ಹಾವೇರಿ

ಕ್ಷಯರೋಗ: ಜನಜಾಗೃತಿ ಅವಶ್ಯ

Published On :

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಮಾ. 25
ಗ್ರಾಮೀಣ ಪ್ರದೇಶದ ಜನರಲ್ಲಿ ತಮ್ಮ ಆರೋಗ್ಯ ಬಗ್ಗೆ ನಿರ್ಲಕ್ಷ ವಹಿಸುತ್ತಿದ್ದು, ಹೀಗಾಗಿ ಸರ್ಕಾರದ ಜೊತೆಗೆ ವಿವಿಧ ಸಂಘ-ಸಂಸ್ಥೆಗಳು ಕ್ಷಯರೋಗ ಕುರಿತು ಜನಜಾಗೃತಿ ಮೂಡಿಸುವ ಕೆಲಸ ಮಾಡುವುದು ಅವಶ್ಯವಾಗಿದೆ ಎಂದು ತಾಪಂ ಇಓ ಬಿ. ರೇವಣ್ಣ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಇತ್ತೀಚೆಗೆ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ಶಿಗ್ಗಾಂವಿ ತಾಲೂಕು ಆರೋಗ್ಯ ಇಲಾಖೆ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯ ಯಾವ ಮಾರುಕಟ್ಟೆಯಲ್ಲಿ ಸಿಗುವ ವಸ್ತುವಲ್ಲ. ಸಂಪಾದಿಸಬೇಕಾದ ಅಮೂಲ್ಯ ವಸ್ತುವಾಗಿದೆ. ಅಲ್ಲದೆ ಆರೋಗ್ಯ ಪ್ರತಿಯೊಬ್ಬರ ಜೀವನ ವ್ಯವಸ್ಥೆ ಮೇಲೆ ಅವಲಂಬಿಸಿದೆ. ಹೀಗಾಗಿ ನಮ್ಮ ಆರೋಗ್ಯ ಕಾಪಾಡುವಲ್ಲಿ ಜೀವನ ಪದ್ಧತಿ ಸಹ ಉತ್ತಮಗೊಳಿಸಬೇಕು. ಅದರಿಂದ ಆರೋಗ್ಯವಂತ ನಾಡು ನಿರ್ಮಾಣವಾಗಲು ಸಾಧ್ಯವಿದೆ ಎಂದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಾರುತಿ ಚಿಕ್ಕಣ್ಣನವರ ಮಾತನಾಡಿ, ಕ್ಷಯ ರೋಗಿಗಳ ತಮ್ಮಲ್ಲಿನ ರೋಗದ ಕುರಿತು ರೋಗದ ಬಗ್ಗೆ ಸರಿಯಾದ ಮಾಹಿತಿ ನೀಡಲು ಸಂಕುಚಿತ ಭಾವನೆ ಬಿಟ್ಟು ಮಾತನಾಡಬೇಕು. ಅದರಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಬಸವರಾಜ ಸಜ್ಜನ ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಗಳಾದ ಡಾ. ಎಸ್.ಬಿ. ಗೌಡರ, ಪ್ರಭಾಕರ ಕುಂದೂರ, ಡಾ. ಮದನ್ ಫೋಡಕೆ, ಡಾ. ರಾಜೇಂದ್ರ ಗೊಡ್ಡೆಮ್ಮಿ, ಡಾ. ಭಾಗೀರಥಿ ಮಡ್ಲೇರಿ, ಡಾ. ಲಕ್ಷ್ಮಣ ನಾಯಕರ, ಡಾ. ಭೀಮಣ್ಣ, ಡಾ. ನೀಡಗುಂದಿ, ಡಾ. ವಿಜಯಾ ಪಾಟೀಲ, ಬಸವರಾಜ ಕನ್ನಕನವರ, ಸುಧಾಕರ ದೈವಜ್ಞ, ಕೆ.ಎಸ್. ಕುಂದಗೋಳ, ಡಾ. ಎಂ.ಆರ್. ಮ್ಲುಲಾ, ತಾಲೂಕು ನೋಡಲ್ ಅಧಿಕಾರಿ ಎಮ್.ಎಲ್. ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.
ಶಿಗ್ಗಾಂವಿ ಸಾರ್ವಜನಿಕ ಆಡಳಿತ ಮುಖ್ಯ ವೈದ್ಯಾಧಿಕಾರಿ ಡಾ. ಹನುಮಂತಪ್ಪ ಸ್ವಾಗತಿಸಿದರು. ಎಸ್.ಆರ್.ಪೂಜಾರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಎಂ.ಎಫ್. ಕುರವಳ್ಳಿ ನಿರೂಪಿಸಿದರು. ಕಾರ್ಯಕ್ರಮ ಪೂರ್ವದಲ್ಲಿ ಕ್ಷಯರೋಗ ನಿಯಂತ್ರಣ ಕುರಿತು ಜಾಗೃತಿ ಜಾಥಾ ಜರುಗಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.