ಹಾವೇರಿ

ಕುಡಿವ ನೀರು, ಸ್ವಚ್ಛತೆಗೆ ಕೆಜೆಪಿ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಮಾ. 23
ಜನತೆಗೆ ಸಮರ್ಪಕ ಕುಡಿಯುವ ನೀರು ಹಾಗೂ ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡುವಂತೆ ಆಗ್ರಹಿಸಿ ಕೆಜೆಪಿ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭ ತಾಲೂಕು ಘಟಕದ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ ಮಾತನಾಡಿ, ಈಗಾಗಲೇ ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ತೊಂದರೆ ಎದುರಿಸುವಂತಾಗಿದೆ. ಇದ್ದ ನೀರನ್ನು ನಿಗದಿತ ಸಮಯಕ್ಕೆ ಜನರಿಗೆ ಪೂರೈಕೆ ಮಾಡುವಲ್ಲಿ ಪುರಸಭೆ ವಿಫಲವಾಗಿದೆ ಎಂದು ಆರೋಪಿಸಿದರು.
ಪಟ್ಟಣದ ಬಹುತೇಕ ವಾರ್ಡ್‌ಗಳ ಚರಂಡಿಗಳಲ್ಲಿ ಕಸ-ಕಡ್ಡಿಗಳು ಸಂಗ್ರಹವಾಗಿದ್ದು, ಅದರಲ್ಲಿನ ನೀರು ಹರಿದು ಮುಂದೆ ಹೋಗುತ್ತಿಲ್ಲ. ಹೀಗಾಗಿ ಮಲೀನಗೊಂಡಿರುವ ಚರಂಡಿಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಜನರು ರಾತ್ರಿ ಸಮಯ ನಿದ್ರಿಸುವುದು ಕಷ್ಟವಾಗಿದೆ. ಸೊಳ್ಳೆಗಳ ಕಡಿತಕ್ಕೆ ಅನೇಕರು ಆಸ್ಪತ್ರೆ ಸೇರುವಂತಾಗಿದ್ದು, ರೋಗಗಳಿಗೆ ತುತ್ತಾಗುವ ಭೀತಿಯಲ್ಲಿದ್ದಾರೆ ಎಂದರು.
ಶಹರ ಘಟಕದ ಅಧ್ಯಕ್ಷ ಗಂಗಣ್ಣ ಎಲಿ ಮಾತನಾಡಿ, ಕುಡಿಯುವ ನೀರು ಹಾಗೂ ಪಟ್ಟಣದ ನೈರ್ಮಲ್ಯ ಕುರಿತು ಹಲವಾರು ಬಾರಿ ಮೌಖಿಕವಾಗಿ ಪುರಸಭೆ ಸಿಬ್ಬಂದಿಗೆ ತಿಳಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ. ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಮಣ್ಣ ಕೋಡಿಹಳ್ಳಿ, ಬಸವರಾಜ ಹಂಜಿ, ಬಸವರಾಜ ಛತ್ರದ, ನಾರಾಯಣಪ್ಪ ಕರ್ನೂಲ, ಪ್ರಶಾಂತ ಯಾದವಾಡ, ರಾಜೇಸಾಬ್ ಕನವಳ್ಳಿ, ನೀಲವ್ವ ದೊಡ್ಮನಿ, ಇನ್ನಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.