ಕ್ಷಯ ರೋಗ ಕುರಿತು ಜನ ಜಾಗೃತಿ ಜಾಥಾ
ಹಾನಗಲ್ಲ: ಪಟ್ಟಣದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಲೋಕಪ್ರಿಯಾ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಸೇವಾ ಸಂಸ್ಥೆ ಹಾಗೂ ಕ್ಯಾಥೋಲಿಕ್ ಹೆಲ್ತ್ ಅಸೋಸಿಯೇಶನ್ ಸಂಘಟನೆಗಳು ಮತ್ತು ದಯಾನಂದ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲೀಡ್ಸ್ ಸಂಸ್ಥೆಯ ನಿರ್ದೇಶಕ ಶಂಕರ ಅಂಬಿಗೇರ, ಕ್ಷಯರೋಗ ನಮ್ಮ ದೇಶವನ್ನು ಅಧಿಕವಾಗಿ ಕಾಡುತ್ತಿದ್ದು, ಇದರ ಸಮಸ್ಯೆ ಎದುರಿಸುತ್ತಿರುವ ರಾಷ್ಟ್ರಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಪ್ರತಿ ವರ್ಷ 18ಲಕ್ಷ ಜನ ಈ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಪ್ರತಿದಿನ ಸರಾಸರಿ 500 ಜನರಿಗೆ ಸೋಂಕು ಹರಡುತ್ತಿದ್ದು, ಒಂದು ವರ್ಷಕ್ಕೆ 3 ಲಕ್ಷ ಜನ ಮರಣ ಹೊಂದುತ್ತಿದ್ದಾರೆ. ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಲು ಮುಂಜಾಗ್ರತೆ ಕೈಗೊಳ್ಳಬೇಕು ಎಂದರು. ಜನಜಾಗೃತಿ ಜಾಥಾದಲ್ಲಿ ಲೀಡ್ಸ್ ಸಂಸ್ಥೆಯ ಪದಾಧಿಕಾರಿಗಳಾದ ವಿಜಯ ಬೇದ್ರೆ, ಸುರೇಶ ಬಾರ್ಕಿ, ದಯಾನಂದ ಪ್ರೌಢ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಏ. 1ರಂದು ಮೈಲಾರ ಮಹದೇವ ಪುಣ್ಯಸ್ಮರಣೆ
ಬ್ಯಾಡಗಿ: ಹುತಾತ್ಮ ಮಹದೇವ ಮೈಲಾರ ಅವರ 70ನೇ ಪುಣ್ಯತಿಥಿ ಹಾಗೂ ಭಾವನಾತ್ಮಕ ನುಡಿನಮನದ ಶ್ರದ್ಧಾಂಜಲಿ ಕಾರ್ಯಕ್ರಮ ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ಏ. 1ರಂದು ಜರುಗಲಿದೆ. ಅಂದು ಮುಂಜಾನೆ 8.30ಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ. 9 ಘಂಟೆಗೆ ಮಹದೇವ ಮೈಲಾರ ಅವರ ಭಾವಚಿತ್ರದ ಮೆರವಣಿಗೆ ಸಕಲ ವಾದ್ಯ ವೈಭವಗಳೊಂದಿಗೆ ಗ್ರಾಮದಲ್ಲಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ. ಸಂಜೆ 6 ಘಂಟೆಗೆ ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರು ಕೋರಿದ್ದಾರೆ.
ಕರವೇ ಕಾರ್ಯಾಧ್ಯಕ್ಷರಾಗಿ ಬಿಜಾಪುರ ನೇಮಕ
ಹಾವೇರಿ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ)ದ ಹಾವೇರಿ ಜಿಲ್ಲೆಯ ಕಾರ್ಯಾಧ್ಯಕ್ಷರಾಗಿ ವೆಂಕಟೇಶ ದುರುಗಪ್ಪ ಬಿಜಾಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ನಾಗರಾಜ ಮಳಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

