ಬಳ್ಳಾರಿ ಹೇಳಿಕೆಗೆ ಶೆಟ್ಟರ ತಿರುಗೇಟು
ಬ್ಯಾಡಗಿ: ಜಿಪಂ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ ಕ್ಷುಲ್ಲಕ ರಾಜಕಾರಣ ಮಾಡದೆ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳತ್ತ ಚಿಂತಿಸುವಂತೆ ಪುರಸಭೆ ಸದಸ್ಯ ಮುರಿಗೆಪ್ಪ ಶೆಟ್ಟರ ಸಲಹೆ ಮಾಡಿದ್ದಾರೆ.
ಪುರಸಭೆಗೆ ಚುನಾಯಿತ ಕೆಜೆಪಿ ಸದಸ್ಯರು ಪ್ರಚಾರಕ್ಕಾಗಿ ಮನವಿ ಸಲ್ಲಿಸುತ್ತಿದ್ದಾರೆ ಎಂದು ವಿರೂಪಾಕ್ಷಪ್ಪ ಆರೋಪಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶೆಟ್ಟರ, ಸಾರ್ವಜನಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಚಳವಳಿ, ಪ್ರತಿಭಟನೆ ಮಾಡಲು ಹಾಗೂ ಮನವಿ ಸಲ್ಲಿಸಲು ಕಾನೂನಿನಲ್ಲಿ ಪ್ರತಿಯೊಬ್ಬರಿಗೂ ಅವಕಾಶವಿದೆ. ಅದು ಸಾಂವಿಧಾನಿಕ ಹಕ್ಕು. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದರು. ಪಟ್ಟಣದಲ್ಲಿ ಒಟ್ಟಾರೆಯಾಗಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಮನವಿ ಸಲ್ಲಿಸಿದ್ದೇವೆಯೇ ಹೊರತು ಇದರಲ್ಲಿ ಸದಸ್ಯರ ವೈಯಕ್ತಿಕ ಹಿತಾಸಕ್ತಿಯಿಲ್ಲ. ಸಾರ್ವಜನಿಕ ಸೇವೆಯಲ್ಲಿರುವ ನಮಗೆ ಮನವಿ ಕೊಡುವುದೂ ಗೊತ್ತು, ಅಧಿಕಾರಿಗಳಿಂದ ಕೆಲಸ ಮಾಡಿಸಿಕೊಳ್ಳುವುದೂ ಗೊತ್ತು. ಜಿಪಂ ಸದಸ್ಯರು ತಮ್ಮ ಕ್ಷೇತ್ರದ ಕಡೆಗೆ ಗಮನ ನೀಡುವಂತೆ ಮುರಿಗೆಪ್ಪ ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

