ಹಾವೇರಿ

ಚುನಾವಣೆ: ವಿವಿಧ ಸಮಿತಿ ರಚನೆ

Published On :

ಹಾವೇರಿ: ವಿಧಾನಸಭೆಗೆ ಜಿಲ್ಲೆಯಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿಗಳೂ ಆದ ಜಿ. ಜಗದೀಶ ಅವರು ಆದೇಶ ಹೊರಡಿಸಿದ್ದಾರೆ.
ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ನೆಟ್.ವರ್ಕ್, ಅಂತರ್ಜಾಲ, ಮೊಬೈಲ್ ನೆಟ್.ವರ್ಕ್ ಮಾಧ್ಯಮಗಳ ಮೂಲಕ ಪ್ರಚಾರಕ್ಕಾಗಿ ಜಾಹೀರಾತುಗಳನ್ನು ಪ್ರಮಾಣಿಕರಿಸಲು ಜಿಲ್ಲಾಮಟ್ಟದ ಮಾಧ್ಯಮ ದೃಢೀಕರಣ ಮತ್ತು ಉಸ್ತುವಾರಿ ಸಮಿತಿ ಇಂತಿದೆ.
ಪ್ರಭಾರ ಜಿಲ್ಲಾಧಿಕಾರಿ ಜಿ. ಜಗದೀಶ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹ್ಮದ್ ಜುಬೇರ - 9448821093, ಜಿಪಂ ಯೋಜನಾಧಿಕಾರಿ ಬಸನಗೌಡ-9480868004, ಆಕಾಶವಾಣಿ ವರದಿಗಾರ ಅರವಿಂದ ಪಾಟೀಲ- 94480 07437 ಹಾಗೂ ಜಿಲ್ಲಾ ವಾರ್ತಾಧಿಕಾರಿ ಸಿ.ಪಿ. ಮಾಯಾಚಾರಿ-9945688113 ಅವರುಗಳನ್ನು ಈ ಸಮಿತಿ ಒಳಗೊಂಡಿದೆ.
ಜಿಲ್ಲಾ ಮಟ್ಟದ ಸ್ಥಿರ ಕಣ್ಗಾವಲು ತಂಡ, ವೀಡಿಯೋ ಕಣ್ಗಾವಲು ತಂಡ, ವಿಡಿಯೋ ವೀಕ್ಷಣೆ ತಂಡವನ್ನು ರಚಿಸಲಾಗಿದ್ದು, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹ್ಮದ್ ಜುಬೇರ ರಾಣಿಬೆನ್ನೂರು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಾಫರ- 9480461770 ಹಾಗೂ ಹಾವೇರಿ ಉಪ ವಿಭಾಗಾಧಿಕಾರಿ ಸತೀಶಕುಮಾರ (ಪರೀಕ್ಷಾರ್ಥ) ಅವರನ್ನು ನೇಮಿಸಲಾಗಿದೆ.
ಸದಾಚಾರ ಸಂಹಿತೆ ಅನುಷ್ಠಾನಕ್ಕಾಗಿ ಜಿಲ್ಲಾಮಟ್ಟದ ಸದಾಚಾರ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದಾರೆ. ಅಪರ ಜಿಲ್ಲಾಧಿಕಾರಿಗಳು ಸಂಚಾಲಕರಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಪಂ ಸಿಇಓ, ಹಾವೇರಿ ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರರು, ಜಿಲ್ಲಾ ಅಬಕಾರಿ ಅಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಸದಸ್ಯರಾಗಿದ್ದಾರೆ.
ಅದೇ ರೀತಿ ತಾಲೂಕು ಮಟ್ಟದಲ್ಲೂ ಈ ಸಮಿತಿ ರಚಿಸಲಾಗಿದ್ದು, ತಾಲೂಕು ತಹಸೀಲ್ದಾರರು ಅಧ್ಯಕ್ಷರಾಗಿದ್ದಾರೆ. ತಾಪಂ ಇಓ ಸಂಚಾಲಕರಾಗಿದ್ದು, ಆರಕ್ಷಕ ವೃತ್ತ ನೀರಿಕ್ಷಕ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು, ಉಪ ವಿಭಾಗ ಇಲಾಖೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ, ತಾಲೂಕು ಘಟಕ ಉಪ ಅಬಕಾರಿ ನಿರೀಕ್ಷಕ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ನಗರ, ಪಟ್ಟಣಗಳ ಆಯುಕ್ತರು ಅಥವಾ ಮುಖ್ಯಾಧಿಕಾರಿಗಳು ಸದಸ್ಯರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.