ಹಾವೇರಿ

ನಿರುದ್ಯೋಗಿಗಳಿಗೆ ಇಂದಿನಿಂದ ಸಂದರ್ಶನ

Published On :

ಹಾವೇರಿ: ಸುಜಯ್ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ನಿರುದ್ಯೋಗಿಗಳಿಗೆ ಮಾ. 21, 22ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಸಂದರ್ಶನ ಏರ್ಪಡಿಸಿದ್ದು, ಇಂಗ್ಲಿಷ್‌ಭಾಷೆ ಜ್ಞಾನವುಳ್ಳ ಪಿಯುಸಿ, ಡಿಪ್ಲೊಮಾ, ಪದವಿ ಪಾಸಾದ ನಿರುದ್ಯೋಗಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ಅಂದೇ ವಿತರಿಸಲಾಗುವದು. ಅಭ್ಯರ್ಥಿಗಳು ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಿ. ಆಯ್ಕೆಯಾದ ಅಭ್ಯರ್ಥಿಗಳಿಗೆ 15 ದಿನ ಉಚಿತ ವಸತಿ, ಪ್ರಯಾಣ ಭತ್ಯೆ ಕೊಡಲಾಗುವುದು. ಮಾಹಿತಿಗೆ ಮೊ. 9449070177, 9980723251 ಸಂಪರ್ಕಿಸಿ.

ಇಂದು ಬಿಜೆಪಿ ಸಭೆ
ಹಾವೇರಿ: ಇಲ್ಲಿನ ಸೀತಾರಾಮ ಮಂಗಲ ಕಾರ್ಯಾಲಯದಲ್ಲಿ ಜಿಲ್ಲಾ ಬಿಜೆಪಿ ಸಮಾವೇಶ ಹಾಗೂ ಹಾವೇರಿ ವಿಧಾನಸಭಾ ಕ್ಷೇತ್ರದ ಪೂರ್ವಭಾವಿ ಸಿದ್ಧತಾ ಸಭೆಯನ್ನು ಮಾ. 21ರಂದು ಮಧ್ಯಾಹ್ನ 3 ಘಂಟೆಗೆ ಕರೆಯಲಾಗಿದೆ. ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು. ಮಾ. 24ರಂದು ಬೆಳಗ್ಗೆ 11ಕ್ಕೆ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಬೇಕೆಂದು ಬಿಜೆಪಿ ತಾಲೂಕಾಧ್ಯಕ್ಷ ಬಸವರಾಜ ಅರಬಗೊಂಡ, ಶಹರ ಘಟಕಾಧ್ಯಕ್ಷ ಶಿವಲಿಂಗಪ್ಪ ಕಲ್ಯಾಣಿ ತಿಳಿಸಿದ್ದಾರೆ.

ಕಾನೂನು ಕ್ರಮಕ್ಕೆ ಹಾವೇರಿ ಜಿಲ್ಲಾಡಳಿತ ನಿರ್ಧಾರ
ಹಾವೇರಿ: ಜಿಲ್ಲಾ ಮರಳು ಮಾನಿಟರಿಂಗ್ ಟಾಸ್ಕ್‌ಫೋರ್ಸ್ ಸಮಿತಿಯಲ್ಲಿ ನಿರ್ಣಯಿಸಿದಂತೆ ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡಿ ಸಾಗಾಣಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದ್ದರಿಂದ ವಾಹನದ ಮಾಲೀಕರು ಮರಳು ಸಾಗಿಸುವ ಮುನ್ನ ವಾಹನಗಳಿಗೆ ಜಿಪಿಎಸ್ ಯಂತ್ರವನ್ನು ಅಳವಡಿಸಿ ಪರವಾನಿಗೆ ಪಡೆದು ಸಾಗಾಣಿಕೆ ಮಾಡಬೇಕು. ಅಕ್ರಮ ಮರಳು ಗಣಿಗಾರಿಕೆ, ಸಾಗಿಸುವುದು ಕಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಮರಳು ಮಾನಿಟರಿಂಗ್ ಟಾಸ್ಕ್‌ಫೋರ್ಸ್ ಸಮಿತಿ ಕಾರ್ಯದರ್ಶಿ, ಹಿರಿಯ ಭೂವಿಜ್ಞಾನಿ (ಖನಿಜ) ಮಹ್ಮದ್ ನಸರುಲ್ಲಾ ತಿಳಿಸಿದ್ದಾರೆ.

ಇಂದು ವಿದ್ಯುತ್ ವ್ಯತ್ಯಯ
ಹಾವೇರಿ: ಹಾವೇರಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11 ಕೆವಿ ಎಪಿಎಂಸಿ ಮಾರ್ಗದಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಮಾ. 21ರಂದು ಜರುಗಲಿದೆ. ಮಾ. 21ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಈ ಫೀಡರ್‌ಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಮಾರ್ಗದಿಂದ ವಿದ್ಯುತ್ ಪೂರೈಕೆ ಪಡೆಯುತ್ತಿರುವ ಉದಯನಗರ, ಎಪಿಎಂಸಿ, ನಾಗೇಂದ್ರನಮಟ್ಟಿ ವಿದ್ಯುತ್ ಸರಬರಾಜು ಇರಲ್ಲ. ಎಪಿಎಂಸಿ ಫೀಡರ್‌ನಿಂದ ವಿದ್ಯುತ್ ಪೂರೈಕೆಯಾಗುವ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂನ ಹಾವೇರಿ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್. ಶಶಿಧರ ವಿನಂತಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.