ಹಾವೇರಿ

ಸಶಕ್ತ ಸಮಾಜ: ಮಹಿಳೆ ಪಾತ್ರ ಮಹತ್ವ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಮಾ. 27
ಸ್ವಾಭಿಮಾನಿ ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಜಂಬಗಿ ಹೇಳಿದರು.
ಇಲ್ಲಿನ ಶಿಶುವಿಹಾರ ಕೇಂದ್ರದಲ್ಲಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಗರಸಭೆಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು. ರಾಜಕೀಯವಾಗಿ ದೇಶದ ಸರ್ವತೋಮುಖ ಅಭಿವೃದ್ಧಿ ಮಹಿಳೆಯರ ಕೈಯಲ್ಲಿದೆ ಎಂದು ಹೇಳುವ ಅನೇಕ ಪುರುಷರು, ಮಹಿಳೆಗೆ ಕಾನೂನು ಪ್ರಕಾರ ಸಿಗಬೇಕಾಗಿರುವ ಹಕ್ಕು ಬಾಧ್ಯತೆಗಳನ್ನು ಹಾಗೂ ಸ್ಧಾನಮಾನಗಳನ್ನು ಕಲ್ಪಿಸಿಕೊಡುವಲ್ಲಿ ಹಿಂದೆ ಬಿದ್ದಿರುವ ಕಾರಣ, ಮಹಿಳೆಯರು ಸಂಘಟಿತರಾಗಿ ಹೋರಾಟ ಮಾಡಬೇಕು ಎಂದರು.
ಕೇವಲ ಹೇಳಿಕೆಗಳ ಮೂಲಕ ಕಾಲಹರಣ ಮಾಡುವ ರಾಜಕಾರಣಿಗಳು, ಎಲ್ಲಿಯವರೆಗೆ ಮಹಿಳೆಗೆ ನ್ಯಾಯೋಚಿತವಾಗಿ ಸೂಕ್ತ ಸ್ಥಾನಮಾನಗಳನ್ನು ಕಲ್ಪಿಸಿಕೊಡದಿದ್ದಲ್ಲಿ ಸಂಘಟನೆಗಳ ಮೂಲಕ ಹೋರಾಟ ನಡೆಸಿ ತಮ್ಮ ಹಕ್ಕನ್ನು ಪಡೆಯಲು ಹಿಂಜರಿಯುವುದಿಲ್ಲ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಸದಸ್ಯೆ ರತ್ನಾ ಪುನೀತ ಮಾತನಾಡಿ, ಮಹಿಳೆಯರ ಮತ್ತು ಮಹಿಳಾ ಸಂಘಗಳ ಅಭಿವೃದ್ಧಿಗೆ ಪಕ್ಷಭೇದ ಮರೆತು ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಗಾಯತ್ರಮ್ಮ ಕುರುವತ್ತಿ, ಗೀತಾ ಜಂಬಗಿ, ಶಕುಂತಲಾ ಜಂಬಗಿ, ದ್ರಾಕ್ಷಾಯಣಮ್ಮ ಹರಪನಹಳ್ಳಿ ಮಾತನಾಡಿದರು. ಅಧ್ಯಕ್ಷತೆಯನ್ನು ಅನ್ನಪೂರ್ಣಮ್ಮ ದಾನಪ್ಪನವರ ವಹಿಸಿದ್ದರು. ಸರಳಾ ಜಂಬಗಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.