ಹೆಚ್ಚುವರಿ ಟಿಸಿಗೆ ರೈತರ ಮನವಿ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಮಾ. 25
ತಾಲೂಕಿಗೆ ಹೆಚ್ಚುವರಿಯಾಗಿ ಪೂರೈಸಬೇಕಾದ ವಿದ್ಯುತ್ ಪರಿವರ್ತಕಗಳನ್ನು (ಟಿಸಿ) ಕೂಡಲೇ ಒದಗಿಸುವಂತೆ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿ, ವಿಳಂಬವಾದಲ್ಲಿ ಹೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ತಾಲೂಕು ಘಟಕದ ಅಧ್ಯಕ್ಷ ರುದ್ರಗೌಡ್ರ ಕಾಡನಗೌಡ್ರ ಮಾತನಾಡಿ, ಬರಗಾಲದಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಕೊಳವೆ ಬಾವಿ ಮೂಲಕ ನೀರಾವರಿ ಹೊಂದಿರುವ ಕೆಲ ರೈತರು ಬೀಜೋತ್ಪಾದನೆಯಲ್ಲಿ ತೊಡಗಿದ್ದು, ಟಿಸಿಗಳಿಗೆ ಲೋಡ್ ಹೆಚ್ಚಾಗಿ ತೊಂದರೆ ಅನುಭವಿಸುವಂತಾಗಿದೆ ಎಂದರು.
ಹೆಚ್ಚುವರಿ ಟಿಸಿ ಒದಗಿಸುವಂತೆ ಇತ್ತೀಚೆಗೆ ರಾಣೆಬೆನ್ನೂರಿನಲ್ಲಿ ರಸ್ತೆ ತಡೆ ಹಾಗೂ ಪ್ರತಿಭಟನೆ ನಡೆಸಿದ್ದಾಗ ಹೆಸ್ಕಾಂನ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕಿಗೆ 5 ಟಿಸಿ ಒದಗಿಸುವ ಭರವಸೆ ನೀಡಿದ್ದರು. ಆದರೆ ಇದೀಗ ರಾಗ ಬದಲಿಸಿರುವ ಅವರು, ಟಿಸಿಗಳು ಬೇಕಾದರೆ ರೈತರೇ ಖುದ್ದಾಗಿ ಹುಬ್ಬಳ್ಳಿಗೆ ತೆರಳುವಂತೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿ ವರ್ಗಾಯಿಸಿ: ರಾಜ್ಯ ಸಮಿತಿ ಸದಸ್ಯ ಶಶಿಧರಸ್ವಾಮಿ ಛತ್ರದಮಠ ಮಾತನಾಡಿ, ರೈತರು ಸಮರ್ಪಕ ವಿದ್ಯುತ್.ಗೆ ಬೇಡಿಕೆ ಸಲ್ಲಿಸುತ್ತಿರುವುದು ಯಾವುದೇ ಐಷಾರಾಮಿ ಜೀವನ ನಡೆಸಲಿಕ್ಕಲ್ಲ. ಒಣಗುತ್ತಿರುವ ಬೆಳೆಗೆ ನೀರು ಒದಗಿಸಲು ವಿದ್ಯುತ್ ಅಗತ್ಯವಿದೆ. ಅಧಿಕಾರಿ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ರೈತರನ್ನು ಕಡೆಗಣಿಸಿದ್ದಾರೆ. ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು. ರೈತರಿಗೆ ನ್ಯಾಯ ಒದಗಿಸಬೇಕು. ದೇಶಕ್ಕೆ ಅನ್ನ ನೀಡುವ ರೈತರನ್ನು ಕಡೆಗಣಿಸುತ್ತಿರುವ ಹೆಸ್ಕಾಂಗೆ ತಕ್ಕಪಾಠ ಕಲಿಸಲಿದ್ದೇವೆ ಎಂದು ಎಚ್ಚರಿಸಿದರು.
ರೈತ ಸಂಘದ ಉಪಾಧ್ಯಕ್ಷ ಕೆ.ವಿ. ದೊಡ್ಡಗೌಡ್ರ, ಹಸಿರುಸೇನೆ ಅಧ್ಯಕ್ಷ ಗಂಗಣ್ಣ ಎಲಿ, ಧರ್ಮಪ್ಪ ಕುಡುಪಲಿ, ಮಂಜು ನಂದಿಹಳ್ಳಿ, ಸದಸ್ಯರಾದ ಅಶೋಕ ಕಲ್ಲಾಪುರ, ಮೌನೇಶ ಬಡಿಗೇರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

