ಹಾವೇರಿ

ಸಮುದಾಯದಿಂದ ಸಂಪನ್ಮೂಲ ಸೃಷ್ಟಿಸಿ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಮಾ. 28
ಸಂಪನ್ಮೂಲಗಳನ್ನು ಸೃಷ್ಟಿಸಿಕೊಳ್ಳುವ ಸಾಮರ್ಥ್ಯವನ್ನು ಸಮುದಾಯಗಳಲ್ಲಿ ತುಂಬುವ ಅಗತ್ಯವಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಎಂಬಿಎ ವಿಭಾಗದ ಪ್ರಾಧ್ಯಾಪಕ ಡಾ೤ ಉದಯಕುಮಾರ ಇರ್ವತ್ತೂರು ಅಭಿಪ್ರಾಯಪಟ್ಟರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಸಂಶೋಧನ ಕೋರ್ಸ್ ವರ್ಕ್ನ ಮ್ಯಾನೇಜ್ಮೆಂಟ್ ಅಧ್ಯಯನ ವಿಷಯ ಕುರಿತು ಉಪನ್ಯಾಸ ನೀಡಿದರು.
ಮ್ಯಾನೇಜ್ಮೆಂಟ್ನಿಂದ ಆರ್ಥಿಕ ಸುಧಾರಣೆ ಪ್ರಸಕ್ತ ಜಾಗತಿಕ ಮಾರುಕಟ್ಟೆ ವ್ಯಾಪಕವಾಗಿ ಬೆಳೆಯುತ್ತಿದೆ. ಅದನ್ನು ನಿಯಂತ್ರಿಸುವುದು ಮತ್ತು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುವುದು ಮುಖ್ಯ. ಆದರೆ, ಆರ್ಥಿಕತೆ ಅರ್ಥಮಾಡಿಕೊಳ್ಳುವುದು ಸಾಮಾನ್ಯನಿಂದ ಸಾಧ್ಯವಿಲ್ಲ. ಆ ಕೆಲಸವನ್ನು ಮ್ಯಾನೇಜ್ಮೆಂಟ್ ಅಧ್ಯಯನ ಸಾಧ್ಯವಾಗಿಸಬೇಕು.
ಬೆಳೆಯುತ್ತಿರುವ ತಂತ್ರಜ್ಞಾನವನ್ನು ಉತ್ಪಾದನಾ ವ್ಯವಸ್ಥೆ ಸಂಪೂರ್ಣ ಬಳಸಿಕೊಂಡಲ್ಲಿ ಆರ್ಥಿಕ ಕ್ಷೇತ್ರ ಉತ್ತಮಪಡಿಸಲು ಸಾಧ್ಯ. ಆ ನಿಟ್ಟಿನಲ್ಲಿ ಮ್ಯಾನೇಜ್ಮೆಂಟ್ ಕ್ಷೇತ್ರದ ಅಧ್ಯಯನದಲ್ಲಿ ಗಂಭೀರವಾಗಿ ತೊಡಗಿಕೊಳ್ಳಬೇಕೆಂದು ಸಂಶೋಧಕರಿಗೆ ಕಿವಿಮಾತು ಹೇಳಿದರು.
ಪ್ರೊ. ಚಂದ್ರ ಪೂಜಾರಿ, ಸಂಶೋಧನಾರ್ಥಿಗಳು ತಾವು ಕೈಗೊಳ್ಳಲಿರುವ ಉದ್ದೇಶಗಳಿಗೆ ತಕ್ಕಂತೆ ಮಾಹಿತಿ ವಿಶ್ಲೇಷಣೆ ಮಾಡಿದಾಗ ಮಾತ್ರ ಗುಣಮಟ್ಟದ ಸಂಶೋಧನೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ತುಂಬ ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದರು. ಸಂಗಮೇಶ ಗಣಿ ನಿರ್ವಹಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.