ಹಾವೇರಿ

ಭ್ರೂಣ ಹತ್ಯೆ ತಡೆಗೆ ಜಾಗೃತಿ ಅಗತ್ಯ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಮಾ. 27
ಭ್ರೂಣಹತ್ಯೆ ತಡೆಗಟ್ಟುವಲ್ಲಿ ಜನಸಾಮಾನ್ಯರ ಸಹಕಾರ ಅಗತ್ಯವೆಂದು ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ಕದರಮಂಡಲಗಿ ಹೇಳಿದರು. ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಯುಕ್ತವಾಗಿ ಸುಣಕಲ್ಲಬಿದರಿ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಸ್ವಯಂಸೇವಾ ಕಾರ್ಯಕರ್ತರಿಗೆ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಲು ಭ್ರೂಣ ಹತ್ಯೆ ಹಾಗೂ ಪ್ರಸವಪೂರ್ವ ಲಿಂಗಪತ್ತೆ  ಕ್ರಿಯೆ ಮುಖ್ಯ ಕಾರಣವಾಗಿದೆ. ಅದನ್ನು ನಿಲ್ಲಿಸುವುದಕ್ಕಾಗಿ ಜಾರಿಯಲ್ಲಿರುವ ಕಾನೂನಿನ ಕುರಿತು ಸರ್ವರೂ ಅರ್ಥೈಸಿಕೊಳ್ಳಬೇಕು. ಸಮಾಜದಲ್ಲಿನ ಜನರಲ್ಲಿ ಆರೋಗ್ಯದ ಕುರಿತು ಅರಿವು ಮೂಡಿಸುವ ಆಶಾ ಕಾರ್ಯಕರ್ತೆಯರು ಸ್ವಯಂ ಸೇವಾ ಸಂಸ್ಧೆಯ ಮುಖಂಡರು, ಪ್ರಸವಪೂರ್ವ ಭ್ರೂಣ ಹತ್ಯೆ ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಹಾಗೂ ಕಾನೂನಿನ ಕುರಿತು ಜಾಗೃತಿ ಮೂಡಿಸಬೇಕೆಂದು ಸಲಹೆ ಮಾಡಿದರು.
ಉಪನ್ಯಾಸಕರಾಗಿ ಆಗಮಿಸಿದ್ದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಫ್.ಕುರವಳ್ಳಿ ಮಾತನಾಡಿ, ಹೆಣ್ಣು-ಗಂಡೆಂಬ ಭೇದವನ್ನು ಮರೆಯಬೇಕು ಅವೆರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದರು. ಸುಣಕಲ್ಲಬಿದರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಸರೋಜಾ ಪಾಟೀಲ, ಪರಮೇಶ ದಾಸರ, ಎಸ್.ಎಸ್. ಕಬ್ಬಿಣಕಂತಿಮಠ, ಡಿ.ಎಂ. ಕಳಸಪ್ಪನವರ, ಎಸ್.ಎಸ್. ಕುಶಲದ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.