ಜೂಜಾಟ: ಐವರ ಸೆರೆ
ಹಾವೇರಿ: ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಊದಗಟ್ಟಿ ಗ್ರಾಮದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅದೇ ಗ್ರಾಮದ ಪರಸಪ್ಪ ಬಸಪ್ಪ ಬಾರ್ಕಿ, ಪಕ್ಕೀರಪ್ಪ ಕರಿಯಪ್ಪ ಬಾರ್ಕಿ, ಭರಮಪ್ಪ ಹನುಮಪ್ಪ ತಳವಾರ, ಚಂದ್ರಪ್ಪ ಸಣ್ಣದುರ್ಗಪ್ಪ ಹಳ್ಳಳ್ಳಿ, ಶೇಖಪ್ಪ ಭರಮಪ್ಪ ಬಾರ್ಕಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸೇರಿಕೊಂಡು ಅಂದರ್-ಬಾಹರ್ ಆಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ ರಾಣಿಬೆನ್ನೂರು ಗ್ರಾಮೀಣ ಠಾಣೆ ಪಿಎಸ್‌ಐ ಯು.ಜೆ. ಶಶಿಧರ, ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
ಕಳ್ಳಭಟ್ಟಿ: ಆರೋಪಿ ಸೆರೆ
ಹಾನಗಲ್ಲ: ಅಬಕಾರಿ ಇಲಾಖೆ ಅಧಿಕಾರಿಗಳು ಹಾನಗಲ್ಲ-ಪಾಳಾ ಮಾರ್ಗ ಮಧ್ಯ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ಸೈಕಲ್‌ನಲ್ಲಿ ಸಾಗಿಸುತ್ತಿದ್ದ ಹುಲಗಿನಕೊಪ್ಪ ಗ್ರಾಮದ ಈರಪ್ಪ ರಾಮಪ್ಪ ವಡ್ಡರ ಎಂಬಾತನನ್ನು ಬಂಧಿಸಲಾಗಿದ್ದು, 10 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.
ಡಿಕ್ಕಿ: ಓರ್ವ ಸಾವು
ರಾಣಿಬೆನ್ನೂರು: ಮುಂದೆ ಚಲಿಸುತ್ತಿದ್ದ ಟ್ರ್ಯಾಕ್ಟರೊಂದಕ್ಕೆ ಪೆಟ್ರೋಲಿಯಂ ಗ್ಯಾಸ್ ತುಂಬಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೆ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಹನುಮನಮಟ್ಟಿ ಹತ್ತಿರ ರಾಷ್ಟ್ರೀಯ ಹೆದ್ದಾರಿ ಮೇಲೆ ಶುಕ್ರವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಸಾವನ್ನಪ್ಪಿರುವ ವ್ಯಕ್ತಿಯನ್ನು ನವಲಗುಂದ ತಾಲೂಕಿನ ಐಹಟ್ಟಿ ಗ್ರಾಮದ ಮಹದೇವಪ್ಪ ತಡಕನಹಳ್ಳಿ (34) ಹಾಗೂ ಗಾಯಗೊಂಡವರನ್ನು ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ರಾಮಪ್ಪ ಕಡಳ್ಳಿ, ಹೋನ್ನಪ್ಪ ನಂದೇಪ್ಪನವರೆಂದು ಗುರುತಿಸಲಾಗಿದೆ. ಟ್ಯಾಂಕರ್ ಲಾರಿಯು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ರಬಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ಸಮಯದಲ್ಲಿ ಟ್ಯಾಂಕರ್ ಲಾರಿ ಉರುಳಿ ಬಿದ್ದ ಸಮಯದಲ್ಲಿ ಟ್ಯಾಂಕರ್‌ನಲ್ಲಿ ತುಂಬಿದ್ದ ಗ್ಯಾಸ್ ಸೋರಿಕೆಯಾಗಿಲ್ಲ. ಈ ಕಾರಣ ಭಾರಿ ಅನಾಹುತ ತಪ್ಪಿದಂತಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿ ಆತ್ಮಹತ್ಯೆ
ಹಾವೇರಿ: ಪರೀಕ್ಷೆ ಚೆನ್ನಾಗಿ ಬರೆದಿಲ್ಲ ಎಂಬ ಕಾರಣಕ್ಕೆ ಜಿಗುಪ್ಸೆಗೊಂಡ ವಿದ್ಯಾರ್ಥಿನಿಯೊಬ್ಬಳು ಫ್ಯಾನ್‌ಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಯಾಲ ಹೊಸಪೇಟೆ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತಳನ್ನು ಸುಮನ್ ಸಿಂಗ್ ಅಯೋಧ್ಯಾ ಸಿಂಗ್ (14) ಎಂದು ಗುರುತಿಸಲಾಗಿದೆ. ಈಕೆ 8ನೇ ತರಗತಿ ಓದುತ್ತಿದ್ದಳು. ಶುಕ್ರವಾರ ನಡೆದ ಇಂಗ್ಲಿಷ್ ಪರೀಕ್ಷೆಯಲ್ಲಿ ಸರಿಯಾಗಿ ಬರೆದಿಲ್ಲ ಎಂದು ಮಲಗುವ ಕೋಣೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಕುಮಾರಪಟ್ಟಣ ಪಿಎಸ್‌ಐ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

