ಆಶಯ ಪೂರೈಸಿಕೊಳ್ಳಲು ಮಹಿಳೆ ವಿಫಲ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಮಾ. 24
ಇಚ್ಛಾಶಕ್ತಿಯ ಕೊರತೆಯಿಂದಾಗಿ ಮಹಿಳೆ ತನ್ನ ನಿರ್ದಿಷ್ಟ ಆಶಯಗಳನ್ನು ಪೂರೈಸಿಕೊಳ್ಳುವಲ್ಲಿ ವಿಫಲಳಾಗಿದ್ದಾಳೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಜಿ. ಸುಮಾ ವಿಷಾದಿಸಿದರು.
ಸ್ಥಳೀಯ ವರ್ತಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಮಹಿಳಾ ಸಂಘದ ಸಾಂಸ್ಕೃತಿಕ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಸಾಮಾಜಿಕ ಕಳಕಳಿಯಿದ್ದರೂ ಸಮಾಜದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಕ್ತಪಡಿಸುವಲ್ಲಿ ಹಿಂಜರಿಯುತ್ತಿರುವ ಮಹಿಳೆ ಸಾಮಾಜಿಕ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಹೋರಾಟ ಮಾಡಿಯೇ ತನ್ನನ್ನು ತಾನು ಸಂರಕ್ಷಿಸಿಕೊಳ್ಳಬೇಕಾದ ಸ್ಥಿತಿ ಎದುರಾಗಿದೆ ಎಂದು ಖೇದ ವ್ಯಕ್ತಪಡಿಸಿದರು.
ಇಂದಿನ ಸಾಮಾಜಿಕ ವ್ಯವಸ್ಥೆ ಕುರಿತು ಮಾತನಾಡಲು ಮಹಿಳೆ ಮೊದಲು ತಾನು ನೈತಿಕವಾಗಿ ಗಟ್ಟಿಯಾಗಿ ನಿಲ್ಲಬೇಕಾಗುತ್ತದೆ. ಪುರುಷ ಪ್ರಧಾನ ಕುಟುಂಬ ವ್ಯವಸ್ಥೆಯಲ್ಲಿ ಸಮಾನತೆ, ಭ್ರಾತೃತ್ವ, ಸ್ವಾತಂತ್ರ್ಯಗಳು ಸಿಗುತ್ತಿಲ್ಲ. ಹೀಗಾಗಿ ಮಹಿಳೆ ಸ್ವಂತಿಕೆಯೊಂದಿಗೆ ಗಟ್ಟಿತನವನ್ನು ಅಗತ್ಯ ಸಂದರ್ಭಗಳಲ್ಲಿ ಪ್ರದರ್ಶಿಸಬೇಕಾಗುತ್ತದೆ ಎಂದರು.
ಮಹಿಳೆ ಕುಟುಂಬ ಹಾಗೂ ಸಮಾಜದ ಜನರೊಂದಿಗೆ ಹತ್ತಿರದ ಒಡನಾಟ ಹೊಂದುವ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಹತ್ತಿರದಿಂದ ಅವಲೋಕಿಸುತ್ತಾಳೆ. ಸಮಾಜದಲ್ಲಿನ ಕೆಲ ದುಷ್ಟ ಮನಸ್ಸುಗಳು ಆಕೆಯ ನೆಮ್ಮದಿ ಹಾಳು ಮಾಡಿದ್ದು, ಇಂತಹ ಸಂದರ್ಭದಲ್ಲಿ ಮಹಿಳೆ ಯಾವುದೇ ಸಂಕುಚಿತ ಭಾವನೆ ತೋರದೆ ತಕ್ಷಣ ಪ್ರತಿಕ್ರಿಯೆ ನೀಡುವ ವ್ಯಕ್ತಿತ್ವ ರೂಢಿಸಿಕೊಳ್ಳಬೇಕಾಗುತ್ತದೆ ಎಂದರು.
ಮಹಿಳಾ ಸಂಘದ ಕಾರ್ಯಾಧ್ಯಕ್ಷೆ ಪ್ರೊ. ಚನ್ನಮ್ಮ ಕೋರಿಶೆಟ್ಟರ್ ಮಾತನಾಡಿ, ಸಮಾಜದ ವ್ಯವಸ್ಥೆಯ ವಿರುದ್ಧ ಧ್ವನಿಯೆತ್ತುವ ಜೀವನಶೈಲಿ ಮಹಿಳೆಯದಾಗಬೇಕು. ತ್ಯಾಗ, ಸ್ವಾತಂತ್ರ್ಯ, ಶ್ರಮ, ನಿಸ್ವಾರ್ಥ ಮುಂತಾದ ಅಸ್ತ್ರಗಳನ್ನು ಬಳಸಿಕೊಳ್ಳುವ ಮೂಲಕ ಸಾಮಾಜಿಕ ಭದ್ರತೆ ಕಂಡುಕೊಳ್ಳಬೇಕಾಗಿದೆ ಎಂದರು.
ಇದಕ್ಕೂ ಮುನ್ನ ಮಹಿಳಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿನಿಯರಿಗಾಗಿ ರಂಗೋಲಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಪ್ರಾಚಾರ್ಯ ವಿ.ಎಸ್. ಬೆಂಚಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ವೇತಾ ಅಂಗಡಿ ಸ್ವಾಗತಿಸಿ, ವಂದಿಸಿದರು, ಸೌಮ್ಯಾ ಚಳಕಟ್ಟಿ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

