ಹಾವೇರಿ

ಪ್ರತಿಭಾವಂತರಿಗೆ ಉದ್ಯೋಗಾವಕಾಶ: ಕಬ್ಬಿಣಕಂಥಿಮಠ

Published On :

ಹಿರೇಕೆರೂರು: ವಿದ್ಯಾರ್ಥಿಗಳು ವಿದ್ಯುನ್ಮಾನ ವಾಣಿಜ್ಯ ವಿಷಯದ ಕುರಿತು ಪರಿಪೂರ್ಣ ಮಾಹಿತಿ ಪಡೆದು ಶಿಸ್ತುಬದ್ಧ ಅಧ್ಯಯನ ನಡೆಸುವ ಮೂಲಕ ಉತ್ತಮ ಅಂಕ ಗಳಿಸುವ ಪ್ರತಿಭಾವಂತರಿಗೆ ಹೆಚ್ಚಿನ ಉದ್ಯೋಗವಕಾಶಗಳು ಇವೆ ಎಂದು ಉಪನ್ಯಾಸಕ ಪಿ.ಎಸ್. ಕಬ್ಬಿಣಕಂಥಿಮಠ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾಣಿಜ್ಯ ದಿನ ಹಾಗೂ ಸರಸ್ವತಿ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ವಾಣಿಜ್ಯ ವಿಭಾಗದಿಂದ ಪದವಿ ಪಡೆದ ವಿದ್ಯಾರ್ಥಿಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯವಿವೆ. ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ, ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಪಠ್ಯದ ಜತೆಗೆ ಸಹಪಠ್ಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ೤ ಆರ್.ಎಸ್. ಚಕ್ಕಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಬಳಿಕ ಉನ್ನತ ಶಿಕ್ಷಣವನ್ನೂ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಕೇವಲ ಪುಸ್ತಕದ ಮೇಲೆ ಅವಲಂಬಿತರಾಗದೆ ಎಲ್ಲ ಕ್ಷೇತ್ರಗಳಲ್ಲೂ ಜ್ಞಾನವೃದ್ಧಿ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ವಿದ್ಯಾರ್ಥಿಗಳಾದ ಪ್ರಕಾಶ ಅರಳಿಕಟ್ಟಿ, ಶ್ವೇತಾ ಕೊತ್ವಾಲ ಅನಿಸಿಕೆ ವ್ಯಕ್ತಪಡಿಸಿದರು. ಕಲಾವಿದ ಹಾಲೇಶ ಗುಂಗೇರ ಜಾನಪದ ಗೀತೆಗಳನ್ನು ಹಾಡಿ ರಂಜಿದರು. ಕಾಲೇಜಿನ ಪ್ರಾಚಾರ್ಯ ಎಲ್.ಎಂ. ಪೂಜಾರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಪರಶುರಾಮ ಚಲವಾದಿ, ರಾಜು ಗೋವಿಂದಪ್ಪನವರ, ವಜ್ರಕುಮಾರ ಉಪ್ಪಾರ, ಶೈಲಜಾ ಪೂಜಾರ, ಬೀರಪ್ಪ ಲಮಾಣಿ ಹಾಜರಿದ್ದರು. ಪ್ರವೀಣ ಕುರವತ್ತೇರ ನಿರೂಪಿಸಿದರು. ಕಿರಣ ಭಜಂತ್ರಿ ಸ್ವಾಗತಿಸಿದರು. ಅನಿಲ ಹಲವಾಗಿಲ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.