ಎನ್ನೆಸ್ಸೆಸ್‌ದಿಂದ ಎಲ್ಲ ಸ್ತರದ ಅನುಭವ
ಕನ್ನಡಪ್ರಭ ವಾರ್ತೆ, ಹಾವೇರಿ, ಮಾ. 26
ಯಾವುದೇ ಶಿಬಿರದಲ್ಲಿ ಪಾಲ್ಗೊಳ್ಳುವುದಕ್ಕಿಂತ ಶಿಬಿರದಲ್ಲಿ ಕಲಿತ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಮೊರೆಪ್ಪೆನವರ ಹೇಳಿದರು.
ಇಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ನಡೆದ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಶಿಬಿರದಲ್ಲಿ ಪಾಲ್ಗೊಳ್ಳುವಾಗ ಕೇವಲ ಶೈಕ್ಷಣಿಕ ದೃಷ್ಟಿಯಿಂದ ಮಾತ್ರ ಪಾಲ್ಗೊಳ್ಳಬಾರದು. ಬದ್ಧತೆಯಿಂದ ಪಾಲ್ಗೊಂಡಾಗ ಮಾತ್ರ ಅಂತಹ ಶಿಬಿರಕ್ಕೆ ಅರ್ಥ ಬರುತ್ತದೆ. ಮನುಷ್ಯ ಪರಾವಲಂಬಿ ಜೀವಿಯಾಗಿದ್ದಾನೆ. ಹೀಗಾಗಿ ಸಮಾಜದಲ್ಲಿ ಪ್ರತಿಯೊಬ್ಬರು ಒಬ್ಬರನ್ನೊಬ್ಬರನ್ನು ಅವಲಂಬಿಸಲೇ ಬೇಕಾಗುತ್ತದೆ. ಸಮಾಜದಲ್ಲಿನ ಹಲವು ಸ್ತರದ ಜನರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಬಾಂಧವ್ಯ ಹೊಂದಿರಬೇಕಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯಂತಹ ಶಿಬಿರವು ಇಂತಹ ಎಲ್ಲಾ ಸ್ತರದ ಜನರ ಅನುಭವವನ್ನು ನೀಡುತ್ತದೆ. ಹೀಗಾಗಿ ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು ಎಂದರು.
ಧಾರವಾಡದ ಕವಿವಿಯ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ಧನವಂತ ಹಾಜವಗೋಳ ಮಾತನಾಡಿ, ಎನ್‌ಎಸ್‌ಎಸ್ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ಶಿಬಿರಾರ್ಥಿಗಳು ಸಹಪಾಠಿಗಳೊಂದಿಗೆ ಹೊಂದಾಣಿಕೆ, ಸಹಕಾರ, ಸಹಬಾಳ್ವೆಯಿಂದ ಕೂಡಿರಬೇಕಾಗುತ್ತದೆ. ಈ ಗುಣವನ್ನು ಕೇವಲ ಶಿಬಿರಕ್ಕೆ ಸೀಮಿತವಾಗಿರಿಸದೇ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಡಾ. ಟಿ.ಎಂ.ಭಾಸ್ಕರ, ಪ್ರಾಧ್ಯಾಪಕರಾದ ಸಂತೋಷಕುಮಾರ್ ಎಂ. ಕಟಕೆ, ಲೋಕೇಶ ಸಿ.ಎಸ್., ಡಾ. ಸುರೇಶ ದೊಡ್ಮನಿ, ರಮೇಶ ತೆವರಿ, ವಿ.ಎಸ್. ಕೇಲೂರ ಇದ್ದರು. ಅರ್ಚನಾ ಸುಳ್ಳದ ಪ್ರಾರ್ಥಿಸಿದರು. ಲಿಂಗರಾಜ ಸ್ವಾಗತಿಸಿದರು. ದಾವೂದ್ ನದಾಫ್ ಪರಿಚಯಿಸಿದರು. ಹನುಮಂತಗೌಡ ಪಾನಗಟ್ಟಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

