರು.
ಗ್ರೇಸ್ ಮಾರ್ಕ್ಸ್ ಕೊಡಿ: ಎಸ್. ವಿಜಯಕುಮಾರ ಮಾತನಾಡಿ, ಆರು ತಿಂಗಳಿಂದ ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗಿದೆ. ಪ್ರಸಕ್ತ ವರ್ಷ ಎಸ್ಸೆಸ್ಸ್ಸೆಲ್ಸಿ, ಪಿಯುಸಿ ಹಾಗೂ ಬೋರ್ಡ್ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳ ಗೋಳಂತೂ ಹೇಳತೀರದು. ಪ್ರತಿಭಾನ್ವಿತರಿದ್ದರೂ ಪರೀಕ್ಷೆಯಲ್ಲಿ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ನಿಸ್ಸಹಾಯಕರಾಗಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಸಲು ವಿಫಲವಾಗಿರುವ ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕ ನೀಡಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಹೆಸ್ಕಾಂ ಅಭಿಯಂತರ ದಾಸಪ್ಪ ಮಾತನಾಡಿ, ನಿರಂತರ ವಿದ್ಯುತ್ ಯೋಜನೆಯಡಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ಪೂರೈಸಲಾಗುತ್ತಿದೆ. ಇನ್ನೂ ಕೆಲ ಗ್ರಾಮಗಳಿಗೆ ಯೋಜನೆ ವಿಸ್ತರಿಸುವ ಗುರಿಯನ್ನು ಹೆಸ್ಕಾಂ ಹೊಂದಿದ್ದು, ಶೀಘ್ರ ಸಂಪರ್ಕ ಕಲ್ಪಿಸಲಾಗುವುದ ಎಂದರು. ಬಿ. ವಸಂತಕುಮಾರ, ವೀರಭದ್ರಯ್ಯ ಹಿರೇಮಠ, ಎಂ.ಎಂ. ಖತೀಬ್, ವೀರೇಶ್ ಚಿಕ್ಕಮಠ, ಕಾರ್ತಿಕ ಸೇರಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

