ಹಾವೇರಿ: ನಾಳೆ ಮತದಾರರ ಜಾಗೃತಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಹಾವೇರಿ, ಮಾ. 28
ಮತದಾರರಲ್ಲಿ ಜಾಗೃತಿ ಮೂಡಿಸಿ, ಅವರು ಚುನಾವಣೆಯಲ್ಲಿ ಭಾಗವಹಿಸುವಂತೆ ಮಾಡಲು ಭಾರತ ಚುನಾವಣಾ ಆಯೋಗದ ಸೂಚನೆಯಂತೆ, ಜಿಲ್ಲಾಡಳಿತ ಜಿಲ್ಲೆಯ ವಿವಿಧೆಡೆ ಉಪನ್ಯಾಸ, ಜಾಥಾ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮ ಆಯೋಜಿಸಿದೆ.
ಮಾ. 30ರಂದು ಬೆಳಗ್ಗೆ 10.30ಕ್ಕೆ ಹಿರೇಕೆರೂರು ತಾಲೂಕು ಹಂಸಭಾವಿಯಲ್ಲಿ ಮಹಾಂತಸ್ವಾಮಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಉದ್ಘಾಟಿಸಲಿದ್ದು, ಜಿಪಂ ಸಿಇಓ ಹಾಗೂ ಮತದಾರರ ಜಾಗೃತಿ ಕುರಿತ ಜಿಲ್ಲಾ ಮಟ್ಟದ ಸಮಿತಿ ಅಧ್ಯಕ್ಷ ಉಮೇಶ ಕುಸುಗಲ್ಲ ಅಧ್ಯಕ್ಷತೆ ವಹಿಸುವರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಕೊಡ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೆನ್ನಮ್ಮ ಹೊಳಿಹೊಸೂರ ಪಾಲ್ಗೊಳ್ಳುವರು.
ಹಿರೇಕೆರೂರು ತಹಸೀಲ್ದಾರ ತುಷಾರ ಹೊಸೂರ ಉಪನ್ಯಾಸ ನೀಡುವರು ಎಂದು ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಸಿ.ಪಿ. ಮಾಯಾಚಾರಿ ತಿಳಿಸಿದ್ದಾರೆ.
ಏ. 1ರಂದು ಬೆಳಗ್ಗೆ 10.30ಕ್ಕೆ ಹಂಸಭಾವಿಯಲ್ಲಿ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ಜಾಥಾ ನಡೆಸಿ, ಮತದಾನದ ಮಹತ್ವ ಸಾರುವ ಪ್ರಚಾರ ಫಲಕಗಳನ್ನು ಪ್ರದರ್ಶಿಸುವರು.
ಪಟ್ಟಿಯಲ್ಲಿ ಮತದಾರರ ಹೆಸರು ನೋಂದಣಿ ಬಗ್ಗೆ ಅರಿವು ಮೂಡಿಸಲು ಮನೆ ಭೇಟಿ ಕೈಗೊಳ್ಳುವರು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

