ಇತರರಿಗೆ ನೋವಾಗದಂತೆ ಹೋಳಿ ಆಚರಿಸಿ: ಸಿಪಿಐ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಮಾ. 19
ಬೇರೆ ಧರ್ಮಿಯರಿಗೆ ನೋವಾಗದಂತೆ ಹೋಳಿ ಹಬ್ಬ ಆಚರಿಸಬೇಕು ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಸಿಪಿಐ ಎಂ.ಎಚ್. ಚಿಕ್ಕರೆಡ್ಡಿ ಎಚ್ಚರಿಸಿದರು.
ಹೋಳಿ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಜರುಗಿದ ಶಾಂತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಪಟ್ಟಣದಲ್ಲಿ ಮಾ. 31ರಂದು ಹೋಳಿ ಆಚರಣೆ ನಡೆಯಲಿದ್ದು, ಹಬ್ಬದಾಚರಣೆಗಳಲ್ಲಿ ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ವ್ಯಕ್ತಿಗಳು ಶಾಂತಿ ಸುವ್ಯವಸ್ಥೆ ಕಾಪಾಡಲು ಮುತುವರ್ಜಿ ವಹಿಸುವಂತೆ ಮನವಿ ಮಾಡಿದರು. ಪರೀಕ್ಷಾ ಸಮಯವಾದ್ದರಿಂದ ಅವಶ್ಯವಿದ್ದಲ್ಲಿ ಮಾತ್ರ ಮೈಕ್ ಬಳಸುವುದು ಸೂಕ್ತ, ಹಲಗೆ ಸೇರಿದಂತೆ ಇನ್ನಿತರ ವಾದ್ಯ ಬಳಸುವುದರಿಂದ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಇವುಗಳನ್ನು ಗಮನದಲ್ಲಿರಿಸಿಕೊಂಡು ಹಬ್ಬದಾಚರಣೆ ಮಾಡುವಂತೆ ಸಲಹೆ ನೀಡಿದರು.
ಪಿಎಸ್‌ಐ ಬಸವರಾಜ ಕಲ್ಲಮ್ಮನವರ, ಅಪರಾಧ ವಿಭಾಗದ ಪಿಎಸ್‌ಐ ಎಂ.ಎಂ. ಮಹಾಂತೇಶ ಪುರಸಭೆ ಸದಸ್ಯ ಮುರಿಗೆಪ್ಪ ಶೆಟ್ಟರ, ಗಂಗಣ್ಣ ಎಲಿ, ರುದ್ರಪ್ಪ ದೇಸೂರ ಮುಖಂಡರಾದ ರಾಮಣ್ಣ ಕೋಡಿಹಳ್ಳಿ, ಗುಡ್ಡಪ್ಪ ಆಡಿನವರ, ನಾಗರಾಜ ಹಾವನೂರ, ರಾಜು ಕಳ್ಯಾಳ, ಮಂಜುನಾಥ ಭೋವಿ, ಮುನಾಫ್‌ಸಾಬ್ ಎರೆಶೀಮಿ, ಬಾಬುಸಾಬ್ ಬಡಿಗೇರ, ಪಾಂಡುರಂಗ ಸುತಾರ, ಎ.ಎಂ. ಮುಲ್ಲಾ, ಬಸವರಾಜ ಅಂಜುಟಗಿ, ನಾಗರಾಜ ಕುಪ್ಪೆಲೂರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

