ಬಿಜೆಪಿ ತೆಕ್ಕೆಗೆ ಡಾ.ಡಾಂಗೆ
ಕನ್ನಡಪ್ರಭ ವಾರ್ತೆ, ಹಾವೇರಿ, ಮಾ. 23
ವಿಧಾನಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಪಕ್ಷಾಂತರ ಪರ್ವ ಆರಂಭಗೊಂಡಿದೆ. ನಗರದ ವೈದ್ಯ ಡಾ.ಸಂಜಯ ಡಾಂಗೆ ಮಾ. 24ರಂದು ನಗರದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಬಿಎಸ್ಸಾರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರುವುದಾಗಿ ತಿಳಿಸಿದರು.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್ಸಾರ್ ಕಾಂಗ್ರೆಸ್ ಜಿಲ್ಲೆಯಲ್ಲಿ ನಿರೀಕ್ಷಿತ ಯಶಸ್ಸು ಪಡೆಯುವಲ್ಲಿ ವಿಫಲವಾಗುತ್ತಿದೆ. ಜೊತೆಗೆ ರಾಜ್ಯದಲ್ಲಿ ಶ್ರೀರಾಮುಲು ಹೊರತುಪಡಿಸಿ ಯಾವುದೇ ನಾಯಕರು ಪಕ್ಷದಲ್ಲಿಲ್ಲ. ಜಿಲ್ಲಾಮಟ್ಟದ ಕಾರ್ಯಕರ್ತರೊಂದಿಗೆ ಪಕ್ಷದ ರಾಜ್ಯ ಮುಖಂಡರು ಸಂಪರ್ಕಕ್ಕೆ ಬರುತ್ತಿಲ್ಲ. ಹೀಗಾಗಿ ತಾವು ಬಿಎಸ್ಸಾರ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವುದಾಗಿ ಸ್ಪಷ್ಟಪಡಿಸಿದರು.
ಮಾ. 24ರಂದು ಹಾವೇರಿ ಜಿಲ್ಲಾ ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸಮ್ಮುಖದಲ್ಲಿ ತಾವು ಹಾಗೂ ಮಾಜಿ ಶಾಸಕ ಡಾ.ಚಿತ್ತರಂಜನ ಕಲಕೋಟಿ, ಜಿಲ್ಲೆಯ ಅಭಿಮಾನಿಗಳು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ ಸೇರಿಕೊಳ್ಳುವುದಾಗಿ ತಿಳಿಸಿದರು. ಬಿಜೆಪಿಯಿಂದ ಟಿಕೆಟ್ ನೀಡುವ ಕುರಿತಂತೆ ಯಾವುದೇ ಬೇಡಿಕೆ ಇಟ್ಟಿಲ್ಲ. ಬೇಷರತ್ ಆಗಿಯೇ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದು, ನನ್ನ ನಾಯಕತ್ವ ಗುರುತಿಸಿ ಬಿಜೆಪಿ ಟಿಕೆಟ್ ನೀಡಿದಲ್ಲಿ ಸ್ಪರ್ಧೆಗಿಳಿಯುತ್ತೇನೆ. ಈಗಾಗಲೇ ಪಕ್ಷ ಸೇರ್ಪಡೆ ಬಗ್ಗೆ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ, ತಾಲೂಕಾಧ್ಯಕ್ಷ ಬಸವರಾಜ ಅರಬಗೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಂದ್ರ ಕಟಕೋಳ, ಇತರರು ಸಮ್ಮತಿಸಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಡಾ.ಚಿತ್ತರಂಜನ ಕಲಕೋಟಿ, ಶಂಕರ ಮದಕಟ್ಟಿ, ಕಾಳಿಂಗಪ್ಪ ಬಿಕ್ಕಿ, ಚನ್ನಬಸಪ್ಪ ದೇವಿಹೊಸೂರು, ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

